ವಿಶ್ವೇಶ್ವರಯ್ಯ ಜಲ ನಿಗಮದ ಪ್ರಗತಿ ಪರಿಶೀಲನಾ ಸಭೆ ಬೆಂಗಳೂರಿನಲ್ಲಿ ಇಂದು ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಎತ್ತಿನಹೊಳೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ ಕಾಮಗಾರಿಗಳ ಕುರಿತಂತೆ ಅಧಿಕಾರಿಗಳು ಮಾಹಿತಿ ನೀಡಿದರು. ಮುಂದಿನ ವರ್ಷದ ಕೊನೆಯ ಭಾಗದ ಒಳಗಾಗಿ ರೈತರಿಗೆ ಕೃಷಿಗೆ ಮತ್ತು ಜನರಿಗೆ ಕುಡಿಯುವ ನೀರು ಒದಗಿಸಲು ಕೂಡಲೇ ಕಾರ್ಯಪ್ರವೃತ್ತರಾಗುವಂತೆ ಸಚಿವರು ಸೂಚಿಸಿದರು. ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್, ನಿಗಮದ ಎಂಡಿ ಲಕ್ಷ್ಮಣ್ ರಾವ್ ಪೇಶ್ವೆ ಮುಂತಾದ ಅಧಿಕಾರಿಗಳು ಉಪಸ್ಥಿತರಿದ್ದರು
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ