ದೊಡ್ಡ ಮಟ್ಟದ ಬದಲಾಣೆಯ ಬೆಳವಣಿಗೆಗಳು ನಡೆಯುವದು ನಿಶ್ಚಿತ- ಕುಮಾರಸ್ವಾಮಿ
ಬೆಳಗಾವಿ- ಚುನಾವಣೆಗೆ ಒಂದು ವರ್ಷ ಬಾಕಿ ಇದೆ ರಾಜ್ಯದಲ್ಲಿ ಜನತಾ ಪರಿವಾರ ಒಂದಾಗಬೇಕು ಎನ್ನುವ ಪ್ರಯತ್ನಗಳು ನಡೆದಿವೆ ಮುಂದಿನ ದಿನಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬದಲಾವಣೆಯ ಬೆಳವಣಿಗೆಗಳು ನಡೆಯುವದು ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸುಳಿವು ನೀಡಿದ್ದಾರೆ
ಅರಬಾಂವಿ ಮತ ಕ್ಷೇತ್ರದದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಆಗಮಿಸಿದ ಅವರು ಸಾಂಬ್ರಾ ವಿಮಾಣ ನಿಲ್ದಾಣದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದರು ರಾಜ್ಯದ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ ಅವರ ಎದುರು ಹೆಚ್ ವಿಶ್ವನಾಥ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಕಾಂಗ್ರೆಸ್ ಪಕ್ಷ ಬಿಡುವ ಇಂಗಿತ ವ್ಯೆಕ್ತಪಡಿಸಿದ್ದಾರೆ ಅವರು ಜೆಡಿಎಸ್ ಸೇರುವ ನಿರ್ಧಾರ ಕೈಗೊಂಡರೆ ಸ್ವಾಗತಿಸುತ್ತೇನೆ ಎಂದು ಕುಮಾರಸ್ವಾಮಿ ತಿಳಿಸಿದರು
ಬೆಳಗಾವಿ ಜಿಲ್ಲೆಯ ಹಲವಾರು ಜನ ಕಾಂಗ್ರೆಸ್ ಹಾಗು ಬಿಜೆಪಿ ನಾಯಕರು ಜೆಡಿಎಸ್ ಸೇರುತ್ತಾರೆ ಎನ್ನುವ ಮಾಹಿತಿಯನ್ನು ಮಾದ್ಯಮಗಳ ಮುಖಾಂತರ ತಿಳಿದುಕೊಂಡಿದ್ದೇನೆ ಅದರೆ ಇನ್ನುವರೆಗೆ ತಮ್ಮನ್ನು ಈ ವಿಚಾರದಲ್ಲಿ ಭೇಟಿಯಾಗಿಲ್ಲ ಸತೀಶ ಜಾರಕಿಹೊಳಿ ಅವರು ಖಾಸಗಿ ಕಾರ್ಯಕ್ರಮದಲ್ಲಿ ತಮ್ಮ ಜೊತೆ ವೇದಿಕೆ ಹಂಚಿಕೊಂಡಿದ್ದರು ಆದರೆ ಅದಕ್ಕೆ ರಾಜಕೀಯ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಕುಮಾರಸ್ವಾಮಿ ಹೇಳಿದರು
ಮುಂಬೈ ಕರ್ನಾಟಕ ಭಾಗದ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಸಂಘಟನೆಗಾಗಿ ಹೆಚ್ಚಿನ ಸಮಯ ನೀಡಲು ನಿರ್ಧರಿಸಿದ್ದೇನೆ ಅದಕ್ಕಾಗಿ ಈ ಪ್ರದೇಶದಲ್ಲಿ ಪ್ರವಾಸ ಆರಂಭಿಸಿದ್ದೇನೆ ಉತ್ತರ ಕರ್ನಾಟಕದ ಸಮಸ್ಯೆಗಳು ಬಂದಾಗ ಮುದಲಿಗನಾಗಿ ಪ್ರತಿಭಟಿಸಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದರು
ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ರಾಜ್ಯದಲ್ಲಿ ಪಾರದರ್ಶಕ ಬ್ರಷ್ಟಾಚಾರ ರಹಿತ ಆಡಳಿತ ಕೊಡುತ್ತೇವೆ ಅಂತ ಹೇಳಿದ್ರು ಆದ್ರೆ ಖಾಸಗಿ ಕಂಪನಿಯೊಂದು ನಡೆಸಿದ ಸಮೀಕ್ಷೆಯಲ್ಲಿ ಬ್ರಷ್ಟಾಚಾರದಲ್ಲಿ ಕರ್ನಾಟಕ ನಂಬರ್ ಒನ್ ಸ್ಥಾನ ಪಡೆದಿದೆ ಇವರು ಬ್ರಷ್ಟಾಚಾರ ರಹಿತ ಆಡಳಿತ ನಡೆಸುತ್ತೇವೆ ಎಂದು ಕೊಟ್ಟ ಭರವಸೆ ಏಮಾಯಿತು ಎಂದು ಪ್ರಶ್ನಿಸುವ ಮೂಲಕ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ಮಾಡಿದರು
ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ನಾಲ್ಕು ವರ್ಷ ಪೂರೈಸಿದೆ ಪತ್ರಿಕೆಗಳಲ್ಲಿ ದೊಡ್ಡ ದೊಡ್ಡ ಜಾಹಿರಾತು ನೀಡಿ ಸರ್ಕಾರ ಸಾಧನೆ ಮಾಡಿದೆ ಎಂದು ಬಿಂಬಿಸಲು ಹೊರಟಿದ್ದಾರೆ ರಾಜ್ಯದ ರೈತರು ಸಂಕಷ್ಟದಲ್ಲಿದ್ದರೂ ಅವರ ನೆರವಿಗೆ ಕೇಂದ್ರ ಸರ್ಕಾರವಾಗಲಿ ರಾಜ್ಯ ಸರ್ಕಾರವಾಗಲಿ ಧಾವಿಸಲಿಲ್ಲ ಎಂದು ಕಾರಸ್ವಾಮಿ ಆರೋಪಿಸಿದರು
ಅಧಿಕಾರಿಗಳ ಮೇಲೆ ಕಂಟ್ರೋಲ್ ಇಲ್ಲ ಮಹಿಳೆಯರಿಗೆ ರಕ್ಷಣೆ ಇಲ್ಲ ರಾಜ್ಯದ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಕೇಳಿದರೆ ಅಧಿಕಾರಿಗಳು ಮಾಹಿತಿ ಕೊಡುತ್ತಿಲ್ಲ ಪಾರದರ್ಶಕ ಸರ್ಕಾರ ಅಂದ್ರೆ ಇದೇನಾ? ಎಂದು ಕುಮಾರಸ್ವಾಮಿ ಲೇವಡಿ ಮಾಡಿದರು
Check Also
ನಗರದ ಹೊರವಲಯದ ಮನೆಯಲ್ಲಿ ಕೊಳೆತ ಎರಡು ಶವ ಪತ್ತೆ….
ಅಥಣಿ- ಮನೆಯಲ್ಲಿಯೇ ಕೊಳೆತ ಸ್ಥಿತಿಯಲ್ಲಿ ದಂಪತಿಗಳ ಶವಗಳು ಪತ್ತೆಯಾಗಿವೆ.ಅಥಣಿ ಪಟ್ಟಣದ ಮದಭಾವಿ ರಸ್ತೆ ಚೌವ್ಹಾಣ್ ತೋಟದಲ್ಲಿ ಜೋಡಿ ಶವಗಳು ಪತ್ತೆಯಾಗಿವೆ. …