ಬೆಳಗಾವಿ-ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಕ್ಯಾಬಿನೇಟ್ ನಲ್ಲಿ ಬೆಳಗಾವಿ ಜಿಲ್ಲೆಯ ಉಮೇಶ್ ಕತ್ತಿ,ಮತ್ತು ಶಶಿಕಲಾ ಜೊಲ್ಲೆ ಇಬ್ಬರು ಮಾತ್ರ ಸಚಿವ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಡಿಸಿಎಂ ಆಗಿದ್ದ ಲಕ್ಷ್ಮಣ ಸವದಿ,ಮತ್ತು ಶ್ರೀಮಂತ್ ಪಾಟೀಲ ಅವರಿಗೆ ಶಾಕ್ ಆಗಿದ್ದು ಹೊಸ ಸಚಿವ ಸಂಪುಟದ ಪಟ್ಟಿಯಲ್ಲಿ ಅವರ ಹೆಸರು ಇಲ್ಲಬೆಳಗಾವಿ ಜಿಲ್ಲೆಯ ಇಬ್ಬರು ಸಚಿವ ಸ್ಥಾನ ಕಳೆದುಕೊಂಡಿದ್ದು ಇಬ್ಬರು ಮಾತ್ರ ಸಚಿವ ಸ್ಥಾನ ಪಡೆದಿದ್ದಾರೆ.
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಕ್ಷೇತ್ರದ ಶಾಸಕಿ ಶಶಿಕಲಾ ಜೊಲ್ಲೆ ಅವರು ಕೊನೆಯ ಘಳಿಗೆಯಲ್ಲಿ ಸಚಿವ ಸ್ಥಾನ ಪಡೆಯುವಲ್ಲಿ ಸಕ್ಸೆಸ್ ಆಗಿದ್ದಾರೆ.
ಶಾಸಕ ಅಭಯ ಪಾಟೀಲ,ಆನಂದ ಮಾಮನಿ,ಅವರಿಗೆ ಈ ಬಾರಿ ಸಚಿವ ಸ್ಥಾನ ಸಿಗಬಹುದು ಎನ್ನುವ ನಿರೀಕ್ಷೆ ಇತ್ತು,ಆದ್ರೆ ಹೊಸ ಸಚಿವ ಸಂಪುಟದಲ್ಲಿ ಇಬ್ಬರಿಗೆ ಮಾತ್ರ ಅವಕಾಶ ಸಿಕ್ಕಿದ್ದು,ಉಳಿದ ಆಕಾಂಕ್ಷಿಗಳಿಗೆ ನಿರಾಶೆಯಾಗಿದೆ.
ಡಿಸಿಎಂ ಲಕ್ಷ್ಮಣ ಸವದಿ ಯಡಿಯೂರಪ್ಪ ಸಚಿವ ಸಂಪುಟದಲ್ಲಿ ರಾತ್ರೋ ರಾತ್ರಿ ಡಿಸಿಎಂ ಹುದ್ದೆಯನ್ನು ಜಾಕ್ ಪಾಟ್ ಹೊಡೆದಿದ್ದರು.ಆದ್ರೆ ಬೊಮ್ಮಾಯಿ ಸಚಿವ ಸಂಪುಟದಿಂದ ಲಕ್ಷ್ಮಣ ಸವದಿ ಔಟ್ ಆಗಿದ್ದು,ಅವರನ್ನು ಕೈಬಿಟ್ಟಿರುವ ಸಂಗತಿ ಬೆಳಗಾವಿ ಜಿಲ್ಲೆಯ ರಾಜಕೀಯ ವಲಯವನ್ನು ಬೆಚ್ಚಿಬೀಳಿಸಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ