ಬಸ್ ಪ್ರಯಾಣ ಮಾಡಿದ ಐಜಿಪಿ ಅಲೋಕ್ ಕುಮಾರ್

ಬೆಳಗಾವಿ- ಬಸ್ ಡೇ ಕಾರ್ಯಕ್ರಮದ ಅಂಗವಾಗಿ ಐಜಿಪಿ ಅಲೋಕ್ ಕುಮಾರ್ ಬಸ್ ನಲ್ಲಿ ಪ್ರಯಾಣ ಮಾಡಿ ಪ್ರಯಾಣಿಕರಿಗೆ ಗುಲಾಬಿ ಕೊಟ್ಟು ಎಲ್ಲರ ಗಮನ ಸೆಳೆದರು

ವಾಯುವ ಸಾರಿಗೆ ಸಂಸ್ಥೆಯ ಇಲಾಖೆಯಿಂದ ಉತ್ತಮವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಸಾರ್ವನಿಕರು ಸಾರಿಗೆ ಬಸ್ ಗಳಲ್ಲಿ ಸಂಚರಿಸುವ ಮೂಲಕ ಇದರ ಸದುಪಯೋಗ ಪಡೆಸಿಕೊಳ್ಳಬೇಕೆಂದು ಉತ್ತರ ವಲಯ ಐಜಿಪಿ ಅಲೋಕಕುಮಾರ ಹೇಳಿದರು.

ಮಂಗಳವಾರ ಪ್ರತಿ ತಿಂಗಳ ಬಸ್ ಡೇ ಕಾರ್ಯಕ್ರಮದ ಅಂಗವಾಗಿ ಸಾರಿಗೆ ಬಸ್ ನಲ್ಲಿ ಪ್ರಯಾಣಿಸುವ ಮೂಲಕ ನಗರ ಬಸ್ ನಿಲ್ದಾಣಕ್ಕೆ ಆಗಮಿಸಿ ಸಾರಿಗೆ ಪ್ರಯಾಣಿಕರಿಗೆ ಗುಲಾಬಿ ಹೂಗಳನ್ನು ನೀಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಸಾರ್ವಜನಿಕರಿಗೆ ಸರಕಾರದಿಂದ ನೀಡುವ ಸಾರಿಗೆ ಸೌಲಭ್ಯವನ್ನು ಜನರು ಉಪಯೋಗ ಮಾಡಿಕೊಳ್ಳಬೇಕು. ಇದರಿಂದ ಸಂಚಾರ ಸಮಸ್ಯೆ ಉದ್ಭವವಾಗುವುದಿಲ್ಲ. ದ್ವಿಚಕ್ರ ವಾಹನದಿಂದ ಸಂಚಾರ ಸಮಸ್ಯೆ ಉಲ್ಬಣವಾಗುತ್ತಿದೆ. ಬಸ್ ಡೇ ಮೂಲಕ ಸರಕಾರ ಜನತೆಗೆ ಅನಕೂಲ ಮಾಡಿಕೊಟ್ಟಿದೆ ಇದರ ಉಪಯೋಗ ಪಡೆದುಕೊಳ್ಳಬೇಕೆಂದರು.
ಬಸ್ ನಲ್ಲಿ ಪ್ರಯಾಣ ಮಾಡುವಾಗ ಹಿರಿಯ ನಾಗರಿಕರು ಹಾಗೂ ವಿಶೇಷವಾಗಿ ಮಹಿಳೆಯರಿಗೆ ಮೀಸಲಿಟ್ಟ ಸ್ಥಳಗಳನ್ನು ಯುವಕರು ಬಿಟ್ಟುಕೊಡಬೇಕು. ನಿರ್ವಾಹಕರು ಟಿಕೆಟ್ ಗಾಗಿ ವಿನಾಕಾರಣ ಜಗಳ ಮಾಡುವುದು ಸರಿಯಲ್ಲ. ಕಳಕಳಿಯ ದೃಷ್ಠಿಯಿಂದ ಹಿರಿಯರು, ಮಹಿಳೆಯರು ಬಂದರೆ ಯುವಕರು ಆಸನ ವ್ಯವಸ್ಥೆಯನ್ನು ಬಿಟ್ಟುಕೊಡಬೇಕು ಎಂದರು.
ಬೆಳಗಿನ ಜಾವ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಪ್ರಯಾಣ ಮಾಡುತ್ತಾರೆ. ಯಾರಿಗೂ ತೊಂದರೆಯಾಗದಂತೆ ನೋಡಿಕೊಳ್ಳಬೇಕೆಂದು ಸಾರಿಗೆ ಅಧಿಕಾರಿಗಳಿಗೆ ಹೇಳಿದರು.
ಈ ಸಂದರ್ಭದಲ್ಲಿ ಡಿಸಿಪಿ ಸೀಮಾ ಲಾಟ್ಕರ ಸೇರಿದಂತೆ ಮೊದಲಾದವರು ಹಾಜರಿದ್ದರು.

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *