Breaking News

ಪಾಲಿಟಿಕ್ಸ್ ದಲ್ಲಿ ಈಗಷ್ಟೇ ಕಣ್ತೆರೆದ ಗುಬ್ಬಿ ನಾನು.ಸತೀಶ ಹೇಳಿಕೆಗೆ ಪ್ರತಿಕ್ರಿಯೆ ನೀಡುವಷ್ಟು ದೊಡ್ಡವಳು ನಾನಲ್ಲ


ಬೆಳಗಾವಿ:

ಮುಂಬರುವ ಚುನಾವಣೆ ಗಮನದಲ್ಲಿಟ್ಟುಕೊಂಡು ಬೂತ್ ಮಟ್ಟದ ಕಾರ್ಯಾಗಾರ ಹಾಗೂ ಕಾಂಗ್ರೆಸ್ ಸಮಾವೇಶವನ್ನು ಸೆ.14 ರಂದು ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದ ಕೆಪಿಸಿಸಿ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ಪತ್ರಿಕಾಗೊಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಕಾಂಗ್ರೆಸ್ ಕಾರ್ಯಕರ್ತರನ್ನು ಬೂತ್ ಪಟ್ಟದಲ್ಲಿ ಬಲಪಡಿಸಲು ಕಾರ್ಯಕ್ರಮ ಹಾಗೂ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಎಐಸಿಸಿ ಕಾರ್ಯದರ್ಶಿ ಸತೀಶ್ ಜಾರಕಿಹೊಳಿ, ಇಂಧÀನ ಸಚಿವ ಡಿ.ಕೆ.ಶಿವಕುಮಾರ, ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಎಸ್.ಆರ್.ಪಾಟೀಲ ಸೇರಿದಂತೆ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಕಾಂಗ್ರೆಸ್ ಯುತ್ ಕಾರ್ಯಕರ್ತರು ಸುಮಾರು 2-3 ಸಾವಿರ ಬೈಕ್ ರ್ಯಾಲಿಯನ್ನು ಬೆಳಗವಿ ಸಾಂಬ್ರಾವಿಮಾನ ನಿಲ್ದಾಣದಿಂದ ಪ್ರಾರಂಭವಾಗಿ ಸುಳೇಭಾವಿ ಕಾರ್ಯಕ್ರಮದ ವೇದಿಕೆವರೆಗೆ ಆಗಮಿಸಲಿದೆ. ಈ ಸಮಾವೇಶದಲ್ಲಿ ಸುಮಾರು 15-20 ಸಾವಿರ ಜನ ಬರುವ ನಿರೀಕ್ಷೆ ಇದೆ ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್‍ಗೆ ಪ್ರಚಾರದ ಕೊರತೆ ಇದೆ. ಆದ್ದರಿಂದ ಮನೆ ಮನೆಗೆ ಹೋಗಿ ಕಾಂಗ್ರೆಸ್ ಸರಕಾರದ ಯೋಜನೆಗಳನ್ನು ತಲುಪಿಸುವ ಕಾರ್ಯ ಮಾಡಿ ಪ್ರಚಾರ ಮಾಡಲಾಗುವುದು. ಈ ಸಲ ಕಾಂಗ್ರೆಸ್ ಅಧಿಕಾರಕ್ಕೆ ತರಲು ಪ್ರಯತ್ನಿಸಲಾಗುವುದು. ಗ್ರಾಮೀಣ ಮತಕ್ಷೇತ್ರದಲ್ಲಿ ಯಾರಿಗೆ ಟಿಕೇಟ್ ನೀಡಬೇಕು ಬೇಡವೋ ಅದು ಹೈ ಕಮಾಂಡ್‍ಗೆ ಬಿಟ್ಟ ವಿಚಾರ. ನಾನೇನು ಹೆಚ್ಚಿಗೆ ಹೇಳುವುದಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ದುಡಿಯುತ್ತಿರುತ್ತೇನೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ತಾಪಂ ಅಧ್ಯಕ್ಷ ಶಂಕರಗೌಡ ಪಾಟೀಲ ಸೇರಿದಂತೆ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

ಈಗಷ್ಟೇ ರಾಜಕೀಯದಲ್ಲಿ ಕಣ್ತೆರೆದ ಗುಬ್ಬಿ ನಾನು

ಇತ್ತೀಏಚಿಗೆ ಸತೀಶ್ ಜಾರಕಿಹೊಳಿ ಅವರು ಸೀರೆ ಹಂಚಿಕೆ ವಿಚಾರದಲ್ಲಿ ನನ್ನ ಹೆಸರು ತೆಗೆದುಕೊಂಡಿಲ್ಲ. ಕಾಂಗ್ರೆಸ್‍ನಲ್ಲಿ ಯಾವುದೇ ವೈಮನಸ್ಸಿಲ್ಲ. ಅಂತಹದ್ದೇನದರೂ ವೈಮನಸ್ಸಿದ್ದರೆ ನಾವು ಕುಳಿತುಕೊಂಡು ಚರ್ಚಿಸಿ ಬಗೆಹರಿಸಿಕೊಳ್ಳುತ್ತೇವೆ. ಕರ್ಯಕರ್ತರಲ್ಲಿ ಗೊಂದಲ ಬೇಡ. ಎಂದು ಲಕ್ಷ್ಮೀ ಹೆಬ್ಬಾಳಕರ ಹೇಳಿದರು
ಸತೀಶ ಜಾರಕಿಹೊಳಿ ನಮ್ಮ ಪಕ್ಷದ ನಾಯಕರು ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವಷ್ಟು ದೊಡ್ಡವಳೂ ನಾನಲ್ಲ ರಾಜಕೀಯ ಕ್ಷೇತ್ರದಲ್ಲಿ ಈಗಷ್ಟೇ ಕಣ್ತೆರೆದ ಗುಬ್ಬಿ ನಾನು ಎಂದು ಹೆಬ್ಬಾಳಕರ ಹೇಳಿದರು
ಬೆಳಗಾವಿ ಗ್ರಾಮೀಣ ಕ್ಷೇತ್ರದ ಟಿಕೆಟ್ ನಿಡುವದು ಅದನ್ನು ಅಂತಿಮಗೊಳಿಸುವದು ಹೈಕಮಾಂಡಗೆ ಬಿಟ್ಟ ವಿಚಾರ ಎರಡು ಬಾರಿ ಚುನಾವಣೆ ಸೋತಿದ್ದೇನೆ ಈ ಬಾರಿ ಕ್ಷೇತ್ರದ ಜನ ನನ್ನ ಕೈಹಿಡಿಯುತ್ತಾರೆ ಎನ್ನುವ ವಿಶ್ವಾಸ ನನಗಿದೆ ಈ ಬಾರಿ ನಾನು ಓವರ್ ಕಾನ್ಫಿಡನ್ಸ ಆಗಿಲ್ಲ ಕ್ಷೇತ್ರದ ಜನರನೆ ಮನೆಗೆ ಹೋಗುತ್ತಿದ್ದೇನೆ ಅವರ ಸಮಸ್ಯೆಗಳಿಗೆ ಕೈಲಾದ ಮಟ್ಟಿಗೆ ಸಹಾಯ ಮಾಡುತ್ತಿದ್ದೇನೆ ಎಂದು ಹೆಬ್ಬಾಳಕರ ತಿಳಿಸಿದರು

Check Also

ಎರಡು ಗ್ರಾಮಗಳಿಗೆ ದೀಪಾವಳಿ ಗೀಫ್ಟ್ ಕೊಟ್ಟ ಸಾಹುಕಾರ್….!!

ತಿಗಡಿ ಮತ್ತು ಅವರಾದಿ ಗ್ರಾಮಗಳಿಗೆ ದಸರಾ ಹಬ್ಬದ ಗಿಫ್ಟ್ ಕೊಟ್ಟ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಗಡಿ, ಅವರಾದಿಗೆ ಪದವಿ ಪೂರ್ವ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.