ಬೆಳಗಾವಿ- ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾರಾಗ್ತಾರೆ ? ಇಂದು ಬಿಡುಗಡೆಯಾಗುವ ಬಿಜೆಪಿಯ ಅಂತಿಮ ಪಟ್ಟಿಯಲ್ಲಿ ಯಾರ ಹೆಸರು ಗಟ್ಟಿಯಾಗಿ ಉಳಿದುಕೊಳ್ಳುತ್ತದೆ ಎನ್ನುವ ವಿಚಾರವನ್ನು ತಿಳಿದುಕೊಳ್ಳಲು ಎಲ್ಲರೂ ಉತ್ಸುಕರಾಗಿದ್ದಾರೆ.
ಈ ಕ್ಷಣದವರೆಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರೇ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಗ್ತಾರೆ,ಎಂದು ಬಿಜೆಪಿ ಮೂಲಗಳು ತಿಳಿಸಿವೆ.ಹಾಲಿ ಸಂಸದೆ ಮಂಗಲಾ ಅಂಗಡಿಯವರು ಈ ವಿಚಾರಕ್ಕೆ ಸಮ್ಮತಿ ಸೂಚಿಸಿದ್ದಾರೆ. ಕೆಲವು ಜನ ಬಿಜೆಪಿ ನಾಯಕರು ಜಗದೀಶ್ ಶೆಟ್ಟರ್ ಅವರ ಹೆಸರು ಫೈನಲ್ ಆಗಿದೆ.ಘೋಷಣೆ ಅಷ್ಟೆ ಬಾಕಿ ಇದೆ.ಎಂದು ಹೇಳಲಾಗುತ್ತಿದ್ದರೂ ಬಿಜೆಪಿಯ ಅಂತಿಮ ಪಟ್ಟಿ ಬಿಡುಗಡೆಯಾದ ನಂತರವೇ ಎಲ್ಲ ಉಹಾಪೋಹಗಳಿಗೆ ತೆರೆ ಬೀಳಲಿದೆ.
ಬೇರೆ ಜಿಲ್ಲೆಯವರಿಗೆ ಟಿಕೆಟ್ ಬೇಡ,ಶೆಟ್ಟರ್ ಗೋ ಬ್ಯಾಕ್ ಎನ್ನುವ ಅಭಿಯಾನ ಬಿಜೆಪಿಯಲ್ಲಿ ನಡೆದಿತ್ತು. ಸ್ಥಳೀಯ ನಾಯಕರಿಗೆ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಬೇಕು ಎನ್ನುವ ಬೇಡಿಕೆಯೂ ಬಿಜೆಪಿ ಕಾರ್ಯಕರ್ತರದ್ದಾಗಿತ್ತು.ಶೆಟ್ಟರ್ ಅವರನ್ನು ಬೆಳಗಾವಿಯಿಂದ ಬಿಜೆಪಿ ಅಭ್ಯರ್ಥಿ ಮಾಡುವ ವಿಚಾರಕ್ಕೆ ಪರ ಮತ್ತು ವಿರೋಧ ವ್ಯಕ್ತವಾಗಿರುವ ಹಿನ್ನಲೆಯಲ್ಲಿ ಶೆಟ್ಟರ್ ಅವರನ್ನು ಬಿಜೆಪಿ ಕೊನೆಯ ಘಳಿಗೆಯಲ್ಲಿ ಕೈಬಿಟ್ಟರೆ ಅವರ ಬದಲಿಗೆ ಅಭ್ಯರ್ಥಿ ಯಾರಾಗ್ತಾರೆ ಎನ್ನುವ ಚರ್ಚೆಗಳು ಎಲ್ಲೆಡೆಗೂ ನಡೆಯುತ್ತಿವೆ.
ಮಾಜಿ ಸಂಸದ ರಮೇಶ್ ಕತ್ತಿ, ಮಾಜಿ ಶಾಸಕ ಸಂಜಯ್ ಪಾಟೀಲ,ಮಹಾಂತೇಶ್ ಕವಟಗಿಮಠ ಅವರ ಹೆಸರುಗಳು ಚರ್ಚೆಯಲ್ಲಿವೆ.ಏನೇ ಆಗಲಿ ಇವತ್ತು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಆಗೋದು ಖಚಿತ ಪಟ್ಟಿ ಬಿಡುಗಡೆ ಆಗುವವರೆಗೂ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಇವರಾಗ್ತಾರೆ,ಅವರಾಗ್ತಾರೆ ಎನ್ಬುವ ಸುದ್ದಿಗಳು ಕೇಳಿ ಬರುತ್ತಿವೆ.ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ.ಪಟ್ಟಿ ಬಿಡುಗಡೆಯಾಗುವವರೆಗೆ ಈ ರೀತಿಯ ಉಹಾಪೋಹಗಳು ನಡೆಯುತ್ತವೆ.ಆದರೂ ಸಹ ಜಗದೀಶ್ ಶೆಟ್ಟರ್ ಅವರೇ ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಗ್ತಾರೆ.ಪಟ್ಟಿಯಲ್ಲಿ ಅವರ ಹೆಸರೇ ಫೈನಲ್ ಆಗುತ್ತದೆ ಎಂದು ನಂಬಲರ್ಹ ಮೂಲಗಳಿಂದ ತಿಳಿದು ಬಂದಿದೆ.