Breaking News
Home / Breaking News / ಬುಧವಾರ, ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಗೆ ಗ್ರ್ಯಾಂಡ್ ವೆಲ್ ಕಮ್…!!!

ಬುಧವಾರ, ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಗೆ ಗ್ರ್ಯಾಂಡ್ ವೆಲ್ ಕಮ್…!!!

ಬೆಳಗಾವಿ: ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಜಗದೀಶ್ ಶೆಟ್ಟರ್ ಅವರು ನಾಳೆ ಬುಧವಾರ ಬೆಳಗಾವಿಗೆ ಬರಲಿದ್ದು ಬೆಳಗಾವಿಯ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಜಗದೀಶ್ ಶೆಟ್ಟರ್ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲು ನಿರ್ಧರಿಸಿದ್ದಾರೆ.

ನಾಳೆ,ಬುಧವಾರದಂದು ಬೆಳಿಗ್ಗೆ 10 ಘಂಟೆಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೀರೆಬಾಗೇವಾಡಿ ಟೋಲ್ ಮೂಲಕ ಬೆಳಗಾವಿ ಲೊಕಸಭಾ ಕ್ಷೇತ್ರಕ್ಕೆ ಆಗಮಿಸಲಿದ್ದು ಸಾವಿರಾರು ಬಿಜೆಪಿ ಕಾರ್ಯಕರ್ತರು ಅವರಿಗೆ ಬೃಹತ್ ಸ್ವಾಗತ ಮಾಡಲಿದ್ದಾರೆ. ಎಂದು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸುಭಾಷ್ ಪಾಟೀಲ ಹಾಗೂ ನಗರ ಅಧ್ಯಕ್ಷೆ ಗೀತಾ ಸುತಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಳಿಗ್ಗೆ 10ಘಂಟೆಗೆ ಹೀರೆಬಾಗೆವಾಡಿ ಟೊಲ್ ಮೂಲಕ ಲೋಕಸಭಾ ಕ್ಷೇತ್ರಕ್ಕೆ ಆಗಮಿಸಿ 10.30ಕ್ಕೆ ಬೆಳಗಾವಿಯ ಕೋಟೆ ಯಹಾದ್ವಾರದಲ್ಲಿ ಇರುವ ದುರ್ಗಾದೇವಿ ದೇವಸ್ಥಾನದಲ್ಲಿ ಪೂಜೆ ನೆರವೇರಿಸಲಿದ್ದಾರೆ.

ಇದಾದ ಬಳಿಕ,ಬಿಜೆಪಿಯ ಸಾವಿರಾರು ಕಾರ್ಯಕರ್ತರು, ಬೈಕ್ ರ್ಯಾಲಿ ಮೂಲಕ ಶೆಟ್ಟರ್ ಅವರನ್ನು ಕೊರ್ಟ್ ಆವರಣದಲ್ಲಿರುವ ಸಂಗೋಳ್ಳಿ ರಾಯಣ್ಣ ಮೂರ್ತಿಗೆ ಮಾಲಾರ್ಪಣೆ, ರಾಣಿ ಚನ್ನಮ್ಮ ವೃತ್ತದಲ್ಲಿರುವ ಚನ್ನಮ್ಮನ ಮೂರ್ತಿಗೆ, ಅಂಬೇಡ್ಕರ್ ಮೂರ್ತಿಗೆ ಮಾಲಾರ್ಪಣೆ, ಗಣಪತಿ ದೇವಸ್ಥಾನದಲ್ಲಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಧರ್ಮವೀರ ಸಂಭಾಜಿ ವೃತ್ತದಲ್ಲಿ ಮೂರ್ತಿಗೆ ಮಾಲಾರ್ಪಣೆ, ಕಪಲೇಶ್ವರ ಮೆಲಸೆತುವೆ ಮಾರ್ಗವಾಗಿ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಗೆ ಮಾಲಾರ್ಪಣೆ, ಮಹಾತ್ಮಾ ಪುಲೆ‌ ಮಾರ್ಗವಾಗಿ ಗೋವಾವೆಸ್ ದಲ್ಲಿರುವ ಜಗಜ್ಯೋತಿ ಬಸವೇಶ್ವರ ಮೂರ್ತಿಗೆ ಮಾಲಾರ್ಪಣೆ ನಡೆಸಿ ಸದಾಶಿವ ನಗರದಲ್ಲಿರುವ ಮಹಾನಗರದ ಕಛೇರಿಯವರೆಗೆ ಬೈಕ್ ರ್ಯಾಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.

Check Also

ಇಂದು ಬೆಳಗಾವಿಯಲ್ಲಿ ಬಿಜೆಪಿ ಕೋರ್ ಕಮೀಟಿ ಮೀಟೀಂಗ್…

ಬೆಳಗಾವಿ-ಬೆಳಗಾವಿ ಜಿಲ್ಲೆಯ ಬೆಳಗಾವಿ,ಹಾಗೂ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗಾಗಿ ತಂತ್ರ ರೂಪಿಸಲು ಇಂದು ಬೆಳಗಾವಿ ನಗರದ ಸಂಕಮ್ …

Leave a Reply

Your email address will not be published. Required fields are marked *