Breaking News

ಸರ್ಕಾರದ ಸವಲತ್ತುಗಳನ್ನು ಜನರಿಗೆ ತಲುಪಿಸಿ,ಅಧಿಕಾರಿಗಳಿಗೆ ಖಡಕ್ ಸೂಚನೆ

ಸರ್ಕಾರದ ಸವಲತ್ತುಗಳನ್ನು ಜನರಿಗೆ ತಲುಪಿಸುವ ಪ್ರಾಮಾಣಿಕ ಕೆಲಸ ಮಾಡಿ : *ಕೊರೋನಾ ಜಾಗೃತಿ ಸಭೆ* ಯಲ್ಲಿ ಅಧಿಕಾರಿಗಳಿಗೆ *ಸಚಿವ ರಮೇಶ್ ಜಾರಕಿಹೊಳಿ* ಸೂಚನೆ

ಮೂಡಲಗಿ: ಪಟ್ಟಣದ ಎಲ್ಲ ಗ್ರಾಮಗಳ ಜನರಿಗೆ ಸರ್ಕಾರ ಒದಗಿಸಿರುವಂತಹ ಸವಲತ್ತುಗಳು ಕೂಡಲೇ ಪೂರೈಕೆಯಾಗಬೇಕು. ಸಾರ್ವಜನಿಕರಿಗೆ ಅಗತ್ಯವಿರುವಂತ ವಸ್ತುಗಳನ್ನು ಒದಗಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು ಎಂದು *ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ* ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದಲ್ಲಿ ಇಂದು ನಡೆದ ಜಿಲ್ಲಾ ಪಂಚಾಯಿತಿ, ಪುರಸಭೆ ಸದಸ್ಯರು ಹಾಗೂ ಅಧಿಕಾರಿಗಳ *ಕೊರೋನಾ ಜಾಗೃತಿ ಸಭೆ* ಯಲ್ಲಿ ಮಾತನಾಡಿದ ಸಚಿವ *ರಮೇಶ್ ಜಾರಕಿಹೊಳಿ‌,*
ಮಹಾಮಾರಿ ಕೊರೊನಾ ಸೋಂಕು ಪ್ರಪಂಚದಲ್ಲಿ ವ್ಯಾಪಕವಾಗಿ ಹರಡಿದೆ. ಅದೇ ರೀತಿ ನಮ್ಮ ಭಾರತದಲ್ಲಿಯೂ ಹಬ್ಬಿದೆ. ಇದರಿಂದ ಜನರು ಸಹ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಲಾಕ್ ಡೌನ್ ಇರುವ ಹಿನ್ನೆಲೆ ಜನರಿಗೆ ಅಗತ್ಯ ವಸ್ತುಗಳ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಜತೆಗೆ ಸರ್ಕಾರದ ಎಲ್ಲ ಸವಲತ್ತುಗಳನ್ನು ತಲುಪಿಸುವ ಕೆಲಸವನ್ನು ಕೂಡಲೇ ಮಾಡಬೇಕು ಎಂದರು.
ಜನರಿಗೆ ಕೊರೊನಾ ಬಗ್ಗೆ ಭಯ ಬೇಡ. ಆದರೆ  ಎಚ್ಚರಿಕೆಯಿಂದ ಇರಬೇಕು. ಸರ್ಕಾರದ ಲಾಕ್ ಡೌನ್ ನಿಯಮಗಳನ್ನು ಪಾಲಿಸಬೇಕು  ಎಂದು ತಿಳಿಸಿದರು. ಇದೇ ವೇಳೆ ಆರೋಗ್ಯ ಇಲಾಖೆ ಅಧಿಕಾರಿಗಳು ಕೊರೊನಾ ಜಾಗೃತಿ ಮೂಡಿಸಿದರು.

ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಆರೋಗ್ಯ ಇಲಾಖೆ ಶಿಕ್ಷಣ ಇಲಾಖೆ,  ಊರಿನ ಪ್ರಮುಖ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *