KSRTC, BMTC, NWKRTC, NEKRTC ಈ ನಾಲ್ಕೂ ಸಾರಿಗೆ ಸಂಸ್ಥೆಗಳ ಸಿಬ್ಬಂದಿಗಳಿಗೆ ಮೇ ತಿಂಗಳ ವೇತನವನ್ನು ನೀಡುವುದಕ್ಕಾಗಿ ಅಗತ್ಯವಿದ್ದ 325.01 ಕೋಟಿ ರೂ.ಗಳನ್ನು ಇಂದು ರಾಜ್ಯ ಸರ್ಕಾರ ಬಿಡುಗಡೆಗೊಳಿಸಿದೆ.
ಕೋವಿಡ್-19 ಹಿನ್ನೆಲೆಯಲ್ಲಿ ಘೋಷಿಸಿದ್ದ ಲಾಕ್‍ಡೌನ್‍ನಿಂದಾಗಿ ಸಾರಿಗೆ ಸಂಸ್ಥೆಗಳು ಅಪಾರ ನಷ್ಟ ಅನುಭವಿಸಿದ್ದರಿಂದ ಸಿಬ್ಬಂದಿಗಳಿಗೆ ವೇತನ ನೀಡಲು ಸರ್ಕಾರ ವಿಶೇಷ ಅನುದಾನ ನೀಡಬೇಕೆಂದು ನಾವು ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡಿದ್ದು, ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿ ಅಗತ್ಯ ಹಣ ಬಿಡುಗಡೆ ಮಾಡಿದ ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ನಾನು ಧನ್ಯವಾದಗಳನ್ನು ತಿಳಿಸಬಯಸುತ್ತೇನೆ.
ಲಕ್ಷ್ಮಣ ಸಂ. ಸವದಿ
ಉಪ ಮುಖ್ಯಮಂತ್ರಿಗಳು, ಸಾರಿಗೆ ಇಲಾಖೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ