ಬೆಳಗಾವಿ-ಜಿಲ್ಲೆಯಲ್ಲಿ ಕೊಳವೆ ಬಾವಿಗಳನ್ನು ಕೊರೆಯಿಸಲು ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಆಗ್ರಹಿಸಿ ಕೂಡಲೇ ಮುಖ್ಯಮಂತ್ರಿಗಳ ಬಳಿ ಜಿಲ್ಲೆಯ ಸರ್ವಪಕ್ಷಗಳ ಶಾಸಕರ ನಿಯೋಗ ಕೊಂಡೊಯ್ಯುವ ನಿರ್ಧಾರವನ್ನು ಇಂದಿನ ಕೆಡಿಪಿ ಸಭೆಯಲ್ಲಿ ಕೈಗೊಳ್ಳಲಾಗಿದೆ.
ಸಭೆಯಲ್ಲಿ ಮಾಜಿ ಮಂತ್ರಿ ಊಮೇಶ ಕತ್ತಿ ಮಾತನಾಡಿ ಜಿಲ್ಲೆಯಲ್ಲಿ ಕೊಳವೆ ಬಾವಿಗಳಿಗೆ ಬೇಡಿಕೆ ಇದೆ ಆದರೆ ಸಮಾಜ ಕಲ್ಯಾಣ ಇಲಾಖೆಯಲ್ಲಿ ಅನುದಾನ ಕಡಿಮೆ ಇದೆ ಎಂದು ಸಭೆಯಲ್ಲಿ ಗಮನ ಸೆಳೆದಾಗ ಇದಕ್ಕೆ ಸ್ಪಂದಿಸಿದ ಜಿಲ್ಲಾ ಮಂತ್ರಿಗಳು ಹೆಚ್ಚಿನ ಅನುದಾನ ಬಿಡುಗಡೆ ಮಾಡಲು ಜಿಲ್ಲೆಯ ಶಾಸಕರು ವಿಧಾನ ಪರಿಷತ್ತ ಸದಸ್ಯರು ಸೇರಿಕೊಂಡು ಮುಖ್ಯಮಂತ್ರಿಗಳನ್ನು ಬೇಟಿಯಾಗೋಣ ಎಂದು ಭರವಸೆ ನೀಡಿದರು
