ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಭರ್ಜರಿ ಜಯಭೇರಿ ಸಾಧಿಸಿ ಸಂಸದರಾಗಿ ಆಯ್ಕೆಯಾಗಿ, ದೆಹಲಿಗೆ ಹೋಗಿ, ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣವಚನ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಬೆಳಗಾವಿಗೆ ಮರಳಿ ಬಂದಿರುವ ಜಗದೀಶ್ ಶೆಟ್ಟರ್ ಅವರು ಸೇವಾ ಅವಧಿಯ ಮೊದಲ ದಿನ ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ತಮ್ಮ ಗೆಲುವಿಗೆ ಶ್ರಮಿಸಿದ ಎಲ್ಲ ನಾಯಕರಿಗೆ ಕಾರ್ಯಕರ್ತರಿಗೆ ಧನ್ಯವಾದ ಹೇಳಿದ ಬಳಿಕ ಮೊದಲ ದಿನವೇ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ತೆರಳಿ ಅಲ್ಲಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ನಿಲ್ಧಾಣದ ಅಭಿವೃದ್ಧಿ ಕಾಮಗಾರಿಗಳನ್ನು ಪರಶೀಲಿಸಿದ್ದಾರೆ. ನಾಳೆ ಶುಕ್ರವಾರ ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೇಂದ್ರದ ಯೋಜನೆಗಳ ಪ್ರಗತಿ ಪರಶೀಲನೆ ಮಾಡಲಿದ್ದಾರೆ. ಅಂತೂ ಇಂತೂ ಬೆಳಗಾವಿಯಲ್ಲಿ ಶೆಟ್ರ ಅಂಗಡಿ ಓಪನ್ ಆಗಿದೆ.ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಪರ್ವ ಇಂದಿನಿಂದ ಶುರುವಾಗಿದೆ.
ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ : ಜಗದೀಶ ಶೆಟ್ಟರ
ಬೆಳಗಾವಿ : ನೂತನ ಬೆಳಗಾವಿ ಸಂಸದರಾದ ಜಗದೀಶ್ ಶೆಟ್ಟರ್ ಅವರು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ವಿಮಾನ ನಿಲ್ದಾಣದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಮಾಹಿತಿ ಪಡೆದರು.
ಬೆಳಗಾವಿ ವಿಮಾನಯಾನ ಪ್ರಾಧಿಕಾರದ ಅಭಿವೃದ್ಧಿಗೆ ಸಂಬಂಧಿಸಿದಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಬಾಕಿ ಉಳಿದಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.
322 ಕೋಟಿ ರೂಪಾಯಿ ಅನುದಾನದ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಡೊಮೆಸ್ಟಿಕ್ ಟರ್ಮಿನಲ್ – T2 ಅಭಿವೃದ್ಧಿ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿ ಕಾರ್ಯಯೋಜನೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಏರ್ಪೋರ್ಟ್ ಡೈರೆಕ್ಟರ್ ಆದ ಎಸ್. ತ್ಯಾಗರಾಜನ್, ಡಿಜಿಎಂ ಪಿ.ಎಸ್ ದೇಸಾಯಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ



