ಬಂದ್ ಮಿಶ್ರ ಪ್ರತಿಭಟನೆ….
ಬೆಳಗಾವಿ- ತಮಿಳು ನಾಡಿಗೆ ನೀರು ಹರಿಸುತ್ತಿರುವುದನ್ನ ವಿರೋಧಿಸಿ ಇವತ್ತು ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮಿಶ್ರ ಪ್ರತ್ರಿಕ್ರಿಯೆ ವ್ಯಕ್ತವಾಗಿದೆ. ಬೆಳಿಗ್ಗೆಯಿಂದ ಬಸ್ ಸಂಚಾರ ಎಂದಿನಂತೆ ಇದ್ದು, ನೆರೆಯ ಗೋವಾ-ಮಹಾರಾಷ್ಟ್ರ ರಾಜ್ಯಗಳಿಗೆ ತೆರಳಬೇಕಿದ್ದ ಬಸ್ ಗಳು ಹಾಗೂ ಜಿಲ್ಲೆಯ ಬೇರೆ ಬೇರೆ ಕಡೆಗಳಿಗೆ ತೆರಳಬೇಕಿದ್ದ ಬಸ್ ಗಳು ಎಂದಿನಂತೆ ಸಂಚರಿಸುತ್ತಿವೆ. ಇನ್ನೂ ಖಾಸಗಿ ಬಸ್ ಸಂಚಾರ, ಅಟೋ ಸಂಚಾರದಲ್ಲೂ ಸಹ ಯಾವುದೇ ವ್ಯತ್ಯಯ ಕಂಡು ಬಂದಿಲ್ಲ. ಇನ್ನೂ ಜಿಲ್ಲೆಯಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ಸಹ ರಜೆ ಇರಲಿಲ್ಲ ಹೀಗಾಗಿ ಎಲ್ಲ ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು ನಗರದಎಲ್ಲ ಅಂಗಡಿ ಮುಗ್ಗಟ್ಟುಗಳು ತೆರೆದುಕೊಂಡಿದ್ದವು
ಸಿಎಂ ಭಾವಚಿತ್ರಕ್ಕೆ ಚಪ್ಪಲಿ ಸೇವೆ…
ನಗರದ ಚನ್ಮಮ್ಮ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ಸಿಎಂ ಸಿದ್ದರಾಮಯ್ಯ ಹಾಗೂ ತಮಿಳುನಾಡು ಸಿಎಂ ಜಯಲಲಿತಾ ಭಾವಚಿತ್ರಕ್ಕೆ ಚಪ್ಪಲಿ ಸೇವೆ ನಡೆಸಿದ್ರು. ನಂತರ ಇಬ್ಬರ ಭಾವಚಿತ್ರವನ್ನು ಬೆಂಕಿಯಲ್ಲಿ ದಹಿಸಿ ತಮ್ಮ ಆಕ್ರೋಶ ಹೊರ ಹಾಕಿದ್ರು. ಸರ್ಕಾರದ ವಿರುದ್ಧ ಕರವೇ ಕಾರ್ಯಕರ್ತರು ಘೋಷಣೆ ಕೂಗಿದ್ದರು.ಉಕ ವಿಕಾಸ ವೇದಿಕೆಯಿಂದ ಧರಣಿ. ಟೈಯರಗೆ ಬೆಂಕಿ ಹಚ್ವಿ, ತಮಿಳುನಾಡು ಸರ್ಕಾರದ ವಿರುದ್ಧ ಘೋಷಣೆ.
ಕರ್ನಾಟಕ ಬಂದ್ ಕರೆ ಹಿನ್ನೆಲೆ. ನಗರದ ಚನ್ನಮ್ಮ ವೃತ್ತದಲ್ಲಿ ರೈತ ಸಂಘಟನೆ ಹಾಗೂ ಕರವೇಯಿಂದ ಪ್ರತಿಭಟನೆ. ತಮಿಳುನಾಡು ಮೂಲದ ಲಾರಿ ಮುತ್ತಿಗೆ ಹಾಕಿ. ಲಾರಿ ಮುಂದೆ ಬೊಬ್ಬೆ ಹಾಕಿದರು ರೈತರು, ಕರವೇ ಕಾರ್ಯಕರ್ತರು.ತಮಿಳ ನಾಡಿನ ವಿರುದ್ಧ ಘೋಷನೆ ಕೂಗಿದರು ಪೊಲೀಸರ ಮದ್ಯ ಪ್ರವೇಶ ಮಾಡಿ ಪ್ರತಿಭಟನಾಕಾರರನ್ನು ಚದರಿಸಿದಾಗ. ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಯಿತು ಒಟ್ಟಾರೆ ಬೆಳಗಾವಿ ನಗರದಲ್ಲಿ ಕಾವೇರಿ ಅನ್ಯಾಯದ ಆಕ್ರೋಶ ಮುಗಿಲು ಮುಟ್ಟಿತ್ತು
Check Also
ವೀಕ್ಲಿ ಮ್ಯಾರೇಜ್,ಇದು ಲಕ್ಷ ಲಕ್ಷ ರೂಗಳ ಪ್ಯಾಕೇಜ್ ಹುಡುಗರ ಲೈಫ್ ಡ್ಯಾಮೇಜ್ …..!!!
ಬೆಳಗಾವಿ – ಹೆಣ್ಣು ಮಕ್ಕಳ ಮಾರಾಟ ಆಯ್ತು,ಹನಿ ಟ್ರ್ಯಾಪ್ ಗೋಳಾಟ ಆಯ್ತು ಈಗ ಹೊಸದೊಂದ ಆಟ ಶುರುವಾಗಿದೆ ಇದು ಮದ್ಯ …