ಬೆಳಗಾವಿ- ರಾಜ್ಯದ ಗಡಿನಾಡು ಗುಡಿ ಬೆಳಗಾವಿಯಲ್ಲಿ ಮೊಟ್ಟಮೊದಲ ಬಾರಿಗೆ ವಿಧಾನ ಮಂಡಲದ ಅಧಿವೇಶನ ನಡೆಸಿ ಬೆಳಗಾವಿಯಲ್ಲಿ ವಿಶ್ವ ಕನ್ನಡ ಸಮ್ಮೇಳನ ನಡೆಸುವ ನಿರ್ಧಾರ ಕೈಗೊಂಡು ಉತ್ತರ ಕರ್ನಾಟಕದ ಅಭಿವೃದ್ಧಿಗೆ ನಾಂದಿ ಹಾಡಿದ ನಾಡಿನ ಹೆಮ್ಮೆಯ ಮುಖ್ಯಮಂತ್ರಿಯಾಗಿ ಅಪಾರ ಜನ ಮೆಚ್ವುಗೆ ಗಳಿಸಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಚಳಿಗಾಲದ ಅಧಿವೇಶನದ ಸಂಧರ್ಭದಲ್ಲಿ ನವ್ಹೆಂಬರ 14 ರಂದು ಬೃಹತ್ತ ಸನಾವೇಶ ನಡೆಸಲು ನಿರ್ಧರಿಸಿದ್ದಾರೆ
14 ರಂದು ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆಯುವ ಜೆಡಿಎಸ್ ಸಮಾವೇಶದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಜೆಡಿಎಸ್ ಶಾಸಕರು ಸೇರಿದಂತೆ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಒಂದು ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಲಿದ್ದಾರೆ
ಉತ್ತರ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ನಿಜವಾಗಿಯೂ ಹಲವಾರು ಕೊಡುಗೆ ನೀಡಿದ ಕುಮಾರಣ್ಣ ಬೆಳಗಾವಿಯಲ್ಲಿ ಸಮಾವೇಶ ನಡೆಸಿ ಈ ಭಾಗದ ಅಭಿವೃದ್ಧಿಗೆ ಒತ್ತಾಯ ಮಾಡಲಿದ್ದಾರೆ
ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಧ್ವನಿ ಎತ್ತಿ ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆಗೊಂಡು ಜೆಡಿಎಸ್ ಪಕ್ಷ ಸೇರಿಕೊಂಡಿರುವ ಶಾಸಕ ನಡಹಳ್ಳಿ ಅವರ ಪಾದಯಾತ್ರೆ 14 ರಂದು ಕಾಕತಿ ತಲುಪಲಿದ್ದು ಈ ಪಾದಯಾತ್ರೆ ಯಲ್ಲಿ ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ಶಾಸಕರು ಭಾಗವಹಿದಲಿದ್ದಾರೆ ಈ ಪಾದಯಾತ್ರೆ ಮಧ್ಯಾಹ್ನ ಬೆಳಗಾವಿಗೆ ತಲುಪಲಿದ್ದು 14 ರಂದು ಮಧ್ಯಾಹ್ನ 3 ,ಘಂಟೆಗೆ ಬೆಳಗಾವಿಗೆ ಸಿಪಿಎಡ್ ಮೈದಾನದಲ್ಲಿ ಸಮಾವೇಶ ಆರಂಭಗೊಳ್ಳಲಿದೆ
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗಳ ಕಾರ್ಯಗಳನ್ನು ಮೆಚ್ಚಿ ಅವರ ಮೇಲೆ ಅಭಿಮಾನ ಇರುವ ಪ್ರತಿಯೊಬ್ಬರು ಈ ಸಮಾವೇಶದಲ್ಲಿ ಪಾಲ್ಗೊಳ್ಳಿ