ಬೆಳಗಾವಿ-
ಬಿಜೆಪಿ ಟಿಕೆಟ್ ಆಕಾಂಕ್ಷಿ ಜಗದೀಶ್ ಮೆಟಗುಡ್ಡಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ ಜಗದೀಶ ಮೆಟಗುಡ್ ಬೆಂಬಲಿಗರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಕಿಡಿಕಾರಿದ್ದಾರೆ
ಯಡಿಯೂರಪ್ಪ ಪ್ರತಿಕೃತಿ ಮಾಡಿ ಚಪ್ಪಲಿ ಹಾರ ಹಾಕಿ ಬೈಲಹೊಂಗಲ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಿದ ಜದೀಶ ಮೆಟಗುಡ್ ಬೆಂಬಲಿಗರು
ಬಿಎಸ್ ವೈ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡದು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ
ಬೆಂಬಲಿಗರು
ಐದು ಸಾವಿರಕ್ಕೂ ಅಧಿಕ ಬೆಂಬಲಿಗರು ಹಾಗೂ ಮೂಲ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು ವಿಶೇಷವಾಗಿದೆ
ನೀತಿ ಸಂಹಿತೆ ಜಾರಿಯಲ್ಲಿದ್ದರು ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿರುವದನ್ನು
ಚುನಾವಣಾ ಅಧಿಕಾರಿಗಳು ನೋಡಿ ಮೂಕಪ್ರೇಕ್ಷಕರಾಗಿದ್ದರು ಎಂದು ತಿಳಿದು ಬಂದಿದೆ
ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಬಿ ಎಸ್ ವೈ ಪ್ರತಿಕೃತಿ ದಹನ ಮಾಡಿದ ಬಿಜೆಪಿ ಕಾರ್ಯಕರ್ತರು ಯಡಿಯೂರಪ್ಪ ವಿರುದ್ಧ ದಿಕ್ಕಾರ ಕೂಗಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ