ಬೆಳಗಾವಿ – ಬೆಳಗಾವಿ ಜಿಲ್ಲೆಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲವನ್ನುಂಟು ಮಾಡಿದ್ದ ಪಿಎಲ್ ಡಿ ಬ್ಯಾಂಕಿನ ಚುನಾವಣೆ ಮುಗಿದ ಬೆನ್ನಲ್ಲಿಯೇ ಈಗ ಬೆಳಗಾವಿ ಎಪಿಎಂಸಿ ಅಧ್ಯಕ್ಷ ಉಪಾದ್ಯಕ್ಷರ ಚುನಾವಣೆ ಅಕ್ಟೋಬರ್ 15 ರಂದು ನಡೆಯಲಿದೆ.ಈ ಚುನಾವಣೆ ಮೊತ್ತೊಂದು ರಾಜಕೀಯ ಕದನಕ್ಕೆ ಕಾರಣವಾಗಬಹುದೇ ಎನ್ನುವ ಪ್ರಶ್ನೆ ಎಲ್ಲರನ್ನು ಕಾಡುತ್ತಿದೆ
ಬೆಳಗಾವಿ ಎಪಿಎಂಸಿ ಯಲ್ಲಿ ಒಟ್ಟು 14 ಜನ ಚುನಾಯಿತ ಸದಸ್ಯರು 3 ಜನ ನಾಮನಿರ್ದೇಶಿತ ಸದಸ್ಯರಿದ್ದಾರೆ ಒಟ್ಟು 17 ಜನ ಸದಸ್ಯರ ಸಂಖ್ಯೆ ಹೊಂದಿರುವ ಎಪಿಎಂಸಿಯಲ್ಲಿ 10 ಜನ ಕಾಂಗ್ರೆಸ್ ಸದಸ್ಯರಿದ್ದಾರೆ ಹೀಗಾಗಿ ಕಾಂಗ್ರೆಸ್ ಬಲ ಹೆಚ್ಚಾಗಿದ್ದು ಈ ಚುನಾವಣೆಯಲ್ಲಿ ರಾಜಿಸೂತ್ರದ ಮೂಲಕ ಒಮ್ಮತದ ಅಭ್ಯರ್ಥಿ ಯನ್ನು ಆಯ್ಕೆ ಮಾಡಲು ಕಾಂಗ್ರೆಸ್ ಪಕ್ಷದ ನಾಯಕರು ಸೂಚಿಸಿರುವ ಹಿನ್ನಲೆಯಲ್ಲಿ ಜಾರಕಿಹೊಳಿ ಸಹೋದರರ ನಡೆ ಏನು ? ಲಕ್ಷ್ಮೀ ಹೆಬ್ಬಾಳಕರ ಅವರು ರಾಜಿ ಸಂಧಾನಕ್ಕೆ ಒಪ್ಪುತ್ತಾರೆಯೋ ? ಎನ್ನುವ ಪ್ರಶ್ನೆ ಎಲ್ಲರನ್ನು ಕಾಡುತ್ತಿದೆ
ಪಿಎಲ್ ಡಿ ಬ್ಯಾಂಕಿನ ಚುನಾವಣೆಯ ನಂತರ ಎಚ್ಚರಗೊಂಡಿರುವ ಕಾಂಗ್ರೆಸ್ ನಾಯಕರು ಬೆಳಗಾವಿ ಎಪಿಎಂಸಿ ಚುನಾವಣೆ ಮೊತ್ತೊಂದು ಸುತ್ತಿನ ರಾಜಕೀಯ ಕದನಕ್ಕೆ ಕಾರಣವಾಗಬಾರದು ಎಂದು ಮುಂಜಾಗ್ರತೆ ವಹಿಸಿ ಜಾರಕಿಹೊಳಿ ಸಹೋದರರು ಮತ್ತು ಲಕ್ಷ್ಮೀ ಹೆಬ್ಬಾಳಕರ ಇಬ್ಬರ ಪರವಾಗಿರುವ ಹಿರಿಯ ಕಾಂಗ್ರೆಸ್ ನಾಯಕ ಯುವರಾಜ ಕದಂ ಅವರನ್ನು ಅದ್ಯಕ್ಷರನ್ನಾಗಿ ಆಯ್ಕೆ ಮಾಡುವ ಮೂಲಕ ರಾಜಕೀಯ ಕದನಕ್ಕೆ ಬ್ರೆಕ್ ಹಾಕಲು ಕಾಂಗ್ರೆಸ್ ನಾಯಕರು ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ
ಚುನಾವಣೆ ಸೋಮವಾರ ನಡೆಯಲಿದ್ದು ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ,ಸತೀಶ ಜಾರಕಿಹೊಳಿ,ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಮೀಟಿಂಗ್ ಮಾಡಿ ಅದ್ಯಕ್ಷ ಉಪಾದ್ಯಕ್ಷರ ಹೆಸರನ್ನು ಸೆಟಿಂಗ್ ಮಾಡ್ತಾರೆ ಎಂದು ತಿಳಿದು ಬಂದಿದೆ
ಜಾರಕಿಹೊಳಿ ಸಹೋದರರು ಮತ್ತು ಲಕ್ಷ್ಮೀ ಹೆಬ್ಬಾಳಕರ ನಡುವಿನ ಕದನಕ್ಕೆ ವಿರಾಮ ದೊರಕಿದ್ದರೆ ಬೆಳಗಾವಿ ಎಪಿಎಂಸಿ ಚುನಾವಣೆ ಆರಾಮವಾಗಿ ನಡೆಯುತ್ತದೆ ಕದನ ಮುಂದುವರೆದರೆ ಬೆಳಗಾವಿ ಎಪಿಎಂಸಿ ಚುನಾವಣೆ ರಾಜ್ಯ ರಾಜಕಾರಣದ ಅತಂತ್ರಕ್ಕೆ ಕಾರಣವಾಗಲಿದೆ