ಬೆಳಗಾವಿ- ಪಶ್ಚಿಮ ಘಟ್ಟದಲ್ಲಿ ನರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಮಹಾದಾಯಿ ಮತ್ತು ಮಲಪ್ರಭಾ ನದಿಗಳು ಉಕ್ಕಿ ಹರಿಯುತ್ತಿದ್ದು ತಾಲ್ಲೂಕಿನ 4 ಹಳ್ಳಿಗಳು ಸಂಪರ್ಕ ಕಡಿತವಾಗಿದೆ
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹದಿಮೂರು ಹಳ್ಳಿಗಳು ಸಂಪರ್ಕ ಕಡಿತಗೊಂಡ ಹಿನ್ನಲೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯನ್ನ ಬಿದಿರಿನ ಪಲ್ಲಕ್ಕಿಯಲ್ಲಿ ಹೊತ್ತು ಹೊಳಿ ದಾಟಿದ ಗವಾಳಿ ಗ್ರಾಮಸ್ಥರು ಮಹಿಳೆಯನ್ನು ಖಾನಾಪೂರ ಪಟ್ಟಣದ ಆಸ್ಪತ್ರೆಯಲ್ಲಿ ದಾಖಲಿಸಿದ್ದಾರೆ
ಗವಾಳಿ ಗ್ರಾಮ ಸಂಪರ್ಕ ಕಳೆದುಕೊಂಡ ಕಾರಣ ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯನ್ನ ಖಾನಾಪುರ ವರೆಗೆ ಬಿದುರಿನ ಪಲ್ಲಕ್ಕಿಯಲ್ಲಿ ಹೊತ್ತು ತಂದಿದ್ದು ,4 ಹಳ್ಳಿಗಳ ಜನ ಸಂಕಷ್ಟದಲ್ಲಿದ್ದಾರೆ ಕಳೆದ ಎರಡು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ
ಕಾಡಿನಲ್ಲಿ ಶೀತ ವಾತಾವರಣ ಹೆಚ್ಚಾಗಿ ಅನಾರೋಗ್ಯಕ್ಕೆ ತುತ್ತಾಗುತ್ತಿರುವ ಮಹಿಳೆಯರು, ಮಕ್ಕಳು ಚಿಕಿತ್ಸೆ ಸಿಗದೇ ಪರದಾಡುತ್ತಿದ್ದಾರೆ
ಮಹದಾಯಿ ನದಿ ತುಂಬಿ ಹರಿಯುತ್ತಿದ್ದು ಗ್ರಾಮಗಳ ಸಂಪರ್ಕ ರಸ್ತೆ ಜಲಾವೃತಗೊಂಡಿದೆ ಉಳಿದ 4 ಹಳ್ಳಿಗಳ ಸಂಪರ್ಕ ರಸ್ತೆಗಳು ಜಲಾವೃತಗೊಂಡಿವೆ ಎಂದು ತಿಳಿದು ಬಂದಿದೆ
ಇ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ