Breaking News

ಹಿರಿಯ ಸಂಪಾದಕ ,ಕಲ್ಯಾಣರಾವ್ ಮುಚಳಂಬಿ ವಿಧಿವಶ

ಬೆಳಗಾವಿ- ಹಸಿರು ಕ್ರಾಂತಿ ದಿನಪತ್ರಿಕೆಯ ಸಂಪಾದಕ,ಹಿರಿಯ ರೈತ ಹೋರಾಟಗಾರ, ಕಲ್ಯಾಣರಾವ್ ಮುಚಳಂಬಿ(72) ಅವರು ಇಂದು ಸಂಜೆ ವಿಧಿವಶ ರಾಗಿದ್ದಾರೆ.

ಬೆಳಗಾವಿ ಜಿಲ್ಲೆಯ ಗೋಕಾಕ್‌‌ನ ಖಾಸಗಿ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ.ಅಕ್ಟೋಬರ್ ,2 ರಂದು ಜನ್ಮ ದಿನ ಆಚರಿಸಿಕೊಂಡು ,ಸಾವಳಗಿ ಶಿವಲಿಂಗೇಶ್ವರ ಮಠಕ್ಕೆ ಪಾದಯಾತ್ರೆಗೆ ತೆರಳಿದ್ದರು. ಮಠಕ್ಕೆ ಪಾದಯಾತ್ರೆ ಮೂಲಕ ಬರೋದಾಗಿ ಹರಕೆ ಹೊತ್ತಿದ್ದರು

ಅಕ್ಟೋಬರ್ 3ರಂದು ಬೆಳಗಾವಿಯಿಂದ ಸಾವಳಗಿಗೆ ಪಾದಯಾತ್ರೆಗೆ ತೆರಳಿದ್ದರು.ಬೆಳಗಾವಿ ಜಿಲ್ಲೆ ಗೋಕಾಕ ತಾಲೂಕಿನ ಸಾವಳಗಿ ಗ್ರಾಮದ ಮಠಕ್ಕೆ ತೆರಳುವಾಗ,ಮಾರ್ಗಮಧ್ಯೆ ಸುಸ್ತು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು.ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಸುಸ್ತು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು,ಗೋಕಾಕ್ ಖಾಸಗಿ ಆಸ್ಪತ್ರೆಗೆ ರವಾನಿಸುವ ವೇಳೆ ಮಾರ್ಗ ಮಧ್ಯದಲ್ಲಿ ವಿಧಿವಶರಾಗಿದ್ದಾರೆ.

ರೈತ ಹೋರಾಟಗಾರ ದಿ.ಪ್ರೊ.ನಂಜುಂಡಸ್ವಾಮಿ ಗರಡಿಯಲ್ಲಿ ಪಳಗಿದ್ದ ಕಲ್ಯಾಣರಾವ್ ಮುಚಳಂಬಿ,35 ವರ್ಷಗಳ ಹಿಂದೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ‘ಹಸಿರು ಕ್ರಾಂತಿ’ ಪತ್ರಿಕೆ ಆರಂಭಿಸಿದ್ದರು.ರೈತಪರ, ಕನ್ನಡಪರ ಹಾಗೂ ಗಡಿ ಹೋರಾಟದಲ್ಲಿ ಸಕ್ರಿಯರಾಗಿದ್ದರು.ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗೆ ಭಾಜನರಾಗಿದ್ದರು
ರೈತರ ಆತ್ಮಹತ್ಯೆ ತಡೆಗೆ ವಿವಿಧ ಮಠಾಧೀಶರ ಜೊತೆ 150ಕ್ಕೂ ಹೆಚ್ಚು ಗ್ರಾಮಗಳಿಗೆ ಪಾದಯಾತ್ರೆ ನಡೆಸಿದ್ದರು.ಜೈಲ ಭರೋ ಚಳವಳಿಯಲ್ಲಿ ಭಾಗವಹಿಸಿ ಎರಡು ಬಾರಿ ಸೆರೆಮನೆ ವಾಸ ಅನುಭವಿಸಿದ್ರು.

ಪತ್ರಿಕಾ ರಂಗವಷ್ಟೇ ಅಲ್ಲದೇ ಸಾಹಿತ್ಯ, ಸಾಂಸ್ಕೃತಿಕ ಕ್ಷೇತ್ರದಲ್ಲೂ ಗಣನೀಯ ಸೇವೆ ಸಲ್ಲಿಸಿದ್ದ ಕಲ್ಯಾಣರಾವ ಮುಚಳಂಬಿ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ದಿಗಾಗಿ ನಡೆದ ಹೋರಾಟದಲ್ಲಿ,ಕ್ರಿಯಾಶೀಲ ರಾಗಿದ್ದ ಅವರು,ಅಖಿಲ ಭಾರತ ವೀರಶೈವ ಮಹಾಸಭೆ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಕಲ್ಯಾಣರಾವ್ ಮುಚಳಂಬಿ ಕಾರ್ಯನಿರ್ವಹಿಸಿದ್ದರು‌.

ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಕಲ್ಯಾಣರಾವ್ ಮುಚಳಂಬಿ ಅವರು ಅಗಲಿದ್ದು,ರಾತ್ರಿ 8 ಗಂಟೆಯಿಂದ ಬೆಳಗಾವಿಯ ಆಂಜನೇಯ ನಗರ ಡೈರಿ ಸರ್ಕಲ್ ದಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು,ನಾಳೆ ಬೆಳಗ್ಗೆ 11 ಗಂಟೆಗೆ ಬೆಳಗಾವಿಯ ಸದಾಶಿವನಗರ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

Check Also

ಜ್ಞಾನೇಶ್ವರ ಮುನಿ ಮಹಾರಾಜರು (86) ವಿಧಿವಶ

ಬೆಳಗಾವಿ -ಯಮ ಸಲ್ಲೇಖನ ವೃತ್ತದ ಮೂಲಕ ಜ್ಞಾನೇಶ್ವರ ಮುನಿ ಮಹಾರಾಜರು (86) ಇಹಲೋಕವನ್ನು ತ್ಯೇಜಿಸಿದ್ದಾರೆ. ಬೈಲಹೊಂಗಲ ತಾಲೂಕಿನ ದೇವಲಾಪುರ ಕ್ಷೇತ್ರದಲ್ಲಿ …

Leave a Reply

Your email address will not be published. Required fields are marked *