Breaking News

ಸುರೇಶ ಅಂಗಡಿ ಅವರ ಪಾರ್ಥೀವ ಶರೀರವನ್ನು ಬೆಳಗಾವಿಗೆ ತರಲು ಬಹಳ ಪ್ರಯತ್ನ ಮಾಡಿದೆ.

ದಿವಂಗತ ಸುರೇಶ್ ಅಂಗಡಿ ಅವರಿಗೆ ಗಣ್ಯರ ನಮನ

ಬೆಳಗಾವಿ,-ಬೆಳಗಾವಿಯ ಸದಾಶಿವ ನಗರ ಬಳಿಯ ಸಂಪಿಗೆ ನಗರದಲ್ಲಿರುವ ರೈಲ್ವೆ ಇಲಾಖೆಯ ರಾಜ್ಯ ಸಚಿವ ಹಾಗೂ ಸಂಸದರಾಗಿದ್ದ ದಿವಂಗತ ಸುರೇಶ್ ಅಂಗಡಿ ಅವರಿಗೆ ಗಣ್ಯರು ಇಂದು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.

ಕೈಗಾರಿಕಾ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಜಗದೀಶ್ ಶೆಟ್ಟರ್ ದಂಪತಿ, ಶಾಸಕ ಅನಿಲ್ ಬೆನಕೆ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಪೊಲೀಸ್ ಆಯುಕ್ತರಾದ ತ್ಯಾಗರಾಜನ್, ಡಿಸಿಪಿ ವಿಕ್ರಮ್, ಬೆಳಗಾವಿ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಶಶಿಧರ್ ಕುರೇರ್, ಮಹಾನಗರ ಪಾಲಿಕೆಯ ಆಯುಕ್ತರಾದ ಜಗದೀಶ್ ಕೆ.ಎಚ್. ಸೇರಿದಂತೆ ಅನೇಕ ಗಣ್ಯರು ಅಗಲಿದ ನಾಯಕ ಸುರೇಶ್ ಅಂಗಡಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಶ್ರದ್ಧಾಂಜಲಿ ಸಲ್ಲಿಸಿದರು.

ದಿವಂಗತ ಸುರೇಶ್ ಅಂಗಡಿ ಅವರ ಪತ್ನಿ, ಮಕ್ಕಳು ಹಾಗೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

ಬೆಳಗಾವಿಯಲ್ಲಿ,ಸುರೇಶ್ ಅಂಗಡಿ ಸ್ಮಾರಕ ನಿರ್ಮಾಣ

ಬೆಳಗಾವಿ- ದಿವಂಗತ ಸುರೇಶ್ ಅಂಗಡಿ ನಿವಾಸದಲ್ಲಿ ಸಚಿವ ಜಗದೀಶ್ ಶೆಟ್ಟರ್ ಮಾದ್ಯಮಗಳ ಜೊತೆ ಮಾತನಾಡಿ, ಬೆಳಗಾವಿಯಲ್ಲಿ ಸುರೇಶ್ ಅಂಗಡಿ ಸ್ಮಾರಕ ನಿರ್ಮಿಸಬೇಕು ಎನ್ನುವುದು ಅಭಿಮಾನಿಗಳ ಅಭಿಲಾಷೆ ಆಗಿದೆ, ಮುಂದಿನ ದಿನಗಳಲ್ಲಿ ಕುಟುಂಬಸ್ಥರು ಮತ್ತು
ಸ್ಥಳೀಯ ನಾಯಕರ ಜೊತೆ ಚರ್ಸಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.

ಅವರು ಸರಳ ಸಜ್ಜನಿಕೆಯ ರಾಜಕಾರಣಿ ಅಪಾರ ಅಭಿನಾನಿಗಳನ್ನು ಅಗಲಿದ್ದಾರೆ,ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ನೀಡಲಿ, ಅವರ ಪಾರ್ಥಿವ ಶರಿರವನ್ನು ಬೆಳಗಾವಿಗೆ ತರಲು ಬಹಳ ಪ್ರಯತ್ನ ಮಾಡಿದೆ,ಆದರೆ ಕರೋನಾ ನಿಯಮಾವಳಿಯಂತೆ ಅಲ್ಲಿಯೇ ಅಂತ್ಯಕ್ರಿಯೆ ಮಾಡಬೇಕಾಯಿತು,ಎಂದು ಜಗದೀಶ್ ಶೆಟ್ಟರ್ ಹೇಳಿದ್ರು.

ಕರೋನಾ ಜಾಗೃತಿ ಮೂಡಿಸಲು ಸುರೇಶ್ ಅಂಗಡಿ ರಾಜ್ಯಾದ್ಯಂತ ಸಂಚರಿಸಿದರು, ಜನರ ಹಿತ ಕಾಪಾಡಲು ಹೋಗಿ ಅವರ ಆರೋಗ್ಯ ನಿರ್ಲಕ್ಷ್ಯ ಮಾಡಿದ್ರು ಅನಿಸುತ್ತೆ, ರಾಜ್ಯದ ಅಭಿವೃದ್ಧಿ ಮತ್ತು ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬಹಳ ಕನಸ್ಸು ಹೊತ್ತಿದ್ರು,ಅವರನ್ನು ಕಳೆದುಕೊಂಡು ರಾಜ್ಯರಾಜಕಾರ ಬಡವಾಗಿದೆ,ಎಂದು ಶೆಟ್ಟರ್ ಸಂತಾಪ ವ್ಯೆಕ್ತ ಪಡಿಸಿದರು.

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *