ಸ್ಥಳೀಯ ಸಂಘ ಸಂಸ್ಥೆಗಳ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು ಚುನಾವಣಾ ಆಯೋಗದಿಂದ ಸುವರ್ಣ ಸೌಧದಲ್ಲಿ ಸಭೆ ನಡೆಸುವ ಅನುಮತಿ ಸಿಕ್ಕಿಲ್ಲ ಹೀಗಾಗಿ ಸಿಎಂ ಕುಮಾರಸ್ವಾಮಿ ಅವರು ಸೋಮವಾರ ಬೆಳಗಾವಿಗೆ ಬೇಟಿ ನೀಡುವ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಮಾಜಿ ಶಾಸಕ ಕೋನರೆಡ್ಡಿ ತಿಳಿಸಿದ್ದಾರೆ
ಬೆಳಗಾವಿ : ಉತ್ತರ ಕರ್ನಾಟಕದ ಮಹತ್ವ ಯೋಜನೆಯಾಗಿರುವ ಮಹದಾಯಿ ನೀರಿನ ವಿವಾದವನ್ನು ಬಗೆಹರಿಸಲಾಗದ ಬಿಜೆಪಿ ನಾಯಕರಿಗೆ ಜೆಡಿಎಸ್ ಪಕ್ಷ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಟೀಕಿಸುವ ಯಾವ ನೈತೀಕತೆ ಇಲ್ಲ. ಪ್ರಧಾನಿ ಮೋದಿ ಹಾಗೂ ಅಮಿತ ಶಾ, ಯಡಿಯೂರಪ್ಪ ಅವರು ಚುನಾವಣೆ ಸಂದರ್ಭದಲ್ಲಿ ಈ ಭಾಗದ ಜನರಿಗೆ ಹೇಳಿದಂತೆ ನಡೆದುಕೊಳ್ಳುವ ಪ್ರಯತ್ನ ಮಾಡಲಿ ಎಂದು ಮಾಜಿ ಶಾಸಕ ಎಚ್.ಎನ್. ಕೋನರೆಡ್ಡಿ ಅವರು ಇಂದಿಲ್ಲಿ ಹೇಳಿದರು.
ನಗರದ ಜೆಡಿಎಸ್ ಕಾರ್ಯಾಲಯದಲ್ಲಿ ಶನಿವಾರ ದಿನದಂದು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗಕ್ಕೆ ಜೆಡಿಎಸ್ ಕೊಡುಗೆ ಅಪಾರವಾಗಿದ್ದು, ಬೆಳಗಾವಿಯಲ್ಲಿ ಸುವರ್ಣ ಸೌಧ, ಹುಬ್ಬಳ್ಳಿಯಲ್ಲಿ ಕಾನೂನು ವಿವಿ, ಸರ್ಕಾರಿ ಪಿಯು- ಪ್ರೌಢ ಶಾಲೆಗಳ ನಿರ್ಮಾಣ ಸೇರಿದಂತೆ ನಮ್ಮ ಅವಧಿಯಲ್ಲಿ ಈ ಭಾಗದಲ್ಲಿ ಹೆಚ್ಚಿನ ಕೆಲಸಗಳನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಈ ಹಿಂದೆ ಮಾಡಿದ್ದಾರೆ. ಆದರೂ ಈಗ ಬಿಜೆಪಿ ಮುಖಂಡರು ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುತ್ತಿರುವುದು ಸರಿಐಅಧ ಕ್ರಮವಲ್ಲ ಎಂದರು.
ರೈತರ ಸಂಪೂರ್ಣ ಸಾಲ ಮನ್ನಾ ಮಾಡಿದ ದೇಶದ ಮೊದಲ ಸಿಎಂ ಎಂಬ ಕೀರ್ತಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಪಾತ್ರರಾಗಿದ್ದಾರೆ. ಇದನ್ನು ಸಹಿಸಿಕೊಳ್ಳದ ಬಿಜೆಪಿ ನಾಯಕರಿಗೆ ಆಗುತ್ತಿಲ್ಲ. ಅಲ್ಲದೆ ಸಾಲ ಮನ್ನಾ ಯೋಜನೆಯಿಂದ ಉತ್ತರ ಕರ್ನಾಟಕ ಭಾಗಕ್ಕೆ ಹೆಚ್ಚಿನ ಅನುಕೂಲ ಆಗಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಈ ನಿರ್ಧಾರದಿಂದ ಉತ್ತರ ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಪ್ರಾಬಲ್ಯ ಹೆಚ್ಚುವದರೊಂದಿಗೆ ಹೆಚ್ಚಿ ಗೆಲವು ಸಾಧಿಸಲಿದೆ ಇದರಿಂದ ಬಿಜೆಪಿ ನಾಯಕರಿಗೆ ನಡುಕ ಉಂಟಾಗಿದೆ ಎಂದು ನುಡಿದರು.
ರಾಜ್ಯದ ಎಚ್‍ಡಿಕೆ ನೇತೃತ್ವದ ಸಮ್ಮಿಶ್ರ ಸರ್ಕಾರದ ವಿರುದ್ಧ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ಜವಾಬ್ದಾರಿ ಸ್ಥಾನದಲ್ಲಿರುವ ಯಡಿಯೂರಪ್ಪ ಅವರು ಶಿಸ್ತಿನಿಂದ ವರ್ತಿಸಬೇಕು ಎಂದು ಶಾಸಕ ಕೋನರೆಡ್ಡಿ ಸಲಹೆ ನೀಡಿದರು.
ಮುಖ್ಯಮಂತ್ರಿ ಕುಮಾರಸ್ವಾಮಿಯವರು ಕೈಗೊಳ್ಳುತ್ತಿರುವ ಗಟ್ಟಿತನದ ನಿರ್ಧಾರಗಳು ಬಿಜೆಪಿಯವರಿಗೆ ನುಂಗಲಾರದ ತುತ್ತಾಗಿವೆ. ಈ ನಿಟ್ಟಿನಲ್ಲಿ ಬೇರೆಯ ನೆಪವನ್ನು ಇಟ್ಟುಕೊಂಡು ರಾಜ್ಯ ಒಡೆಯುವ ಹುನ್ನಾರವನ್ನು ಬಿಜೆಪಿಯವರು ಮಾಡುತ್ತಿದ್ದು ಅದನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.
ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ನಡೆಯುವ ಸ್ಥಳಿಯ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಸ್ವತ್ರಂತ್ರವಾಗಿ ಸ್ಪರ್ಧೆ ಮಾಡಲಿದ್ದು, ಈ ನಿಟ್ಟಿನಲ್ಲಿ ಎಲ್ಲ ಪುರ್ವ ತಯಾರಿಯ ಹಿನ್ನೆಲೆಯಲ್ಲಿ ಇಂದು ಸಭೆಯನ್ನು ನಡೆಸುತ್ತಿದ್ದೇನೆ. ಬಳಿಕ ಅಭ್ಯರ್ಥಿಗಳಿಗೆ ಬಿ ಫಾರ್ಮ್ ನಮ್ಮ ಪಕ್ಷ ನಾಯಕರು ನೀಡುತ್ತಾರೆ ಎಂದು ತಿಳಿಸಿದರು.
ಅ.20ರೊಳಗೆ ಮಹಾದಾಯಿ ತೀರ್ಪು ಹೊರ ಬಿಳಲಿದ್ದು, ರಾಜ್ಯದ ಪರವಾಗಿ ಈ ತೀರ್ಪು ಬರುವ ವಿಶ್ವಾಸ ನಮಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ನಿಟ್ಟಿನಲ್ಲಿ ನಮ್ಮ ನ್ಯಾಯವಾದಿಗಳು ಈ ವಾದವನ್ನು ಸಮರ್ಥವಾಗಿ ಮಂಡಿಸಲಿದ್ದಾರೆ. ಈ ಹಿಂದೆ ಗೋವಾ ರಾಜ್ಯಕ್ಕೆ ಮಂಡಿಸಲು ಅವಕಾಶ ಇದ್ದಿರಲಿಲ್ಲ ಆದರೆ ಕೇಂದ್ರ ಸರಕಾರ ಇದಕ್ಕೆ ಅನುವು ಮಾಡಿಕೊಟ್ಟಿದೆ ಎಂದು ದೂರಿದರು.
ಇಂದಿನ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಶಂಕರ ಮಾಡಲಗಿ, ಶಿವನÀಗೌಡಾ ಪಾಟೀಲ, ಮಾಡಿವಾಲೆ ಸೇರಿದಂತೆ ಜೆಡಿಎಸ್‍ನ ಹಲವಾರು ಮುಖಂಡರು ಉಪಸ್ಥಿತರಿದ್ದರು.