ಬೆಂಗಳೂರು-ಮುಡಾ ಹಗರಣ ವಿರೋಧಿಸಿ ಆಗಸ್ಟ್ 3ರಿಂದ ಪಾದಯಾತ್ರೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ನಾಯಕರ ಸಮನ್ವಯ ಸಭೆ ಜೆಡಿಎಸ್ ಕಚೇರಿಯಲ್ಲಿ ನಡೆಯಿತು. ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡುವ ವೇಳೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಮೂಗಿನಿಂದ ರಕ್ತಸ್ರಾವವಾಗಿದೆ. ಈ ವೇಳೆ ಬಟ್ಟೆಯಿಂದ ಮೂಗನ್ನು ಒರೆಸಿಕೊಂಡರೂ ರಕ್ತಸ್ರಾವ ನಿಲ್ಲಲಿಲ್ಲ. ಹೀಗಾಗಿ ಜೊತೆಯಲ್ಲಿದ್ದ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ತಂದೆಯನ್ನು ಜಯನಗರ ಅಪೋಲೋ ಆಸ್ಪತ್ರೆಗೆ ಕರೆದೊಯ್ದರು.
ತಂದೆಯ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ನಿಖಿಲ್ ಕುಮಾರಸ್ವಾಮಿ, ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ. ಕೆಲಸದ ಒತ್ತಡದಲ್ಲಿ ವಿಶ್ರಾಂತಿ ತೆಗೆದುಕೊಳ್ಳಲು ಆಗಿಲ್ಲ. ಕುಮಾರಸ್ವಾಮಿ ಅವರು ಆರೋಗ್ಯವಾಗಿದ್ದಾರೆ. ತಂದೆ-ತಾಯಿ ಆಶೀರ್ವಾದ ಕುಮಾರಣ್ಣ ಮೇಲೆ ಇದೆ. ಅವರಿಗೆ ಏನೂ ಆಗಿಲ್ಲ, ಆರೋಗ್ಯವಾಗಿದ್ದಾರೆ ಎಂದು ಹೇಳಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ