ಶೆರೆ ಅಂಗಡಿ ಚಾಲೂ ಮಾಡ್ರಿ ಅಂತ ಜನ ನನಗೆ ಫೋನ್ ಮಾಡಾಕತಾರ್ರೀ….
ಎರಡು ದಿನ ಆಯ್ತು ಜನ ನನಗ ಫೋನ್ ಮಾಡಿ ಶೆರೆ ಅಂಗಡಿ ಚಾಲೂ ಮಾಡ್ರಿ ಅಂತ ನನಗ ಪೋನ್ ಮಾಡಾಕತಾರ…ನಮ್ಮ ಜನಕ್ಕೆ ಸಮಾಧಾನ, ಇಲ್ಲ ಜನ ತಾಳ್ಮೆ ಕಳೆದುಕೊಳ್ಳಬಾರದು ಎಂದು ಬೆಳಗಾವಿಯಲ್ಲಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಪತ್ರಿಕಾಗೋಷ್ಠಿ ಯಲ್ಲಿ ಹಾಸ್ಯ ಚಟಾಕಿ ಹಾರಿಸಿ,ನಕ್ಕಿದ್ದೇ ನಕ್ಕಿದ್ದು…
*ಕೋವಿಡ್-19 ನಿಯಂತ್ರಣ: ಬೆಳಗಾವಿಯಲ್ಲಿ ಸಚಿವ ಜಗದೀಶ ಶೆಟ್ಟರ ಸಭೆ*
ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೈಗಾರಿಕೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವಜಗದೀಶ ಶೆಟ್ಟರ ಅವರು ಇಂದು ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. ಸಭೆಯಲ್ಲಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ, ಜಿಲ್ಲಾಧಿಕಾರಿ ಎಸ್.ಬಿ. ಬೊಮ್ಮನಹಳ್ಳಿ, ಪೊಲೀಸ್ ಆಯುಕ್ತ ಲೋಕೇಶಕುಮಾರ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ಅಸಂಘಟಿತ ವಲಯದ ಕಾರ್ಮಿಕರ ಪಟ್ಟಿ ಮಾಡಿ ಸ್ವಯಂ ಸೇವಾ ಸಂಘ ಸಂಸ್ಥೆಗಳ ನೆರವಿನ ಮೂಲಕ ಅವರಿಗೆ ಊಟೋಪಚಾರದ ವ್ಯವಸ್ಥೆ ಕಲ್ಪಿಸಬೇಕು. ಇಟ್ಟಿಗೆ ಭಟ್ಟಿ, ಸವಿತಾ ಸಮಾಜ, ಕಟ್ಟಡ ಕಾರ್ಮಿಕರು, ನಿರ್ಗತಿಕರನ್ನು ಗುರುತಿಸಿ ಸೌಲಭ್ಯೊದಗಿಸಬೇಕೆಂದು ಸಚಿವ ಜಗದೀಶ ಶೇಟರ ಅಧಿಕಾರಿಗಳಿಗೆ ಸೂಚಿಸಿದರು.
ಜನಸಾಮಾನ್ಯರಿಗೆ ತೊಂದರೆಯಾಗದಂತೆ ಮನೆಮನೆಗೆ ದಿನಸಿ ಹಾಗೂ ತರಕಾರಿ ತಲುಪಲು ಕ್ರಮ ಕೈಗೊಳ್ಳಬೇಕು. ಊಟೋಪಚಾರ ಪಾರ್ಸಲ್ ಒದಗಿಸಲು ಹೊಟೇಲ್ ಆರಂಭಿಸಲು ಅವಕಾಶ ಕೊಡಬೇಕು ಎಂದು ಸಚಿವರು ಸೂಚಿಸಿದರು.
ಇದೇ ಸಂದರ್ಭದಲ್ಲಿ ಕೋವಿಡ್ -19 ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲೆಯ ಕಟ್ಟಡ ಕಾರ್ಮಿಕರಿಗೆ ಸ್ಯಾನಿಟೈಸರ್, ಮಾಸ್ಕ ಖರೀದಿಸಲು ಕಾರ್ಮಿಕ ಇಲಾಖೆಯ ವತಿಯಿಂದ ರೆಡ್ ಕ್ರಾಸ್ ಸಂಸ್ಥೆಗೆ ಎಂಟು ಲಕ್ಷ ರೂಪಾಯಿಗಳ ಚಕ್ ನೀಡಲಾಯಿತು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕು ಸಾಗಾಣಿಕೆಗೆ ಕೇಂದ್ರ ಸರ್ಕಾರ ನೀಡಿರುವ ಅನುಮತಿ ಹಿನ್ನಲೆಯಲ್ಲಿ ಇಂದು ಸಂಜೆ ಲಾರಿ ಸಂಘಟನೆಯವರೊಂದಿಗೆ ಜಿಲ್ಲಾಧಿಕಾರಿಯವರು ಸಭೆ ನಡೆಸಿದ ನಂತರ, ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಎಲ್ಲಡೆ ಅವಕಾಶ ಕಲ್ಪಿಸಲಾಗುವುದು. ಅದಕ್ಕೆ ಅಗತ್ಯಪಾಸ್ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರುಕರೆ ಕೊಟ್ಟಿರುವ ಲಾಕ್ ಡೌನ್ ಗೆ ಜನರಿಂದ ಉತ್ತಮ ಪ್ರತಿಕ್ರಿಯೆ ದೊರಕಿದೆ. ಆದರೂ ಕಟ್ಟುನಿಟ್ಟಾಗಿ ಇನ್ನಷ್ಟು ಶಿಸ್ತು ಮತ್ತು ಸಂಯಮತೆಯನ್ನು ಪಾಲನೆ ಮಾಡಿದರೆ ಕೊರಾನು ನಿಯಂತ್ರಕ್ಕೆ ಸಾಧ್ಯವಾಗಲಿದೆ. ಸೋಂಕು ರೋಗು ಮೂರನೇ ಹಂತಕ್ಕೆ ತಲುಪಿದರೆ ಹೆಚ್ಚಿನ ಅಪಾಯ ಎದುರಿಸಬೇಕಾಗುವುದರಿಂದ ಸಾರ್ವಜನಿಕರಿ ಲಾಕ್ ಡೌನಗೆ ಸಹಕರಿಸಬೇಕೆಂದು ವಿನಂತಿಸಿಕೊಂಡರು.
ಬೆಳಗಾವಿ ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಕೊರಾನಾ ಸೋಂಕು ಪ್ರಕರಣ ಕಂಡು ಬರದೇ ಇರುವುದು ಸಮಾಧಾನ ತಂದಿದೆ. ಈ ಹಿನ್ನಲೆಯಲ್ಲಿ ಜಿಲ್ಲಾ ಆಡಳಿತ ಮತ್ತು ಪೊಲೀಸ್ ವ್ಯವಸ್ಥೆ ಕೈಗೊಂಡಿರುವ ಕಾರ್ಯ ಶ್ಲಾಘನೀಯ. ಅದಕ್ಕಾಗಿ ಅವರನೆಲ್ಲ ಅಭಿನಂದಿಸುತ್ತೇನೆ ಎಂದು ಸಚಿವ ಜಗದೀಶ ಶೆಟ್ಟರ ತಿಳಿಸಿದರು.
***