ಅರಣ್ಯಪ್ರದೇಶ ಬಳಕೆಗೆ ಅನುಮತಿ ನೀಡುವಂತೆ ಮಂತ್ರಿಗೆ ಭೇಟಿ….

ಬೆಳಗಾವಿ-ಬೆಳಗಾವಿ ಜಿಲ್ಲೆಯ ಗೋಕಾಕ್ ಮತ್ತು ಹುಕ್ಕೇರಿ ತಾಲೂಕಿನಡಿ ಬರುವಂತಹ ಗ್ರಾಮಗಳಿಗೆ ಕುಡಿಯುವ ನೀರಿನ ಪುರೈಕೆ ಕುರಿತು ಅಂದಾಜು ರೂ 990 ಕೋಟಿ ವೆಚ್ಚದ ಘಟ್ಟಿಬಸವಣ್ಣ ಕುಡಿಯುವ ನೀರಿನ ಯೋಜನೆಯ ಅನುಷ್ಠಾನಕ್ಕೆ 6 ಟಿಎಂಸಿ ನೀರನ್ನು ಶೇಖರಿಸಲು ಮಾರ್ಕಂಡೇಯ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸಲು ಅವಶ್ಯವೆನಿಸಿದ ಸುಮಾರು 575 ಹೆಕ್ಟೇರ್ ಅರಣ್ಯ ಪ್ರದೇಶದ ಬಳಕೆಯ ಅನುಮತಿಗೆ ಕರ್ನಾಟಕ ಸರ್ಕಾರವು ಕೇಂದ್ರ ಅರಣ್ಯ ಸಚಿವಾಲಯಕ್ಕೆ ಈಗಾಗಲೇ ಕಳುಹಿಸಿದ ಪ್ರಸ್ತಾವನೆಗೆ ಕೂಡಲೆ ಅನುಮೋದನೆ ನೀಡುವ ಬಗ್ಗೆ ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದರಾದ ಜಗದೀಶ್ ಶೆಟ್ಟರ್ ಅವರು ಕೇಂದ್ರ ಪರಿಸರ, ಅರಣ್ಯ ಮತ್ತು ಪರ್ಯಾವರಣ ಸಚಿವರಾದ ಭೂಪೇಂದ್ರ ಯಾದವ್ ಇವರನ್ನು ಲೋಕಸಭೆಯಲ್ಲಿ ಭೇಟಿ ಮಾಡಿ ಮನವಿಯನ್ನು ಅರ್ಪಿಸಿದರು.

ಕರ್ನಾಟಕ ನೀರಾವರಿ ನಿಗಮ ನಿಯಮಿತ ವತಿಯಿಂದ ಈ ಯೋಜನೆಯ ಅನುಷ್ಠಾನವಾಗಬೇಕಾಗಿದ್ದು, ಇದರ ಅನುಷ್ಠಾನದಿಂದ ಗೋಕಾಕ್, ಹುಕ್ಕೇರಿ, ಬೈಲಹೊಂಗಲ ಮತ್ತು ಸವದತ್ತಿ ತಾಲೂಕಿನಡಿ ಬರುವಂತಹ ಹಲವಾರು ಗ್ರಾಮಗಳಿಗೆ ಕುಡಿಯುವ ನೀರಿನ ಸೌಲಭ್ಯ ದೊರಕಲಿದೆ ಎಂದು ಬೆಳಗಾವಿ ಸಂಸದರಾದ ಶ್ರೀ ಜಗದೀಶ್ ಶೆಟ್ಟರ್ ಅವರು ತಿಳಿಸಿದ್ದಾರೆ.

ಅದರಂತೆ ಈ ಬಗ್ಗೆ ಕೇಂದ್ರ ಸಚಿವರು ಸಕಾರಾತ್ಮಕವಾಗಿಯೂ ಸಹ ಸ್ಪಂದಿಸಿದ್ದು ಪ್ರಸ್ತಾಪಿತ ಯೋಜನೆಗೆ ಶೀಘ್ರ ಕೇಂದ್ರ ಅರಣ್ಯ ಸಚಿವಾಲಯದಿಂದ ಹಸಿರು ನಿಶಾನೆ ಸಿಗುವ ಬಗ್ಗೆ ಭರವಸೆಯನ್ನು ಹೊಂದಿದ್ದಾಗಿ ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಜಗದೀಶ್ ಶೆಟ್ಟರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *