ಬೆಳಗಾಬಿ- ಕನ್ನಡ ಚಿತ್ರ ನಟ ರಾಕಿಂಗ್ ಸ್ಟಾರ್ ಯಶ್ ಅವರು ಶನಿವಾರ ಬೆಳಗಾವಿಗೆ ಅನಿರೀಕ್ಷಿತ ಭೇಟಿ ನೀಡಿ ವೀರ ರಾಣಿ ಕಿತ್ತೂರ ಚನ್ನಮ್ಮಾಜಿಯ ಪ್ರತಿಮೆಗೆ ಪುಷ್ಪ ಗೌರವ ಸಲ್ಲಿಸಿದರು
ನಗರದ ಚನ್ನಮ್ಮ ವೃತ್ತದಲ್ಲಿ ಯಶ್ ಅಭಿಮಾನಿಗಳು ಪಟಾಕಿ ಸಿಡಿಸಿ ಅದ್ಧೂರಿಯಾಗಿ ಬರಮಾಡಿಕೊಂಡರು ಈ ಸಂಧರ್ಭದಲ್ಲಿ ಮಾದ್ಯಮಗಳ ಜೊತೆ ಮಾತಮಾಡಿದ ಯಶ್ ಕಳೆದ ವರ್ಷ ಉತ್ತರ ಕರ್ನಾಟಕದ ೧೫೦ ಗ್ರಾಮಗಳಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿದ್ದೆ ಆದರೆ ಈ ವರ್ಷ ಉತ್ತರ ಕರ್ನಾಟಕದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಯಶೋ ಮಾರ್ಗ ಟ್ರಸ್ಟ ಮೂಲಕ ಶಾಶ್ವತ ಪರಿಹಾರ ಕಂಡು ಹಿಡಿಯುತ್ತೇವೆ ಎಂದರು
ಈಗಾಗಲೇ ವಿಜಯಪೂರ ಜಿಲ್ಲೆ ಗೆ ಭೇಟಿ ನೀಡಿ ಅಲ್ಲಿಯ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡಿದ್ದೇನೆ ಈಗ ಬೆಳಗಾವಿ ಜಿಲ್ಲೆಗೆ ಬಂದಿದ್ದು ಉತ್ತರ ಕರ್ನಾಟದ ಎಲ್ಲ ಜಿಲ್ಲೆಗಳ ಪ್ರವಾಸ ಮಾಡುತ್ತೇನೆ ಎಂದು ಯಶ್ ತಿಳಿಸಿದರು ಮುಂದಿನ ಚಿತ್ರ ಕೆಜಿಎಫ್ ಆಗಿದ್ದು ಸಾಧ್ಯವಾದರೆ ಈ ಚಿತ್ರದ ಶೂಟಿಂಗ್ ಬೆಳಗಾವಿಯಲ್ಲಿ ನಡೆಸುತ್ತೇನೆ ಎಂದು ಯಶ್ ತಿಳಿಸಿದರು
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ