Breaking News

ದಸರಾ ಮಾದರಿಯಲ್ಲಿ ರಾಜ್ಯೋತ್ಸವ ಆಚರಿಸಲು ವಿಶೇಷ ಅನುದಾನ ಕೊಡಿ…!!

ಬೆಳಗಾವಿ- ಬೆಳಗಾವಿ ಗಡಿವಿವಾದ ಸುಪ್ರೀಂಕೋರ್ಟ್ ನಲ್ಲಿ ತಾರ್ಕಿಕ ಹಂತ ತಲುಪಿದ್ದು ಮುಖ್ಯಮಂತ್ರಿಗಳು ಕೂಡಲೇ ಕನ್ನಡಪರ ಸಂಘಟನೆಗಳ ಸಭೆ ಕರೆಯುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ, ಇಂದು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.

ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಅವರ ನೇತ್ರತ್ವದಲ್ಲಿ ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು ಬೆಳಗಾವಿ ಗಡಿವಿವಾದ ಈಗ ತಾರ್ಕಿಕ ಹಂತ ತಲುಪಿದ್ದು,ಈ ವಿಚಾರವಾಗಿ ರಾಜ್ಯ ಸರ್ಕಾರ ವಿಶೇಷ ಆಸಕ್ತಿ ವಹಿಸುವಂತೆ,ರಾಜ್ಯದ ನೆಲ ಜಲ ಬಾಷೆಯ ರಕ್ಷಣೆಗಾಗಿ ಮುತವರ್ಜಿವಹಿಸಿ ಸೂಕ್ತ ಕ್ರಮಗಳನ್ನು ಜರುಗಿಸುವಂತೆ ಕರವೇ ಕಾರ್ಯಕರ್ತರು ಒತ್ತಾಯಿಸಿದರು.

ಈ ಸಂಧರ್ಭದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ, ಬೆಳಗಾವಿ ಗಡಿವಿವಾದಕ್ಕೆ ಸಂಬಂಧಿಸಿದಂತೆ ನವೆಂಬರ್ ತಿಂಗಳಲ್ಲಿ ಸುಪ್ರೀಂಕೋರ್ಟ್ ನಲ್ಲಿ ಅಂತಿಮ ವಿಚಾರಣೆ ನಡೆಯಲಿದೆ.ಗಡಿ ಸಂರಕ್ಷಣಾ ಆಯೋಗ ಕೂಡ ನಿಷ್ಕ್ರಿಯ ವಾಗಿದೆ, ಈ ವಿಚಾರವಾಗಿ ಮುಖ್ಯಮಂತ್ರಿಗಳು ಕೂಡಲೇ ಬೆಳಗಾವಿಯ ಕನ್ನಡಪರ ಸಂಘಟನೆಗಳ ಸಭೆ ಕರೆದು ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಕನ್ನಡ ಹೋರಾಟಗಾರರ ಜೊತೆ ಸಮಾಲೋಚಣೆ ನಡೆಸುವಂತೆ ಒತ್ತಾಯಿಸಿದರು.

ಈ ಬಾರಿ ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವವನ್ನು ದಸರಾ ಮಾದರಿಯಲ್ಲಿ ಆಚರಿಸಲು ಸರ್ಕಾರ ಬೆಳಗಾವಿ ಜಿಲ್ಲಾಡಳಿತಕ್ಕೆ ವಿಶೇಷ ಅನುದಾನ ಬಿಡುಗಡೆ ಮಾಡಬೇಕು,ಜೊತೆಗೆ ಈಬಾರಿ ಕನ್ನಡದ ನೆಲ ಜಲ‌ಭಾಷೆಯ ರಕ್ಷಣೆ ಹಾಗೂ ಬೆಳಗಾವಿಯ ಗಡಿ ರಕ್ಷಣೆಗಾಗಿ ನಿರಂತರವಾಗಿ ಹೋರಾಟ ಮಾಡುತ್ತ ಬಂದಿರುವ ಇಬ್ಬರು ಹಿರಿಯ ಕನ್ನಡಪರ ಹೋರಾಟಗಾರರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಬೇಕೆಂದು ದೀಪಕ ಗುಡಗನಟ್ಟಿ ಮನವಿ ಮಾಡಿಕೊಂಡಿದ್ದಾರೆ.

ಕರವೇ ರಾಜ್ಯಸಂಚಾಲಕ ಮಹಾದೇವ ತಳವಾರ ಮಾತನಾಡಿ,ಗಡಿ ಸಂರಕ್ಷಣಾ ಆಯೋಗ ಬೆಳಗಾವಿ ಗಡಿ ವಿವಾದದ ಕುರಿತು ಯಾವ ರೀತಿ ಹೋರಾಟ ಮಾಡುತ್ತಿದೆ ಅನ್ನೋದು ಗೊತ್ತಾಗುತ್ತಿಲ್ಲ.ಗಡಿ ಸಂರಕ್ಷಣಾ ಆಯೋಗದ ಕಚೇರಿಯನ್ನು ತಕ್ಷಣ ಬೆಳಗಾವಿಗೆ ಸ್ಥಳಾಂತರ ಮಾಡಬೇಕು,ಮತ್ತು ಗಡಿವಿವಾದದ ಕಾನೂನಾತ್ಮಕ ಹೋರಾಟದ ಮೇಲೆ ನಿಗಾ ಇಡುವದಕ್ಕಾಗಿ, ಸರ್ಕಾರ ಗಡಿ ರಕ್ಷಣಾ ಸಚಿವರನ್ನು ನೇಮಿಸಬೇಕು ಎಂದು ಒತ್ತಾಯಿಸಿದರು‌.

ಸುರೇಶ ಗವಣ್ಣವರ,ಹೊಳೆಪ್ಪಾ ಸುಲದಾಳ,ದಶರಥ ಬನೋಶಿ,ಬಾಳು ಜಡಗಿ, ಗಣೇಶ್ ರೋಕಡೆ,ರಮೇಶ್ ಗವಣ್ಣವರ, ವೇಣು ಬೋವಿ, ಹಾಗೂ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಭಾಗವಹಿಸಿದ್ದರು.

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *