ತುಮಕೂರಿಗೆ ಪ್ರದಾನಿ…ಬೆಳಗಾವಿಗೆ ಕೋನರೆಡ್ಡಿ..ಮಹಾದಾಯಿ ತೀರ್ಪು ಗೆಜೆಟ್ ಹೊರಡಿಸಲು ಆಗ್ರಹ..
ಬೆಳಗಾವಿ-
ಮಹದಾಯಿ ವಿಚಾರದಲ್ಲಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಲು ಜೆಡಿಎಸ್ ಮುಖಂಡ ಆಗ್ರಹಿಸಿದ್ದಾರೆ.
ಬೆಳಗಾವಿಯಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರು, ರಾಜ್ಯ ರೈತ ಸಂಘ, ಹಸಿರು ಸೇನೆ ಕಾರ್ಯಕರ್ತರು ಮಹಾದಾಯಿ ತೀರ್ಪಿನ ಗೆಜೆಟ್ ಹೊರಡಿಸುವಂತೆ ಆಗ್ರಹಿಸಿ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಜೆಡಿಎಸ್ ಮುಖಂಡ ಎನ್.ಹೆಚ್.ಕೋನರೆಡ್ಡಿ ನೇತೃತ್ವದಲ್ಲಿ ರೈತ ಸಂಘಟನೆಗಳು ಧರಣಿ ನಡೆಸಿದವು
ಚೆನ್ನಮ್ಮ ವೃತ್ತದಿಂದ ಡಿಸಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ಮಾಡುವ ಮೂಲಕ
ಬೆಳಗಾವಿ ಡಿಸಿ ಮೂಲಕ ಪ್ರಧಾನಿ ಮೋದಿಗೆ ಮನವಿ ಸಲ್ಲಿಸಿದರು.
ತುಮಕೂರಿನಲ್ಲಿ ನಡೆಯುವ ರೈತ ಸಮಾವೇಶಕ್ಕೆ ಪ್ರಧಾನಿ ಮೋದಿ ಆಗಮನ ಹಿನ್ನೆಲೆ.
ಈ ವೇಳೆ ಮಹದಾಯಿ ವಿಚಾರವಾಗಿ ಅಧಿಸೂಚನೆ ಹೊರಡಿಸಲು ಆಗ್ರಹಿಸಿ ಪ್ರತಿಭಟನಾಕಾರರು
ಜಿಲ್ಲಾಧಿಕಾರಿ ಎಸ್‌ಬಿ ಬೊಮ್ಮನಹಳ್ಳಿ ಗೆ ಮನವಿ ಸಲ್ಲಿಸಿದರು
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ