ಬೆಳಗಾವಿ- ಬೆಳಗಾವಿ ಬಸ್ ನಿಲ್ಧಾಣದ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದ್ದು ಈ ಕುರಿತು ಸೋಶಿಯಲ್ ಮಿಡಿಯಾದಲ್ಲಿ ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿರುವ ಹಿನ್ನಲೆಯಲ್ಲಿ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಮಂತ್ರಿಗಳೂ ಆಗಿರುವ ಲಕ್ಷ್ಮಣ ಸವದಿ ನಾಳೆ ಬೆಳಗಾವಿ ಬಸ್ ನಿಲ್ಧಾಣಕ್ಕೆ ಭೇಟಿ ನೀಡಲಿದ್ದಾರೆ.
ಉಪ ಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ಸೋಮವಾರ (ಜ.೬) ಬೆಳಿಗ್ಗೆ ೧೦ ಗಂಟೆಗೆ ನಗರದ ಕೇಂದ್ರ ಬಸ್ ನಿಲ್ದಾಣ ಕಾಮಗಾರಿ ವೀಕ್ಷಣೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಮಲ್ಟಿ ಎಕ್ಸೆಲ್ ಸೇರಿದಂತೆ ಒಟ್ಟು ೯ ಹೊಸ ಬಸ್ ಗಳನ್ನು ಸಾರ್ವಜನಿಕ ಬಳಕೆಗೆ ಅರ್ಪಿಸಲಿದ್ದಾರೆ.
ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಮತ್ತಿತರರು ಉಪಸ್ಥಿತರಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಕಾಮಗಾರಿ ನಿಧಾನಗತಿಯಲ್ಲಿ ಸಾಗಲು ಅನುದಾನದ ಕೊರತೆಯೋ ಅಥವಾ ಗುತ್ತಿಗೆದಾರನ ನಿರ್ಲಕ್ಷ್ಯ ವೋ ಅನ್ನೋದು ನಾಳೆ ಗೊತ್ತಾಗಲಿದೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ