ಬೆಂಗಳೂರು: ವೇತನ ಹೆಚ್ಚಳ ಬೇಡಿಕೆ ಕುರಿತು ರಾಜ್ಯ ಸರ್ಕಾರ ಹಾಗೂ ಸಾರಿಗೆ ನಿಗಮಗಳ ನೌಕರರ ನಡುವೆ ಸಂಧಾನ ಏರ್ಪಡದೆ ಇರುವುದರಿಂದ ಭಾನುವಾರ ಮಧ್ಯರಾತ್ರಿಯಿಂದಲೇ ಸಾರಿಗೆ ಸಂಸ್ಥೆ ಬಸ್ಸುಗಳು ರಸ್ತೆಗೆ ಇಳಿಯುವುದಿಲ್ಲ.
ಸಾರಿಗೆ ನೌಕರರ ವೇತನವನ್ನು ಶೇ 10ರಷ್ಟು ಹೆಚ್ಚಿಸಲು ಸರ್ಕಾರ ಸಿದ್ಧವಿದೆ. ಆದರೆ, ಶೇ 35ರಷ್ಟು ಏರಿಕೆಗೆ ನೌಕರರು ಪಟ್ಟು ಹಿಡಿದಿರುವುದರಿಂದ ಬಿಕ್ಕಟ್ಟು ಮುಂದುವರಿದಿದೆ.
ಶೇ 35ರಷ್ಟು ವೇತನ ಪರಿಷ್ಕರಣೆ ಸಾಧ್ಯ ಇಲ್ಲ. ಆದರೆ, ಕೊಡುಕೊಳ್ಳುವ ಆಧಾರದಲ್ಲಿ ಸೌಹಾರ್ದಯುತ ಮಾತುಕತೆಗೆ ಸರ್ಕಾರ ಬದ್ಧವಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ‘ಪ್ರಜಾವಾಣಿ’ಗೆ ತಿಳಿಸಿದರು.
ಮುಷ್ಕರ ನಡೆಸುವ ನೌಕರರ ಮೇಲೆ ಅಗತ್ಯ ವಸ್ತುಗಳ ಸೇವಾ ಕಾಯ್ದೆ (ಎಸ್ಮಾ) ಕಾಯ್ದೆ ಜಾರಿಗೊಳಿಸುವ ಕುರಿತು ಇನ್ನೂ ಯೋಚನೆ ಮಾಡಿಲ್ಲ. ನೌಕರರ ಹಲವು ಬೇಡಿಕೆಗಳನ್ನು ಈಗಾಗಲೇ ಈಡೇರಿಸಲಾಗಿದೆ ಎಂದೂ ಸಚಿವರು ಹೇಳಿದರು.
ಜನವರಿ 1ರಿಂದ ಜಾರಿಗೆ ಬರುವಂತೆ ರಾಜ್ಯದ ನಾಲ್ಕೂ ರಸ್ತೆ ಸಾರಿಗೆ ನಿಗಮಗಳ ನೌಕರರು ಮತ್ತು ಅಧಿಕಾರಿಗಳ ವೇತನವನ್ನು ಶೇ 8ರಷ್ಟು ಹೆಚ್ಚಿಸಲು ಸಚಿವ ಸಂಪುಟ ಅನುಮೋದನೆ ನೀಡಿತ್ತು. ಇದೀಗ ಶೇ 10ರಷ್ಟು ಹೆಚ್ಚಿಸಲು ಒಪ್ಪಲಾಗಿದೆ. ಇದರಿಂದ ಕಾರ್ಮಿಕ ಸಂಘಟನೆಗಳು ಉದ್ದೇಶಿತ ಮುಷ್ಕರ ಕೈ ಬಿಡಬೇಕು ಎಂದೂ ಸಚಿವರು ಮನವಿ ಮಾಡಿದರು.
Check Also
ವೀಕ್ಲಿ ಮ್ಯಾರೇಜ್,ಇದು ಲಕ್ಷ ಲಕ್ಷ ರೂಗಳ ಪ್ಯಾಕೇಜ್ ಹುಡುಗರ ಲೈಫ್ ಡ್ಯಾಮೇಜ್ …..!!!
ಬೆಳಗಾವಿ – ಹೆಣ್ಣು ಮಕ್ಕಳ ಮಾರಾಟ ಆಯ್ತು,ಹನಿ ಟ್ರ್ಯಾಪ್ ಗೋಳಾಟ ಆಯ್ತು ಈಗ ಹೊಸದೊಂದ ಆಟ ಶುರುವಾಗಿದೆ ಇದು ಮದ್ಯ …