ಬೆಳಗಾವಿ
ಸವದತ್ತಿ ಯಲ್ಲಮ್ಮ ಗುಡ್ಡದಲ್ಲಿ ಜೋಗಪ್ಪ ಸಮುದಾಯ ಭವನ ನಿರ್ಮಿಸುವಂತೆ ಆಗ್ರಹಿಸಿ ಗುರುವಾರ ಕರ್ನಾಟಲ ಲೈಂಗಿಕ ಅಲ್ಪಸಂಖ್ಯಾತರ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಕರ್ನಾಟಕದಲ್ಲಿ 25ಕ್ಕೂ ಹೆಚ್ಚು ಜಿಲ್ಲೆಯ ಲೈಂಗಿಕ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಸರಕಾರ, ನ್ಯಾಯಾಂಗ ಮತ್ತು ಸಮಾಜದಲ್ಲಿ ಲೈಂಗಿಕ ಅಲ್ಪಸಂಖ್ಯಾತರ ವಿಷಯದಲ್ಲಿ ಬದಲಾವಣೆ ತರುವುದು ನಮ್ಮ ಮುಖ್ಯ ಉದ್ದೇಶವಾಗಿದೆ. ಹಾಗೂ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಜೋಗಪ್ಪ ಸಮುದಾಯದಲ್ಲಿ ತುಂಬಾ ಕಳಂಕ, ತಾರತಮ್ಯ ಮತ್ತು ದೌರ್ಜನ್ಯದ ವಿಷಯದಲ್ಲಿ ಹೆಚ್ಚು ಒತ್ತು ನೀಡಿ ಕೆಲಸ ಮಾಡುತ್ತಾ ಬಂದಿದ್ದೇವೆ. ಸಮಾಜ ಹಾಗೂ ಅಧಿಕಾರಿಗಳು ನಮ್ಮ ಸಮಾಜವನ್ನು ನೋಡುವ ದೃಷ್ಟಿಯೇ ಬೇರೆ ಇದೆ.
ಯಲ್ಲಮ್ಮ ಗುಡ್ಡದಲ್ಲಿ ಜಾತ್ರೆಯ ಸಮಯದಲ್ಲಿ ಸಾವಿರಾರು ಜನರು ಸೇರಿರುತ್ತಾರೆ. ಆದರೆ ಜೋಗಪ್ಪ ಸಮುದಾಯದವರಿಗೆ ನಿಗದಿತ ಸ್ಥಳವಿಲ್ಲ. ಕೂಡಲೇ ಜಿಲ್ಲಾಡಳಿತ ಜೋಗಪ್ಪ ಸಮುದಾಯ ನಿರ್ಮಿಸದಿದ್ದರೆ ಉಗ್ರಹೋರಾಟ ನಡೆಸುವುದಾಗಿ ಮನವಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.
ಪ್ರತಿಭಟನೆಯಲ್ಲಿ ಮಲ್ಲಪ್ಪ ಕುಂಬಾರ, ತಾನಾಜಿ ಸಾವಂತ ಸೇರಿದಂತೆ ಐವತ್ತಕ್ಕೂ ಅಧಿಕ ಜನರು ಹಾಜರಿದ್ದರು
Check Also
ರಮೇಶ್ ಕತ್ತಿ, ರಾಜೀನಾಮೆ ಪತ್ರದಲ್ಲಿ ಏನಿದೆ ಗೊತ್ತಾ…?
ಮಾನ್ಯ ಮುಖ್ಯ ಕಾರ್ಯನಿರ್ವಾಹಕರು ದಿ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ.ಬೆಳಗಾವಿ ವಿಷಯ- ನನ್ನ ಅಧ್ಯಕ್ಷ ಸ್ಥಾನಕ್ಕೆ …