Breaking News

ಬಸ್ಸಿಗೆ ಕಲ್ಲು ಪ್ರಯಾಣಿಕನಿಗೆ ಗಾಯ ಸ್ಥಳಕ್ಕೆ SP ದೌಡು…

ಬೆಳಗಾವಿ : ಸಂಚರಿಸುತ್ತಿದ್ದ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದ ಹಿನ್ನೆಲೆಯಲ್ಲಿ ಬಸ್ ನಲ್ಲಿದ್ದ ಓರ್ವ ಪ್ರಯಾಣಿಕ ಗಾಯಗೊಂಡಿರುವ ಘಟನೆ ಜಿಲ್ಲೆಯ ಬೆನಕನಹೊಳಿ ಬಳಿ ಗುರುವಾರ ರಾತ್ರಿ ನಡೆದಿದೆ.

ಈ ಘಟನೆಯಲ್ಲಿ ಹುಕ್ಕೇರಿ ಅಗ್ನಿಶಾಮಕದಳದ ವಾಹನ ಚಾಲಕ ರಮೇಶ ಚಿವಟೆ (55) ಇವರಿಗೆ ತಲೆಗೆ ಗಾಯವಾಗಿದ್ದು, ಅವರು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಹುಕ್ಕೇರಿ ಯಿಂದ ಬೆಳಗಾವಿಗೆ ಹೊರಟಿದ್ದ ಸಾರಿಗೆ ಬಸ್ ಸಂಖ್ಯೆ KA 22 G 1027 ಇದು ಹುಕ್ಕೇರಿ ತಾಲೂಕಿನ ಬೆನಕನಹೊಳಿ ಗ್ರಾಮದ ಬಳಿ ಸಂಚರಿಸುತ್ತಿದ್ದಾಗ ಯಾರೋ ಕಿಡಿಗೇಡಿಗಳು ಬಸ್ಸಿನ ಮೇಲೆ ಕಲ್ಲು ಎಸೆದಿದ್ದಾರೆ.

ಈ ವಿಷಯ ತಿಳಿದ ಯಮಕನಮರಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಗಾಯಾಳು ಪ್ರಯಾಣಿಕ ರಮೇಶ ಇವರನ್ನು ಆಸ್ಪತ್ರೆಗೆ ಸಾಗಿಸಿ‌ ಚಿಕಿತ್ಸೆ ನೀಡಿದ್ದಾರೆ. ಈ ಘಟನೆ ವಿಷಯ ಅರಿತ ಬೆಳಗಾವಿ ಜಿಲ್ಲಾ ಪೊಲೀಸ ವರಿಷ್ಠ ಭೀಮಾಶಂಕರ ಗುಳೇದ ಅವರು ಸ್ಥಳಕ್ಕೆ ದೌಡಾಯಿಸಿದ್ದಾರೆ.

Check Also

ವೀಕ್ಲಿ ಮ್ಯಾರೇಜ್,ಇದು ಲಕ್ಷ ಲಕ್ಷ ರೂಗಳ ಪ್ಯಾಕೇಜ್ ಹುಡುಗರ ಲೈಫ್ ಡ್ಯಾಮೇಜ್ …..!!!

ಬೆಳಗಾವಿ – ಹೆಣ್ಣು ಮಕ್ಕಳ ಮಾರಾಟ ಆಯ್ತು,ಹನಿ ಟ್ರ್ಯಾಪ್ ಗೋಳಾಟ ಆಯ್ತು ಈಗ ಹೊಸದೊಂದ ಆಟ ಶುರುವಾಗಿದೆ ಇದು ಮದ್ಯ …

Leave a Reply

Your email address will not be published. Required fields are marked *