ಬೆಳಗಾವಿ – ಮೂಡಾ ಮತ್ತು ವಾಲ್ಮೀಕಿ ಹಗರಣಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರು ಕೇಳಿ ಬಂದಿದ್ದು ಸಿದ್ರಾಮಯ್ಯ ನವರು ಯಾವುದೇ ಸಮಯದಲ್ಲಿ ರಾಜಿನಾಮೆ ಕೊಡಬೇಕಾದ ಪರಿಸ್ಥಿತಿ ಎದುರಾಗಬಹುದು ರಾಜ್ಯದಲ್ಲಿ ಈಗ ಪರಿಸ್ಥಿತಿ ಸೂಕ್ಷ್ಮವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬೆಳಗಾವಿ ಸಂಸದ ಜಗದೀಶ್ ಶೆಟ್ಡರ್ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಮೂಡಾ ಹಗರಣದ ಕುರಿತು ವಿಧಾನಸಭೆಯಲ್ಲಿ ಚರ್ಚೆಗೆ ಅವಕಾಶ ಕೊಡಲಿಲ್ಲ, ಸ್ಪೀಕರ್ ಕಡೆಯಿಂದ ಚರ್ಚೆಯ ಪ್ರಸ್ತಾವನೆಯನ್ನು ತಿರಸ್ಕರಿಸಿದ ಸಿಎಂ ಸಿದ್ರಾಮಯ್ಯ ಮುಡಾ ಹಗರಣದ ಕುರಿತು ಸದನದಲ್ಲಿ ಉತ್ತರ ಕೊಡಲಿಲ್ಲ. ಮರುದಿನ ಪತ್ರಿಕಾಗೋಷ್ಠಿ ನಡೆಸಿ ಪತ್ರಿಕೆಗಳಲ್ಲಿ ಪುಟ ಜಾಹಿರಾತು ನೀಡಿ ಉತ್ತರ ಕೊಟ್ಟಿದ್ದಾರೆ. ಮುಡಾ ಹಗರದಲ್ಲಿ ಮುಖ್ಯಮಂತ್ರಿ ಸಿದ್ರಾಮಯ್ಯ ನೇರವಾಗಿ ಶಾಮೀಲಾಗಿದ್ದಾರೆ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪಾದಯಾತ್ರೆ ನಡೆಸುತ್ತದೆ.ಈ ಪಾದಯಾತ್ರೆಯಲ್ಲಿ ಜೆಡಿಎಸ್ ಭಾಗವಹಿಸುತ್ತದೆ ಎಂದು ಜಗದೀಶ್ ಶೆಟ್ಟರ್ ಹೇಳಿದರು.
 ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
				 
		 
						
					 
						
					 
						
					