Breaking News

ಕನ್ನಡಕ್ಕಾಗಿ ಬೆಳಗಾವಿಯಲ್ಲಿ ಏರ್ ಲೈನ್ಸ್ ವಿರುದ್ಧ ಕಿಡಿ ಕಾರಿದ ಐಎಸ್ ಅಧಿಕಾರಿ….

ಬೆಳಗಾವಿ- ಕನ್ನಡದಲ್ಲಿ ಮಾಹಿತಿ ನೀಡದ ಇಂಡಿಗೋ ಏರ್‌ಲೈನ್ಸ್ ವಿರುದ್ಧ ಹಿರಿಯ ಐಎಎಸ್ ಅಧಿಕಾರಿ ಎಲ್.ಕೆ.ಅತೀಕ್ ಕಿಡಿಕಾರಿದ್ದಾರೆ.

ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆ ಬೆಳಗಾವಿ ಜಿಲ್ಲೆಯ ವೀಕ್ಷಕರಾಗಿರುವ ಐಎಎಸ್ ಅಧಿಕಾರಿ ಎಲ್.ಕೆ.ಅತೀಕ್ ಇಂದು ಬೆಂಗಳೂರಿನಿಂದ ಬೆಳಗಾವಿಗೆ ಇಂಡಿಗೋ ಏರ್‌ಲೈನ್ಸ್ ವಿಮಾನದ ಮೂಲಕ ಆಗಮಿಸಿದ್ದಾರೆ.ಈ ವೇಳೆ ಕನ್ನಡದಲ್ಲಿ ಮಾಹಿತಿ ನೀಡದ ವಿಮಾನಯಾನ ಸಂಸ್ಥೆಗಳ ವಿರುದ್ಧ ಎಲ್.ಕೆ.ಅತೀಕ್ ಕಿಡಿಕಾರಿದ್ದಾರೆ. ಕರ್ನಾಟಕದಲ್ಲಿ ಇಂಡಿಗೋ ಹಾಗೂ ಇತರೆ ವಿಮಾನಯಾನ ಕಂಪನಿಗಳಿಗೆ ಕನ್ನಡದಲ್ಲಿ ಸೇವೆ ಸಲ್ಲಿಸಲು ಇರುವ ಸಮಸ್ಯೆಯಾದರೂ ಏನು ಎಂದು ಟ್ವೀಟ್ ಮಾಡುವ ಮೂಲಕ ಪ್ರಶ್ನಿಸಿದ್ದಾರೆ.

ವಿದೇಶಿ ವಿಮಾನಯಾನ ಸಂಸ್ಥೆಗಳಾದ ಬ್ರಿಟಿಷ್ ಏರ್‌ವೇಸ್ ಎಮಿರೇಟ್ಸ್, ಸಿಂಗಾಪುರ್ ಏರ್‌ಲೈನ್ಸ್ ಕನ್ನಡದಲ್ಲಿ ಸೇವೆ ನೀಡುತ್ತವೆ. ಆದರೆ ಇಂಡಿಗೋ ಸಿಬ್ಬಂದಿಗೆ ಕನ್ನಡದಲ್ಲಿ ಸೇವೆ ಮಾಡಲು ಇರುವ ಕಷ್ಟವಾದರೂ ಏನು ಅಂತಾ ಪ್ರಶ್ನೆ ಮಾಡಿದ್ದು ಎಲ್.ಕೆ.ಅತೀಕ್ ಟ್ವೀಟ್‌ಗೆ ಹಲವರು ಬೆಂಬಲ ವ್ಯಕ್ತಪಡಿಸಿದ್ದಾರೆ. ವಿದೇಶಿ ವಿಮಾನಯಾನ ಸಂಸ್ಥೆಗಳೇ ಕನ್ನಡದಲ್ಲಿ ಸೇವೆ ನೀಡುವಾಗ ಇಂಡಿಗೋ ಏರ್‌ಲೈನ್ಸ್ ಸಿಬ್ಬಂದಿಗೀರುವ ಸಮಸ್ಯೆ ಏನು ಅಂತಾ ಆಕ್ರೋಶ ಹೊರಹಾಕಿದ್ದಾರೆ.

ಟ್ವೀಟ್ ಸಾರಾಂಶ ಇಲ್ಲಿದೆ…

[12/16, 12:44] All About Belgaum: On
@IndiGo6E
flight from Bengaluru to Belagavi today.

Announcement: cabin crew can speak English, Hindi & Malayalam.

Foreign Airlines like British Airways, Emirates, Singapore Airlines serve in Kannada. I wonder how difficult it is for
@IndiGo6E no
to hire Kannada speaking crew.
[12/16, 12:49] All About Belgaum: https://twitter.com/lkatheeq/status/1339087532894502912?s=20

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *