ರಾಜ್ಯದ ರೈತರಿಗೆ ಸಾಲ ಮನ್ನಾ ಭಾಗ್ಯ..ಸಿಎಂ ಘೋಷಣೆ
ಬೆಂಗಳೂರು: ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ಸಾಲ ಮನ್ನಾ ಭಾಗ್ಯವನ್ನು ಒದಗಿಸಿದೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಾಲ ಮನ್ನಾ ಮಾಡುವ ಘೋಷಣೆ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ
ಪ್ರತಿಪಕ್ಷಗಳ ಒತ್ತಾಯಕ್ಕೆ ಮಣಿದಿರುವ ರಾಜ್ಯ ಸರ್ಕಾರ ಕೊನೆಗೂ ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದೆ. ಸಹಕಾರಿ ಬ್ಯಾಂಕ್ ಗಳಲ್ಲಿನ 50 ಸಾವಿರ ರೂ. ವರೆಗಿನ ರೈತರ ಸಾಲಮನ್ನಾ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಜೂನ್ 20 ರ ವರೆಗಿನ ಪ್ರತಿ ರೈತರ ಸಾಲ ಮನ್ನಾ ಮಾಡುವುದಾಗಿ ವಿಧಾನ ಸಭೆಯಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ.
ಸಾಲಮನ್ನಾದಿಂದ 22,227,506 ರಾಜ್ಯದ ರೈತರಿಗೆ ಅನುಕೂಲವಾಗಲಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ 8,165 ಕೋಟಿ ರು ಹೊರೆಯಾಗಲಿದೆ.
ರೈತರ ಸಾಲಮನ್ನಾ ಮಾಡುವಂತೆ ಬಿಜೆಪಿ ಹಲವು ದಿನಗಳಿಂದ ಪಟ್ಟು ಹಿಡಿದಿತ್ತು. ಸಾಲ ಮನ್ನಾ ಮಾಡದಿದ್ದರೇ ಬೃಹತ್ ಹೋರಾಟ ನಡೆಸುವುದಾಗಿ ಬಿಜೆಪಿ ಎಚ್ಚರಿಕೆ ನೀಡಿತ್ತು.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ