ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ,ಬೆಳಗಾವಿಯಲ್ಲಿ ಠಾಕ್ರೆ ಪ್ರತಿಕೃತಿ ದಹಿಸಿ ಕರವೇ ಆಕ್ರೋಶ
ಬೆಳಗಾವಿ-
ಮಹಾರಾಷ್ಟ್ರದ ಕೊಲ್ಹಾಪೂರದಲ್ಲಿ ಶಿವಸೇನೆ ಕಾರ್ಯಕರ್ತರು ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿರುವ ಘಟನೆ ಖಂಡಿಸಿ ಬೆಳಗಾವಿಯ ಸರ್ಕ್ಯಿಟ್ ಹೌಸ್ ಆವರಣದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ ಠಾಕ್ರೆ ಪ್ರತಿಕೃತಿ ದಹನ ಮಾಡಿ ಕರವೇ ಸೇರಿದಂತೆ ವಿವಿಧ ಕನ್ನಡ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟಿಸಿದರು.
ಮಹಾರಾಷ್ಟ್ರ ದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿಹಚ್ಚಿದ ಸುದ್ಧಿ ಬೆಳಗಾವಿ ತಲಪುತ್ತಿದ್ದಂತೆಯೇ ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಸೇರಿದ ವಿವಿಧ ಕನ್ನಡ ಸಂಘಟನೆಗಳ ಕಾರ್ಯಕರ್ತರು ಮಹಾರಾಷ್ಟ್ರ ಸಿಎಂ ಉದ್ಧವ ಠಾಕ್ರೆ ಪ್ರತಿಕೃತಿ ದಹಿಸಿ ತಮ್ಮ ಆಕ್ರೋಶವನ್ನು ಹೊರಹಾಕಿದರು
ಗಡಿವಿವಾದ ನ್ಯಾಯಾಲಯದಲ್ಲಿದ್ದರೂ ಶಿವಸೇನೆ ಪದೇ ಪದೇ ಗಡಿ ಕ್ಯಾತೆ ತೆಗೆದು ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿ ಭಾರತದ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುತ್ತಿದೆ ಕೇಂದ್ರ ಕೂಡಲೇ ಮದ್ಯಸ್ಥಿಕೆ ವಹಿಸಿ ಶಿವಸೇನೆಯ ವಿರುದ್ಧ ಶಿಸ್ತಿನ ಕ್ರಮ ಜರುಗಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು
ದೀಪಕ ಗುಡಗನಟ್ಟಿ,ಸುರೇಶ ಗವಣ್ಣವರ,ರಮೇಶ ಬದ್ನೂರ,ಗಣೇಶ ರೋಕಡೆ,ಅಮೃತ ಇಝಾರೆ.
ಹೊಳೆಪ್ಪಾ ಸುಳದಾಳ ,ರಾಮಾ ಒಣ್ಣೂರ,ಪ್ರಕಾಶ ಪಾಣ್ಯಾಗೋಳ ಸುಮೀತ ಅಗಸಗಿ ಯಶೋಧಾ ಬಿರಡೆ ಶ್ವೇತಾ ಜಗದಾಳೆ
ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು
ಬೆಳಗಾವಿಯ ಪ್ರವಾಸಿ ಮಂದಿರದಿಂದ ಪ್ರತಿಭಟನೆ ಆರಂಭವಾಗಿ ನಗರದ ಅಶೋಕ ವೃತ್ತದಲ್ಲಿ ಉದ್ಧವ ಠಾಕ್ರೆ ಪ್ರತಿಕೃತಿ ದಹಿಸಲಾಯಿತು