ಬೆಳಗಾವಿ–ಶನಿವಾರ ಬೆಳಗಾವಿ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಬಹುಗ್ರಾಮಗಳ ಕುಡಿಯುವ ನೀರಿನ ಯೋಜನೆಗಳ ಕುರಿತು ಚರ್ಚೆ ನಡೆಯಿತು ಜಿಲ್ಲೆಯಲ್ಲಿ ಹಲವಾರು ಬಹುಗ್ರಾಮಗಳ ಕುಡಿಯುವ ನೀರಿನ ಯೋಜನೆಗಳ ಕಾಮಗಾರಿಗಳು ನಡೆಯುತ್ತಿದ್ದು ಅನುದಾನದ ಕೊರತೆಯಿಂದ ಕಾಮಗಾರಿಗಳ ಅನುಷ್ಠಾನಕ್ಕೆ ತೊಂದರೆ ಅಗುತ್ತಿದೆ ಎಂದು ಅಧಿಕಾರಿಗಳು ಸಭೆಯಲ್ಲಿ ತಿಳಿಸಿದರು
ಸಭೆಯಲ್ಲಿ ಶಾಸಕರಾದ ಶಶಿಕಲಾ ಜೊಲ್ಲೆ.ಐಹೊಳೆ,ಪಿರಾಜು ಸೇರಿದಂತೆ ಹಲವಾರು ಜನ ಶಾಸಕರು ಚರ್ಚೆಯಲ್ಲಿ ಭಾಗವಹಿಸಿ ಬಹುಗ್ರಾಮಗಳ ಕುಡಿಯುವ ನೀರಿನ ಯೋಜನೆಗಳ ಕಾಮಗಾರಿಗ:ಳ ವಿಳಂಬದ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿದರು
ಆಲ್ಲೆಯಲ್ಲಿ ಯೋಜನೆಗಳ ಅನುಷ್ಠಾನಕ್ಕೆ ಒಟ್ಟು 180 ಕೋಟಿ ರೂ ಅನುದಾನದ ಬೇಕಾಗಿದೆ ಅನುದಾನದ ಕೊರತೆಯಿಂದ ತೊಂದರೆ ಆಗುತ್ತಿದೆ ಬೇಗನೆ ಅನುದಾನ ಬಿಡುಗಡೆ ಮಾಡಬೇಕೆಂದು ಸರ್ಕಾರಕ್ಕೆ ಪ್ರಸ್ತಾವಣೆ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು
ಈ ಕುರಿತು ಕೂಡಲೇ ಕ್ರಮ ಕೈಗೊಂಡು ಅನುದಾನ ಬಿಡುಗಡೆ ಮಾಡಿಸುವದಾಗಿ ಜಿಲ್ಲಾ ಮಂತ್ರಿಗಳು ಭರವಸೆ ನೀಡಿದರು
ಕಳೆದ ಬಾರಿ ಜಿಲ್ಲೆಯಲ್ಲಿ ತಲೆದೋರಿದ್ದ ಬರಗಾಲ ಸಮಯ ಮೇವು ಮತ್ತು ಕುಡಿಯುವ ನೀರು ಪೂರೈಕೆಗೆ ೧೨ ಕೋಟಿ ಖರ್ಚು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎನ್. ಜಯರಾಮ ತಿಳಿಸಿದರು. ಜಿಪಂ ಸಭಾಭವನದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿ ಸುಮಾರು ೪೫ಕೋಟಿ ಬರ ನಿರ್ವಹಣೆ ಹಣ ಅಂದಾಜು ಮಾಡಲಾಗಿತ್ತು. ಆದರೆ ೧೨ ಕೋಟಿಯಲ್ಲಿಬರ ನಿರ್ವಹಿಸಲಾಗಿದೆ ಎಂದರು. ಜಿಲ್ಲೆಯ ರಾಯಭಾಗ ಚಿಕ್ಕೋಡಿ ಭಾಗಗಳಲ್ಲಿ ಅಂತರ್ಜಲ ಮಟ್ಟ ಕುಸಿದು ಆತಂಕ ಸೃಷ್ಟಿಯಾಗಿದೆ. ನೀರಾವರಿ ಯೋಜನೆಗಳನ್ನು ಬಹುಬೇಗ ಮುಗಿಸಿ ಎಂದು ಶಾಸಕರು ಒತ್ತಾಯಿಸಿದರು. ಇಲಾಖೆಗಳು ಹೆಚ್ಚು ಆದ್ಯತೆಯಿಂದ ಕೆಲಸ ಮಾಡಬೇಕು ಎಂದು ಸಚಿವ ರಮೇಶ ಜಾರಕಿಹೊಳಿ ಎಚ್ಚರಿಸಿದರು.
Check Also
ಜ್ಞಾನೇಶ್ವರ ಮುನಿ ಮಹಾರಾಜರು (86) ವಿಧಿವಶ
ಬೆಳಗಾವಿ -ಯಮ ಸಲ್ಲೇಖನ ವೃತ್ತದ ಮೂಲಕ ಜ್ಞಾನೇಶ್ವರ ಮುನಿ ಮಹಾರಾಜರು (86) ಇಹಲೋಕವನ್ನು ತ್ಯೇಜಿಸಿದ್ದಾರೆ. ಬೈಲಹೊಂಗಲ ತಾಲೂಕಿನ ದೇವಲಾಪುರ ಕ್ಷೇತ್ರದಲ್ಲಿ …