ಹುದಲಿ ಸಕ್ಕರೆ ಕಾರ್ಖಾನೆಯ ಬಾಯಲರ್ ಪ್ರದೀಪನ

ಬೆಳಗಾವಿ-ರಾಜಕಾರಣದಲ್ಲಿ ಸಾಧನೆ ಮಾಡಿದ ಸಾಮಾಜಿಕ ಕ್ರಾಂತಿಯ ಹರಿಕಾರ ಸತೀಶ ಜಾರಕಿಹೊಳಿ ಅವರು ಸಕ್ಕರೆ ಉದ್ಯಮದಲ್ಲಿಯೂ ಸದ್ದಿಲ್ಲದೇ ಸಾಧನೆ ಮಾಡುತ್ತಿದ್ದಾರೆ ಸತೀಶ ಶುಗರ್ಸ ಹೆಸರಿನಲ್ಲಿ ಸಕ್ಕರೆ ಉದ್ಯಮಕ್ಕೆ ಕಾಲಿಟ್ಟ ಸತೀಶ ಜಾರಕಿಹೊಳಿ ಈ ಕ್ಷೇತ್ರದಲ್ಲಿ ತಮ್ಮ ಕದಂಬ ಬಾಹುಗಳನ್ನು ಚಾಚುವಲ್ಲಿ ಯಶಸ್ವಿಯಾಗಿದ್ದಾರೆ

ಬೆಳಗಾವಿ ನಗರಕ್ಕೆ ಹೊಂದಿಕೊಂಡಿರುವ ಮಹಾತ್ಮಾ ಗಾಂಧೀಜಿ ಅವರು ಪಾದಸ್ಪರ್ಷ ಮಾಡಿದ ಗ್ರಾಮದಲ್ಲಿ ಸತಿಶ ಜಾರಕಿಹೊಳಿ ಅವರು ಅತ್ಯಾಧುನಿಕ ಸಕ್ಕರೆ ಕಾರ್ಖಾನೆ ನಿರ್ಮಾಣ ಮಾಡಿದ್ದು ದಸರಾ ಹಬ್ಬದ ದಿನ ಕಾರ್ಖಾನೆಯ ಬಾಯಲರ್ ಪ್ರದೀಪನ  ಮಾಡಿದರು ಈ ಸಂಧರ್ಭದಲ್ಲಿ ಅವರ ಸಹೋದರರು ಹಾಗು ಗನ್ಯಾತಿ ಗಣ್ಯರು ಭಾಗವಹಿಸಿದ್ದರು

ಈ ಸಂಧರ್ಭದಲ್ಲಿ ಮಾತನಾಡಿದ ಅವರು ಬೆಳಗಾವಿ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಸಕ್ಕರೆ ಕಾರ್ಖಾನೆಗಳನ್ನು ಸ್ಥಾಪನೆ ಮಾಡುವದರ ಮುಲಕ ಜಿಲ್ಲೆಯ ರೈತರನ್ನು ಆರ್ಥಿಕವಾಗಿ ಸಬಲಗೊಳಿಸುವದರ ಜೊತೆಗೆ ಜಿಲ್ಲಿಯಲ್ಲಿ ಶೈಕ್ಷಣಿಕ ಹಾಗು ಸಾಮಾಜಿಕ ಬೆಳವಣಿಗೆಗೆ ಶ್ರಮಿಸಲಾಗುತ್ತಿದೆ ದುಡಿಯುವ ಕೈಗಳಿಗೆ ಉದ್ಯೋಗ ಕೊಡಿಸುವ ಕೆಲಸ ನಡೆದಿದೆ ನವ್ಹೆಂಬರ್ ತಿಂಗಳಲ್ಲಿ ಚಂದರಿ ಗ್ರಾಮದಲ್ಲಿಯೂ ಸಕ್ಕರೆ ಕಾರ್ಖಾನೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲು ನಿರ್ಧರಿಸಲಾಗಿದೆ ಎಂದರು

 

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *