ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡುವಂತೆ ರಾಜ್ಯದ ವಸತಿ,ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಆದೇಶ ಹೊರಡಿಸಿದ್ದಾರೆ.
ಜಮ್ಮು ಕಾಶೀರದ ಪೆಹಲ್ಗಾಮ್ ನಲ್ಲಿ ಅಮಾಯಕ ಪ್ರವಾಸಿಗರನ್ನು ಹತ್ಯೆ ಮಾಡಿದ ಉಗ್ರರರನ್ನು ಆಪರೇಷನ್ ಸಿಂಧೂರ್ ಮೂಲಕ ದಮನ ಮಾಡಿ ಪಾಕಿಸ್ತಾನದಲ್ಲಿರುವ ಭಯೋತ್ಪಾದಕರ ನೆಲೆಗಳನ್ನು ಧ್ವಂಸ ಮಾಡಿದ ಭಾರತೀಯ ಸೇನೆಗೆ ಶಕ್ತಿ ತುಂಬಲು ನಾಳೆ ಶುಕ್ರವಾರ ನಮಾಜ್ ಬಳಿಕ ರಾಜ್ಯದ ಎಲ್ಲ ವಕ್ಫ್ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡುವಂತೆ ಸಚಿವ ಜಮೀರ್ ಅಹ್ಮದ್ ಖಾನ್ ಆದೇಶ ಹೊರಡಿಸಿದ್ದಾರೆ.