Breaking News

ನಾಳೆ ಸುವರ್ಣಸೌಧದಲ್ಲಿ ಕೆಡಿಪಿ, ಬಿಸಿ,ಬಿಸಿ ಚರ್ಚೆ…!

ಬೆಳಗಾವಿ- ಲೋಕೋಪಯೋಗಿ,ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ನಾಳೆ ಶುಕ್ರವಾರ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಕೆಡಿಪಿ ಸಭೆ ನಡೆಸಲಿದ್ದಾರೆ.

ಬೆಳಗಾವಿ ಜಿಲ್ಲೆಯ ಎಲ್ಲ ಶಾಸಕರು ತಮ್ಮ ಕ್ಷೇತ್ರದ ಸಮಸ್ಯೆಗಳನ್ನು ಪ್ರಸ್ತಾಪ ಮಾಡಲಿದ್ದು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳನ್ನು ಸಭೆಯಲ್ಲಿ ತರಾಟೆಗೆ ತೆಗೆದುಕೊಳ್ಳುಲಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಉಲ್ಬಣಗೊಂಡ ಡೆಂಗ್ಯು,ಬಗ್ಗೆ ಆರೋಗ್ಯ ಇಲಾಖೆ ಕೈಗೊಂಡಿರುವ ಕ್ರಮಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಲಿದೆ.ಬೆಳಗಾವಿ ಮಹಾನಗರದಲ್ಲಿ ರಸ್ತೆಗಳನ್ನು ಅಗೆದು ಪೈಪಲೈನ್ ಮಾಡುತ್ತಿರುವ L& T ಕಂಪನಿಯ ವಿರುದ್ಧವೂ ಟೀಕೆಗಳ ಸುರಿಮಳೆಯಾಗುವ ಸಾಧ್ಯತೆ ಇದೆ.

ಬೆಳಗಾವಿ ಜಿಲ್ಲೆ ಐತಿಹಾಸಿಕ ಜಿಲ್ಲೆಯಾಗಿದ್ದು ಈ ವರ್ಷ ಈ ಜಿಲ್ಲೆಯಲ್ಲಿ ಎರಡು ಮಹತ್ವದ ಉತ್ಸವಗಳು ನಡೆಯಲಿವೆ 1924 ರಲ್ಲಿ ಮಹಾತ್ಮ ಗಾಂಧಿಯವರ ಅಧ್ಯಕ್ಷತೆಯಲ್ಲಿ ಏಕೈಕ ಕಾಂಗ್ರೆಸ್ ಅಧಿವೇಶನ ನಡೆದಿತ್ತು ಅದು ಬೆಳಗಾವಿಯಲ್ಲಿ ಅನ್ನೋದು ವಿಶೇಷ, ಈ ಅಧಿವೇಶನ ನಡೆದು ಈ ವರ್ಷ ನೂರು ವರ್ಷಗಳಾಗಿದ್ದು ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸಂಭ್ರಮ ನಡೆಲಿದೆ.ಈ ಸಭ್ರಮದ ಅಂಗವಾಗಿ ರಾಷ್ಟ್ರ ಮಟ್ಟದ ಕಾರ್ಯಕ್ರಮ ಬೆಳಗಾವಿಯಲ್ಲಿ ನಡೆಯಬೇಕು ಎನ್ನುವದು ಎಲ್ಲರ ಆಶಯವಾಗಿದೆ.ಈ ಕಾರ್ಯಕ್ರಮ ಸಿದ್ಧತೆಗಳ ಕುರಿತು ಕೆಡಿಪಿ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯುವ ಸಾಧ್ಯತೆ ಇದೆ.

ಈ ವರ್ಷ ಬೆಳಗಾವಿ ಜಿಲ್ಲೆ ಇನ್ನೊಂದು ಮಹತ್ವದ ಉತ್ಸವಕ್ಕೆ ಸಾಕ್ಷಿಯಾಗಲಿದೆ. ಕ್ರಾಂತಿಯ ನೆಲ ಬೆಳಗಾವಿ ಜಿಲ್ಲೆಯಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮ ಬ್ರಿಟಿಷರ ವಿರುದ್ಧ ಸಮರ ಸಾರಿ ಬ್ರಿಟಿಷ್ ಕಲೆಕ್ಟರ್ ಥ್ಯಾಕರೆಯ ರುಂಡ ಚೆಂಡಾಡಿದ ದ್ಯೋತಕವಾಗಿ ಪ್ರತಿ ವರ್ಷ ಆಚರಿಸುವ ಕಿತ್ತೂರು ಉತ್ಸವಕ್ಕೆ ಈ ವರ್ಷ ಎರಡು ನೂರು ವರ್ಷಗಳಾಗಿದ್ದು ಈ ವರ್ಷದ ಕಿತ್ತೂರು ಉತ್ಸವ ಎರಡು ನೂರು ವರ್ಷಗಳನ್ನು ಪುರೈಸಿ ದ್ವಿಶತಮಾನೋತ್ಸವದ ಸಂಭ್ರಮಲ್ಲಿದೆ. ಈ ಬಾರಿಯ ಕಿತ್ತೂರು ಉತ್ಸವ ರಾಷ್ಟ್ರೀಯ ಉತ್ಸವ ಆಗಬೇಕೆನ್ನುವದು ಎಲ್ಲರ ಅಭಿಮತ ವಾಗಿದ್ದು ಇದರ ರೂಪುರೇಷೆಗಳ ಕುರಿತು ಕೆಡಿಪಿ ಸಭೆಯಲ್ಲಿ ಚರ್ಚೆ ಆಗಬಹುದು ಎಂದು ಹೇಳಲಾಗುತ್ತಿದೆ.

ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ,ಕಿತ್ತೂರು ಉತ್ಸವದ ದ್ವಿ ಶತಮಾನೋತ್ಸವ ಈ ಎರಡು ಕಾರ್ಯಕ್ರಮಗಳ ಬಗ್ಗೆ ಬೆಳಗಾವಿ ಜಿಲ್ಲೆಯ ಶಾಸಕರು ಧ್ವನಿ ಎತ್ತುವ ಸಾಧ್ಯತೆ ಇದ್ದು ಈ ಎರಡೂ ಕಾರ್ಯಕ್ರಮಗಳನ್ನು ರಾಷ್ಟ್ರ ಮಟ್ಟದಲ್ಲಿ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಬೆಳಗಾವಿ ಜಿಲ್ಲೆಯಿಂದ ಪ್ರಸ್ತಾವನೆಯನ್ನು ಕಳುಹಿಸುವ ಕುರಿತು ನಾಳೆ ನಡೆಯಲಿರುವ ಕೆಡಿಪಿ ಸಭೆಯಲ್ಲಿ ತೀರ್ಮಾಣ ಆಗಲಿದೆ ಎಂದು ತಿಳಿದು ಬಂದಿದೆ.

Check Also

ವೀಕ್ಲಿ ಮ್ಯಾರೇಜ್,ಇದು ಲಕ್ಷ ಲಕ್ಷ ರೂಗಳ ಪ್ಯಾಕೇಜ್ ಹುಡುಗರ ಲೈಫ್ ಡ್ಯಾಮೇಜ್ …..!!!

ಬೆಳಗಾವಿ – ಹೆಣ್ಣು ಮಕ್ಕಳ ಮಾರಾಟ ಆಯ್ತು,ಹನಿ ಟ್ರ್ಯಾಪ್ ಗೋಳಾಟ ಆಯ್ತು ಈಗ ಹೊಸದೊಂದ ಆಟ ಶುರುವಾಗಿದೆ ಇದು ಮದ್ಯ …

Leave a Reply

Your email address will not be published. Required fields are marked *