ಬೆಳಗಾವಿ- ಖಾನಾಪೂರ ತಾಲ್ಲೂಕಿನ ಬೋಗೂರು ಗ್ರಾಮದಲ್ಲಿ ಟ್ರ್ಯಾಕ್ಟರ್ ಹಳ್ಳಕ್ಕೆ ಬಿದ್ದು ಆರು ಜನರು ಮೃತಪಟ್ಟಿದ್ದು ಮೃತರ ಕುಟುಂಬದವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ತಲಾ ಐದು ಲಕ್ಷ ರೂ ಪರಿಹಾರ ವಿತರಿಸಿದರು.
ಪರಿಹಾರ ವಿತರಣೆ ಮಾಡುವ ಮುನ್ನ ಜಗದೀಶ್ ಶೆಟ್ಟರ್ ಅಪಘಾತ ಸಂಭವಿಸಿದ ಸ್ಥಳವನ್ನು ಪರಶೀಲನೆ ಮಾಡಿದರು.
ಬೆಳಗಾವಿ ಜಿಲ್ಲಾಧಿಕಾರಿ,ಬೊಮ್ಮನಹಳ್ಳಿ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಬೋಗೂರು ಗ್ರಾಮದ ಹಿರಿಯರು ಉಪಸ್ಥಿತರಿದ್ದರು
ಈ ಸಂಧರ್ಭದಲ್ಲಿ ಮಾದ್ಯಮಗಳ ಜೊತೆಗೆ ಮಾತನಾಡಿದ ಜಗದೀಶ್ ಶೆಟ್ಟರ್ ಫೆಬ್ರುವರಿ 28,ಹಾಗೂ 29 ರಂದು ಬೆಳಗಾವಿಯಲ್ಲಿ ಪ್ರಾದೇಶಿಕ ಉದ್ಯೋಗ ಮೇಳ ನಡೆಯಲಿದೆ ಈ ಮೇಳದ ವೆಬ್ ಸೈಟ್ ಮತ್ತು ಲಾಂಛನ ಇವತ್ತು ಬಿಡುಗಡೆ ಮಾಡುತ್ತೇನೆ ,ಗಡಿ ವಿವಾದ ಮುಗಿದ ಆದ್ಯಾಯ,ಮಹಾರಾಷ್ಟ್ರ ಕ್ಯಾತೆ ತೆಗೆಯುವುದು ಸರಿಯಲ್ಲ ಮಹಾಜನ ವರದಿಯೇ ಅಂತಿಮ ,ಗಡಿವಿವಾದ ಆಗಿರಲಿ ಮಹಾದಾಯಿ ವಿಚಾರವೇ ಆಗಿರಲಿ ಸರ್ಕಾರ ಕಾನೂನು ಹೋರಾಟದ ಮೂಲಕ ರಾಜ್ಯದ ಹಿತಾಸಕ್ತಿ ಕಾಯುತ್ತದೆ.ಬೋಗೂರು ಹಳ್ಳಕ್ಕೆ ಟ್ರಾಕ್ಟರ್ ಬಿದ್ದು ಆರು ಜನ ಪ್ರಾಣ ಕಳೆದುಕೊಂಡು ಹಲವಾರು ಜನ ಗಾಯಗೊಂಡಿದ್ದರು,ಮೃತಪಟ್ಟವರ ಕುಟುಂಬಳಿಗೆ ತಲಾ ಐದು ಲಕ್ಷ ರೂ ಪರಿಹಾರ ಕೊಟ್ಟಿದ್ದೇವೆ ಗಾಯಗೊಂಡವರಿಗೂ ಪರಿಹಾರ ನೀಡಬೇಕೆಂದು ಸ್ಥಳಿಯರು ಆಗ್ರಹಿಸಿದ್ದು ಈ ಕುರಿತು ಮುಖ್ಯಮಂತ್ರಿ ಗಳ ಜೊತೆ ಮಾತಾಡುತ್ತೇನೆ ಎಂದು ಜಗದೀಶ್ ಶೆಟ್ಟರ್ ಹೇಳಿದರು.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ