ಬೆಳಗಾವಿ- ಬೆಳಗಾವಿ ಕಾಂಗ್ರೆಸ್ ಈಗ ಫುಲ್ ಆಕ್ಟೀವ್ ಆಗಿದೆ. ನಿನ್ನೆ ಸೋಮವಾರ ಸದ್ದಿಲ್ಲದೇ ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಸಭೆ ನಡೆಸಿದ ಬೆಳಗಾವಿಯ ಕಾಂಗ್ರೆಸ್ ಮುಖಂಡರು, ಪದವೀಧರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಯುವ ಕಾಂಗ್ರೆಸ್ ಮುಖಂಡ ಕಿರಣ ಸಾಧುನವರ ಅವರ ಹೆಸರನ್ನು ಆಲ್ ಮೋಸ್ಟ್ ಫೈನಲ್ ಮಾಡಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ನೇತ್ರತ್ವದಲ್ಲಿ ನಿನ್ನೆ ಸೋಮವಾರ ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಸಭೆ ಸೇರಿದ ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಶಾಸಕರು,ಮಾಜಿ ಶಾಸಕರು,ವಿಧಾನಪರಿಷತ್ತಿನ ಸದಸ್ಯರು ಮತ್ತು ಜಿಲ್ಲೆಯ ಎಲ್ಲ ಮುಖಂಡರು ಸುಧೀರ್ಘ ಚರ್ಚೆ ಮಾಡಿ,ಕಿರಣ ಸಾಧುನವರ ಹೆಸರನ್ನು ಅಂತಿಮ ಗೊಳಿಸಿದ್ದಾರೆ ಎಂದು ನಂಬಲರ್ಹ ಮೂಲಗಳು ತಿಳಿಸಿವೆ.
ಪದವೀಧರ ಕ್ಷೇತ್ರದ ವ್ಯಾಪ್ತಿಯಲ್ಲಿ,ಬಾಗಲಕೋಟೆ,ವಿಜಯಪುರ ಜಿಲ್ಲೆಗಳೂ ಬರುತ್ತವೆ,ಈ ಜಿಲ್ಲೆಗಳಿಗೂ ಭೇಟಿ ನೀಡಿ ಅಲ್ಲಿಯೂ ಸಭೆ ಮಾಡಿ,ಪದವೀಧರ ಮತ್ತು ಶಿಕ್ಷಕ ಕ್ಷೇತ್ರದ ಚುನಾವಣೆಯ ಸಿದ್ಧತೆಗಳನ್ನು ಈಗಿನಿಂದಲೇ ಆರಂಭಿಸುವಂತೆ ಅಲ್ಲಿಯ ಮುಖಂಡರಿಗೆ ಸೂಚಿಸುವದಾಗಿ ಸತೀಶ್ ಜಾರಕಿಹೊಳಿ ಅವರು ಹೇಳಿದ್ದು,ಬೆಳಗಾವಿ ಜಿಲ್ಲೆಯ ಎಲ್ಲ ಮುಖಂಡರು ಪಕ್ಷದ ಗೆಲುವಿಗೆ ಶ್ರಮಿಸುವಂತೆ ಸೂಚನೆ ನೀಡಿದ್ದಾರೆ.
ಕಿರಣ ಸಾಧುನವರ ಅವರು ಬೆಳಗಾವಿ ,ಬಾಗಲಕೋಟೆ,ವಿಜಯಪುರ ಜಿಲ್ಲೆಗಳಲ್ಲಿ ಸಂಚರಿಸಿ ಇಲೆಕ್ಷನ್ ತಯಾರಿ ಮಾಡಿಕೊಳ್ಳುವಂತೆ ಪಕ್ಷದ ಮುಖಂಡರು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎಂದು ತಿಳಿದು ಬಂದಿದ್ದು ಚುನಾವಣೆ ಮೇ ತಿಂಗಳಲ್ಲಿ ನಡೆಯುವ ಸಾಧ್ಯತೆ ಇದೆ.
ಕಿರಣ ಸಾಧುನವರ ಅವರು ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಸೇರಿದವರಾಗಿದ್ದು,ಬಿಜೆಪಿಯ ಹಾಲಿ ವಿಧಾನ ಪರಿಷತ್ತಿನ ಸದಸ್ಯ ಹಣಮಂತ ನಿರಾಣಿ ಅವರಿಗೆ ಟಕ್ಕರ್ ಕೊಡಲು ಕಿರಣ ಸಾಧುನವರ ಅವರನ್ನು ಕಾಂಗ್ರೆಸ್ಸಿನಿಂದ ಕಣಕ್ಕಿಳಿಸಲು ಮುಖಂಡರು ಒಮ್ಮತದ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.