Breaking News

ಕಿತ್ತೂರ ಉತ್ಸವಕ್ಕೆ ಮಂತ್ರಿ ಉಮಾಶ್ರೀ ಗೈರು ,ಉತ್ತರ ಕರ್ನಾಟಕದ ಪ್ರಮುಖ ಉತ್ಸವಕ್ಕೆ ಅಗೌರವ

ಬೆಳಗಾವಿ- ಬೆಳಗಾವಿ ಜಿಲ್ಲೆಯ ಕಿತ್ತೂರು ಕೋಟೆ ಆವರಣದಲ್ಲಿ ನಡೆಯುತ್ತಿರುವ ಉತ್ಸವಕ್ಕೆ ಸಹಕಾರ, ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರಿಂದ ಉತ್ಸವ ಉದ್ಘಾಟನೆ.

ಜ್ಯೋತಿ ಬೆಳಗಿಸುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದ್ದು
ಕಿತ್ತೂರು ಉತ್ಸವಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಹಾ ಸಚಿವೆ ಉಮಾಶ್ರೀ ಗೈರು ಉಳಿಯುವ ಮೂಲಕ ಕ್ರಾಂತಿ ನೆಲಕ್ಕೆ ಅವಮಾನ ಮಾಡಿದ್ದಾರೆ

ಕಿತ್ತೂರು ಉತ್ಸವ ಉದ್ಘಾಟಿಸಬೇಕಿದ್ದ ಸಚಿವೆ ಉಮಾಶ್ರೀ ಉತ್ತರ ಕರ್ನಾಟಕದ ಮುಖ್ಯ ಉತ್ಸವಕ್ಕೆ ಬಾರದೇ ಕಡೆಗೆಣಿಸಿದ್ದು ಚನ್ನಮ್ಮ ರಾಯಣ್ಣ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ

ಕಿತ್ತೂರು ರಾಜಗುರು ಸಂಸ್ಥಾನಮಠದ ಮಡಿವಾಳ ರಾಜಯೋಗಿಂದ್ರ ಶ್ರೀಗಳ ಸಾನಿಧ್ಯ ವಹಿಸಿದ್ದು ಸಮಾರಂಭದಲ್ಲಿ ಸರ್ಕಾರದ ಮುಖ್ಯಸಚೇತಕ ಅಶೋಕ ಪಟ್ಟಣ, ಶಾಸಕರಾದ ಡಿ.ಬಿ.ಇನಾಮದಾರ, ಗಣೇಶ ಹುಕ್ಕೇರಿ, ಎಂಎಲಸಿ ಮಹಾಂತೇಶ ಕವಟಗಿಮಠ ಭಾಗಿಯಾಗಿದ್ದಾರೆ

ಸಮಗ್ರ ಕಿತ್ತೂರು ಅಭಿವೃದ್ಧಿಗೆ ಆದ್ಯತೆ- ಸಚಿವ ಜಾರಕಿಹೊಳಿ ಭರವಸೆ ನೀಡಿದ್ದಾರೆ
ಕಿತ್ತೂರು ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಕಿತ್ತೂರು ಕೋಟೆ ಸೇರಿದಂತೆ ಕಿತ್ತೂರಿನ ಸಮಗ್ರ ಅಭಿವೃದ್ಧಿಗೆ ಸರ್ಕಾರ ಮುಂಬರುವ ದಿನಗಳಲ್ಲಿ ವಿಶೇಷ ಆದ್ಯತೆ ನೀಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಭರವಸೆ ನೀಡಿದರು.
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಕಿತ್ತೂರು ಕೋಟೆ ಆವರಣದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಚೆನ್ನಮ್ಮನ ಕಿತ್ತೂರು ಉತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕಳೆದ ಮೂರು ವರ್ಷಗಳಲ್ಲಿ ಬರಗಾಲ ಎದುರಾಗಿದ್ದರಿಂದ ಕಿತ್ತೂರು ಅಭಿವೃದ್ಧಿ ಕಡೆಗೆ ಒತ್ತು ನೀಡಿರಲಿಲ್ಲ. ಪ್ರಸಕ್ತ ಸಾಲಿನಲ್ಲಿ ಉತ್ತಮ ಮಳೆಯಾಗಿರುವುದರಿಂದ ಸ್ಥಳೀಯ ಜನಪ್ರತಿನಿಧಿಗಳ ಜತೆಗೂಡಿ ಕಿತ್ತೂರಿನ ಸಮಗ್ರ ಅಭಿವೃದ್ಧಿಗೆ ಪ್ರಯತ್ನಿಸಲಾಗುವುದು ಎಂದರು.
ಚೆನ್ನಮ್ಮನ ಧೈರ್ಯ, ಸಾಹಸ ಹಾಗೂ ದಿಟ್ಟತನ ಪ್ರತಿಯೊಬ್ಬ ಕನ್ನಡಿಗರಿಗೆ ಅಭಿಮಾನದ ಸಂಗತಿ ಎಂದು ಪ್ರಾದೇಶಿಕ ಆಯುಕ್ತರಾದ ಶಿವಯೋಗಿ ಕಳಸದ ಹೇಳಿದರು. ದಾಸ್ಯದ ಸಂಕೋಲೆಯಿಂದ ಹೊರಬರಲು ಚೆನ್ನಮ್ಮ ಹಚ್ಚಿದ ಹೋರಾಟದ ಕಿಚ್ಚು ನಿರಂತರವಾಗಿರಬೇಕು.
ಕಿತ್ತೂರು ಅಭಿವೃದ್ಧಿಗೆ ನೀಲನಕ್ಷೆ ರೂಪಿಸುವ ಕುರಿತು ಪರಿಷತ್ತಿನ ಸದಸ್ಯ ಮಹಾಂತೇಶ ಕವಟಗಿಮಠ ಅವರ ಪ್ರಸ್ತಾನೆಯ ಕುರಿತು ಅಧಿಕಾರಿಗಳ ಮಟ್ಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಕಳಸದ ಭರವಸೆ ನೀಡಿದರು.

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *