ಮುಖ್ಯಮಂತ್ರಿ- ಬಿ-ಎಸ್ ಯಡಿಯೂರಪ್ಪ
ಬೆಳಗಾವಿ-ವಿಧಾನ ಪರಿಷತ್ತು ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಅವರ ಮಗಳ ಮದುವೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ, ಹಿರಿಯ ಸಚಿವರುಗಳಾದ ಬಸವರಾಜ ಬೊಮ್ಮಾಯಿ, ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ, ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ಗೋವಿಂದ ಕಾರಜೋಳ, ಸಿ.ಟಿ. ರವಿ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡು ಆಶೀರ್ವದಿಸಿದರು.
ಮದುವೆಗೆ ಆಗಮಿಸಿದ ಮುಖ್ಯಮಂತ್ರಿಯವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಕೋರೋಣ ಬಗ್ಗೆ ಎಲ್ಲ ರೀತಿಯ ಮುಂಜಾಗೃತೆ ಕ್ರಮ ತೆಗೆದುಕೊಳ್ಳಲಾಗಿದ್ದು, ಅನಗತ್ಯ ಆತಂಕಪಡಬೇಕಾಗಿಲ್ಲ ಎಂದು ತಿಳಿಸಿದರು.
ರಾಜ್ಯದಲ್ಲಿ ಕೋರೋಣದಿಂದ ಓರ್ವರು ಅಸುನೀಗಿದ್ದು, 6 ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ. ನೂರು ಜನರನ್ನು ಚಿಕಿತ್ಸೆ ಒಳಪಡೆಸಲಾಗಿದೆ. ರಾಜ್ಯದ ಎಲ್ಲ ವಿಮಾನ ನಿಲ್ದಾಣಗಳಲ್ಲಿ ಸೋಂಕು ಹರಡದಂತೆ ಕ್ರಮ ತೆಗೆದುಕೊಳ್ಳಲಾಗಿದೆ. ಇಂದು ಧಾರವಾಡದಲ್ಲಿ ಹಿರಿಯ ಪತ್ರಕರ್ತರಾದ ಪಾಟೀಲ ಪುಟ್ಟಪ್ಪನವರನ್ನು ಭೆಟ್ಟಿಯಾಗಿ ಆರೋಗ್ಯ ಬಗ್ಗೆ ವಿಚಾರಸಿಕೊಳ್ಳಲಿದ್ದೇನೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಸಚಿವ ಸಿ.ಟಿ. ರವಿ
ಕೊರೋನೊ ವೈರಸ್ ಸೋಂಕಿನ ತಡೆಗಟ್ಟುವಲ್ಲಿ ಕೇವಲ ಸರ್ಕಾರದ ಇಲಾಖೆಗಳು ಪ್ರಯತ್ನಿಸಿದರೆ ಸಾಲದು, ಕೇಂದ್ರದ ಆರೋಗ್ಯ ಇಲಾಖೆ ಸೂಚಿಸಿರುವ ಸಲಹೆಗಳನ್ನು ಇಡೀ ಸಮಾಜ ಜಾಗುರುಕತೆಯಿಂದ ನಿರ್ವಹಿಸುವುದು ಅತ್ಯಗತ್ಯವಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಸಿ.ಟಿ. ರವಿ ತಿಳಿಸಿದ್ದಾರೆ.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಇಂದು ಮಾತನಾಡಿದ ಅವರು, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವಿವಿಧ ಪ್ರಾಧಿಕಾರ ಅಕಾಡೆಮಿ ಸಂಸ್ಥೆಗಳಿಗೆ ಸರ್ಕಾರ ಅನುದಾನ ಕಡಿತಗೊಳಿಸುವುದರ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ. ಸಂಸ್ಥೆಗಳ ಪಾಧಿಕಾರಿಗಳೂ ಸಹಿತ ಮುಖ್ಯಮಂತ್ರಿಗಳನ್ನು ಭೆಟ್ಟಿ ಮಾಡಿ ಅನುದಾನ ಹೆಚ್ಚಿಸಲು ವಿನಂತಿಸಿಕೊಂಡಿದ್ದಾರೆ. ಬಜೆಟ್‍ನಲ್ಲಿ ಅನುದಾನ ಹೆಚ್ಚಳ ಪ್ರಸ್ತಾಪವಾಗಿಲ್ಲ. ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ನೀಡುವ ಬಗ್ಗೆ ಕ್ರಮಕೈಗೊಂಡು ಸರಿಪಡೆಸಲಾಗುವುದು ಎಂದು ಭರವಸೆ ನೀಡಿದರು.
ಬಸವರಾಜ ಬೊಮ್ಮಾಯಿ
ಕೊರೋನೊ ವೈರಸ್ ಸೋಂಕು ನಿಯಂತ್ರಣ ದೃಷ್ಟಿಯಿಂದ ಗೃಹ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸುತ್ತಿವೆ ಎಂದು ಗೃಹ ಇಲಾಖೆ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಾರ್ವಜನಿಕ ವಲಯದಲ್ಲಿ ಕೆಲಸ ಮಾಡುವ ಪೊಲೀಸ್ ಸಿಬ್ಬಂದಿಯವರಿಗೆ ಸೋಂಕು ತಗುಲದಂತೆ ಮುಂಜಾಗೃತೆ ಕ್ರಮ ತೆಗೆದುಕೊಳ್ಳಲಾಗಿದೆ. ಬೆಂಗಳೂರು ಮತ್ತು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ರಾಜ್ಯದ ಎಲ್ಲ ವಿಮಾನ ನಿಲ್ದಾಣಗಳಲ್ಲಿ ಕರೋನಾ ಸೋಂಕಿನ ಬಗ್ಗೆ ಮುಂಜಾಗೃತಿ ಕ್ರಮ ತೆಗೆದುಕೊಳ್ಳಲಾಗಿದೆ. ವಿದೇಶದಿಂದ ಆಗಮಿಸುತ್ತಿರುವ ಎಲ್ಲರನ್ನು ಕಡ್ಡಾಯವಾಗಿ ಪರೀಕ್ಷೆಗೆ ಒಳಪಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ