ಬೆಳಗಾವಿ- ಬೆಳಗಾವಿ ಜಿಲ್ಲಾ ಪಂಚಾಯತಿ ವಿಭಾಗದಲ್ಲಿ ಒಂಬತ್ತು ಚಿಕ್ಕೋಡಿ ವಿಭಾಗದಲ್ಲಿ ಮೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಕಾಮಗಾರಿ ನಡೆಯುತ್ತಿದ್ದು ಎಪ್ರೀಲ್ ಅಂತ್ಯದವರೆಗೆ ಎಲ್ಲ ಯೋಜನೆಗಳನ್ನು ಪೂರ್ಣಗೊಳಿಸುವದಾಗಿ ಜಿಪಂ ಅಧಿಕಾರಿಗಳು ಗ್ರಾಮೀಣಾಭಿವೃದ್ಧಿ ಸಚಿವರೆದುರು ಭರವಸೆ ನೀಡಿದ್ದಾರೆ
ಗ್ರಾಮೀಣಾಭಿವೃದ್ಧಿ ಸಚಿವ ಹೆಚ್ ಕೆ ಪಾಟೀಲರು ಜಿಪಂ ಸಭಾ ಭವನದಲ್ಲಿ ಬೆಳಗಾವಿ ಜಿಲ್ಲೆಯ ಕುಡಿಯುವ ನೀರಿನ ಯೋಜನೆಗಳ ಪ್ರಗತಿ ಪರಶೀಲನೆ ನಡೆಸಿದರು ಈ ಸಂಧರ್ಭದಲ್ಲಿ ಮಾತನಾಡಿದ ಸಚಿವರು ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 35 ಬಹು ಗ್ರಾಮಗಳ ಕುಡಿಯುವ ನೀರಿನ ಯೋಜನೆಗಳ ಕಾಮಗಾರಿ ನಡೆಯುತ್ತಿದೆ ಮುಕ್ತಾಯದ ಹಂತದಲ್ಲಿರುವ 28 ಕಾಮಗಾರಿಗಳನ್ನು ಎಪ್ರೀಲ್ ಅಂತ್ಯದಲ್ಲಿ ಪೂರ್ಣಗೊಳಿಸಬೇಕು ಜೊತೆಗೆ ಆರಂಭ ಹಂತದಲ್ಲಿರುವ 7 ಕಾಮಗಾರಿಗಳನ್ನು ಡಿಸೆಂಬರ ತಿಂಗಳಲ್ಲಿ ಪೂರ್ಣಗೊಳಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ತಾಕೀತು ಮಾಡಿದರು
ಬೆಳಗಾವಿ ಜಿಲ್ಲೆಯಲ್ಲಿ ಭೀಕರ ಬರಗಾಲವಿದೆ ಇಂತಹ ಸಂಧರ್ಭದಲ್ಲಿ ಅಧಿಕಾರಿಗಳು ಕಳೆದ ವರ್ಷಕ್ಕಿಂತ ಈ ವರ್ಷ ಅಧಿಕಾರಿಗಳು ನೀರಿನ ವಿಷಯದಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಈ ವರ್ಷ ಟ್ಯಾಂಕರ್ ಮೂಲಕ ನೀರು ಸರಬರಶಜು ಮಾಡುವ ಸಂಖ್ಯೆಯಲ್ಲಿ ಇಳಿಕೆಯಾಗಿದೆ ಅಧಿಕಾರಿಗಳು ಇನ್ನೆರಡು ತಿಂಗಳು ಶ್ರದ್ಧೆಯಿಂದ ಕೆಲಸ ಮಾಡಿ ಯಾವುದೇ ರೀತಿಯ ತೊಂದರೆ ಬಾರದಂತೆ ನೋಡಿಕೊಳ್ಳಬೇಕು ಎಂದು ಹೆಚ್ ಕೆ ಪಾಟೀಲ ಸೂಚನೆ ನೀಡಿದರು
ಬೆಳಗಾವಿ ಜಿಲ್ಲೆಯ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆ ಹೇಗೆ ನಡೆಯುತ್ತದೆ ಅವುಗಳ ನಿರ್ವಹಣೆ ಯಾರು ಮಾಡುತ್ತಿದ್ದಾರೆ ಅನ್ನೋದರ ಬಗ್ಗೆ ವರದಿ ನೀಡುವಂತೆ ಹೆಚ್ ಕೆ ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು
ಸಂಸದ ಪ್ರಕಾಶ ಹುಕ್ಕೇರಿ ಜಿಪಂ ಅಧ್ಯಕ್ಷ ಆಶಾ ಐಹೊಳೆ ಮೊದಲಾದವರು ಸಭೆಯಲ್ಲಿ ಭಾಗವಹಿಸಿದ್ದರು