Breaking News

ರಾಜ್ಯದಲ್ಲಿ ನೀರಿನ ಫಿಲ್ಟರ್ ಘಟಕಗಳ ದುರಸ್ಥಿ ಕಾರ್ಯ ಆರಂಭ- ಕೃಷ್ಣ ಭೈರೇಗೌಡ

ಬೆಳಗಾವಿ

ರಾಜ್ಯದಲ್ಲಿ 2498 ಶುದ್ಧಕುಡಿಯುವ ನೀರಿನ ಘಟಕಗಳು ಕಾರ್ಯಾರಂಭ ಮಾಡಿದ ಘಟಕ ಬಂದ್ ಆದವುಗಳನ್ನು ಅವುಗಳನ್ನು ಸಹ ಕಳೆದ 15 ದಿನಗಳಿಂದ ರಾಜ್ಯದ್ಯಂತ ದುರಸ್ಥಿಗೊಳಿಸುವ ಕಾಮಗಾರಿ ನಡೆಯುತ್ತಿದೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೃಷ್ಣಬೈರೇಗೌಡ ಹೇಳಿದರು.

ಅವರು ಮಂಗಳವಾರ ಬೈಲಹೊಂಗಲ್ ತಾಲೂಕಿನ ಪಂಚಾಯತ್ ರಾಜ್ ಇಲಾಖೆಯಡಿಯಲ್ಲಿರುವ ಬರುವ ಕಾರ್ಯಕ್ರಮಗಳ ಕ್ಷೇತ್ರ ವೀಕ್ಷಣೆ ಮಾಡಿ ಪತ್ರಕರ್ತರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಕುಡಿಯುವ ಶುದ್ಧ ನೀರಿನ ಘಟಕಗಳು ಬಹಳ ಕೆಟ್ಟಿವೆ ಎಂದು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಅವುಗಳ ದುರಸ್ಥಿ ಕಾಮಗಾರಿಯನ್ನು ಮಾಡಲಾಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ಸುಮಾರು 360 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಬಂದ್ ಆದವುಗಳನ್ನು ಕಳೆದ 15 ದಿನಗಳಿಂದ ದುರಸ್ಥಿ ಮಾಡುವುದರಲ್ಲಿ ಅಧಿಕಾರಿಗಳು ಶ್ರಮಿಸಿದ್ದಾರೆ. 20 ಘಟಕಗಳು ಮಾತ್ರ ಬಾಕಿ ಉಳಿದ್ದು ಅಧಿಕಾರಿಗಳಿಗೆ ಅವುಗಳನ್ನು ಆದಷ್ಟು ಬೇಗ ದುರಸ್ಥಿಗೊಳಿಸಬೇಕೆಂದು ಸೂಚನೆ ನೀಡಿದ್ದೇನೆ ಎಂದರು.

ರಾಜ್ಯದಲ್ಲಿ ಮಳೆಯಿಂದ ಗ್ರಾಮೀಣ ಭಾಗದ ರಸ್ತೆಗಳು ಹದಗೆಟ್ಟಿವೆ. ತುರ್ತು ರಸ್ತೆ ದುರಸ್ಥಿಗಾಗಿ ಶಾಸಕರ ನೇತೃತ್ವದ ಟಾಸ್ಕ ಪೋರ್ಸ್‍ಗೆ 122 ಕೋಟಿ ರು. ಹಣ ಬಿಡುಗಡೆ ಮಾಡಲಾಗಿದೆ. ಜಿಪಂನಲ್ಲಿಯೂ ಸಹ 24*7ನಡಿಯಲ್ಲಿ 100 ಕೋಟಿ ರು. ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದರು.

ಬೆಳಗಾವಿಯ ಬುಡ್ರಕಟ್ಟಿ ಸೇರಿದಂತೆ 22 ಗ್ರಾಮದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ 23 ಕೋಟಿ ರು. ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆ ವದಗಿಸುವ ಕಾಮಗಾರಿ ಪ್ರಾರಂಭವಾಗಿದ್ದು, ಆದಷ್ಟು ಬೇಗ ಮುಗಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ, ಜಿಪಂ ಅಧ್ಯಕ್ಷೆ ಆಶಾ ಐಹೊಳೆ, ಜಿಪಂ ಸಿಇಒ ರಾಮಚಂದ್ರ ಆರ್. ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *