ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಭೀಕರ ಬರಗಾಲವಿದೆ ಪ್ರತಿ ಸಲ ಕೃಷ್ಣಾ ನದಿಯಲ್ಲಿ ನೀರು ಖಾಲಿಯಾದ ನಂತರ ನಾವು ಮಹಾರಾಷ್ಟ್ರ ಸರಕಾರಕ್ಕೆ ಸಂಪರ್ಕ ಮಾಡುತ್ತೇವೆ ಇದಕ್ಕೆ ಶಾಶ್ವತ ಪರಿಹಾರ ಕಂಡುಹಿಡಿಯಬೇಕು ಎಂದು ಶಾಸಕ ಲಕ್ಷ್ಮಣ ಸವದಿ ಕೆಡಿಪಿ ಸಭೆಯಲ್ಲಿ ಒತ್ತಾಯಿಸಿದರು
ಮಹಾರಾಷ್ಟ್ರ ಸರಕಾರ ಕರ್ನಾಟಕ ಸರ್ಕಾರದ ಜೊತೆ ಒಂದು ಒಪ್ಪಂದ ಮಾಡಿಕೊಳ್ಳಲು ಮುಂದೆ ಬಂದಿದೆ ವಾರಣಾ ಮತ್ತು ಕೋಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನಾವು ನೀರು ಬಿಡುತ್ತೇವೆ ನೀವು ಅಲಮಟ್ಟಿ ಜಲಾಶಯದಿಂದ ಸೊಲ್ಲಾಪೂರ ಮತ್ತು ಜತ್ತಗೆ ನಾಲ್ಕು ಟಿಎಂಸಿ ನೀರು ಬಿಡುವಂತೆ ಕೋರಿದೆ ಈ ಕುರಿತು ಒಪ್ಪಂದ ಮಾಡಿಕೊಳ್ಳಲು ಮಹಾರಾಷ್ಟ್ರ ಸರ್ಕಾರ ಮುಂದೆ ಬಂದಿದೆ ಎಂದು ಲಕ್ಷ್ಮಣ ಸವದಿ ಸಭೆಗೆ ತಿಳಿದಿದರು
ಈಕುರಿತು ನಾನು ಮುಖ್ಯಮಂತ್ರಿಗಳ ಜೊತೆ ಮಾತಾಡಿದ್ದೇನೆ ಅವರೂ ಕೂಡಾ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಈ ಕುರಿತು ಪ್ರಸ್ತಾವಣೆ ಸಿದ್ಧಪಡಿಸಿ ಮಹಾರಾಷ್ಟ್ರ ಸರ್ಕಾರಕ್ಕೆ ಸಂಪರ್ಕಿಸುವ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದಾಗ ಜಿಲ್ಲಾ ಮಂತ್ರಿಗಳು ಕೆಡಿಪಿ ಮುಗಿದ ಬಳಿಕ ಈ ಬಗ್ಗೆ ನೋಡೋಣ ಎಂದು ಚರ್ಚೆಗೆ ತೆರೆ ಎಳೆದರು