ಜೂನ್ ಅಂತ್ಯದೊಳಗೆ ಬೆಳಗಾವಿ ಬಸ್ ನಿಲ್ಧಾಣದ ಕಾಮಗಾರಿ ಪೂರ್ಣಗೊಳಿಸಲು ಸೂಚನೆ
ಬೆಳಗಾವಿ – ಬೆಳಗಾವಿ ಕೇಂದ್ರ ಬಸ್ ನಿಲ್ದಾಣ ಕಾಮಗಾರಿಯ ಪರಿವೀಕ್ಷಣೆ ಕೈಗೊಂಡ ಬಳಿಕ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು, ಜೂನ್ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಕೆ.ಎಸ್.ಈಶ್ವರಪ್ಪ, ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ್ ಕವಟಗಿಮಠ, ಶಾಸಕರಾದ ಅನಿಲ್ ಬೆನಕೆ, ಅಭಯ್ ಪಾಟೀಲ, ಮಹಾಂತೇಶ ದೊಡಗೌಡ್ರ, ಮಹೇಶ್ ಕುಮಠಳ್ಳಿ ಮತ್ತಿತರರು ಉಪಸ್ಥಿತರಿದ್ದರು.
ವಾಯವ್ಯ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಆರ್.ಮುಂಜಿ ಅವರು, ಬಸ್ ನಿಲ್ದಾಣದ ಕಾಮಗಾರಿ ಕುರಿತು ಮಾಹಿತಿ ನೀಡಿದರು.
ನೂತನ ಬಸ್ ನಲ್ಲಿ ಡಿಸಿಎಂ ಪ್ರಯಾಣ:
ಕಾರ್ಯಕ್ರಮದ ಬಳಿಕ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು, ನೂತನ ಮಲ್ಟಿ ಎಕ್ಸೆಲ್ ಬಸ್ ನಲ್ಲಿ ಸುವರ್ಣ ವಿಧಾನಸೌಧಕ್ಕೆ ಪ್ರಯಾಣಿಸಿದರು.
ಸುವರ್ಣ ವಿಧಾನಸೌಧದಲ್ಲಿ ಆಯೋಜಿಸಲಾಗಿರುವ ಎರಡು ದಿನಗಳ ರಾಷ್ಟ್ರೀಯ ಕಾರ್ಯಾಗಾರ ಉದ್ಘಾಟನಾ ಸಮಾರಂಭಕ್ಕೆ ಎಲ್ಲ ಅತಿಥಿಗಳು ಬಸ್ ನಲ್ಲೇ ಪ್ರಯಾಣಿಸಿದರು.
ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಕೆ.ಎಸ್.ಈಶ್ವರಪ್ಪ, ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ್ ಕವಟಗಿಮಠ ಸೇರಿದಂತೆ ಎಲ್ಲ ಶಾಸಕರು ಬಸ್ ನಲ್ಲಿ ಜತೆಗೆ ತೆರಳಿದರು.