ಬೆಳಗಾವಿ-
ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿದ್ರೆ ಮೊದಲು ನಾನೇ ಜೈ ಎನ್ನುತ್ತೇನೆ ಹೀಗೆ ವಿವಾದಿತ ಹೇಳಿಕೆ ನೀಡಿದ್ದ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್. ಚುನಾವಣೆ ಹತ್ತಿರುವಾಗುತ್ತಿದ್ದಂತೆ ಬೆಳಗಾವಿಯಲ್ಲಿ ಮತ ಸೆಳೆಯೊಕೆ ರಾಜಕಾರಣಿಗಳು ಸ್ಟ್ರಂಟ್ ಆರಂಭಿಸಿದ್ದಾರೆ.
ಇತ್ತೀಚಿಗೆ ಬೆಳಗಾವಿ ತಾಲೂಕಿನ ಬಸರಿಕಟ್ಟಿ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಾವಿಗ ಕರ್ನಾಟಕದಲ್ಲಿದ್ದೇವೆ ಆದರೇ ಗಡಿ ವಿಚಾರ ಸುಪ್ರೀಂ ಕೋರ್ಟ್ ನಲ್ಲಿದೆ. ಸುಪ್ರೀಂ ಕೋರ್ಟ್ ನಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಹೋಗಬೇಕು ಎನ್ನುವ ನಿರ್ಣಯ ಆದ್ರೆ ಮೊದಲು ನಾನೇ ಮಹಾರಾಷ್ಟ್ರದ ಧ್ವಜ ಹಿಡಿಯುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಬಹಿರಂಗವಾಗಿ ಹೇಳಲು ಯಾರಿಗೂ ಧೈರ್ಯವಿಲ್ಲ. ಆದರೇ ನನಗೆ ಯಾರ ಭಯವಿಲ್ಲ ನಾನು ಯಾರಿಗು ಹೆದರಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
ಇನ್ನೂ ಗಡಿ ವಿವಾದದ ವಿಚಾರಣೆ ಸುಪ್ರೀಂ ವ್ಯಾಪ್ತಿಗೆ ಬರುತ್ತದೆ ಇಲ್ಲವೋ ಎನ್ನುವ ಬಗ್ಗೆಯೆ ಇನ್ನೂ ನಿರ್ಧಾರವಾಗಿಲ್ಲ. ಆದರೇ ಲಕ್ಷ್ಮೀ ಹೆಬ್ಬಾಳ್ಕರ್ ಆಗಲೇ ಬೆಳಗಾವಿಯನ್ನು ಮಹಾರಾಷ್ಟಕ್ಕೆ ಸೇರಿಸುವ ಯತ್ನ ಮಾಡಿದ್ದಾರೆ. ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯ ಈ ಹೇಳಿಕೆ ಇದೀಗ ಭಾರೀ ವಿವಾದಾತ್ಮಕ್ಕೆ ಕಾರಣವಾಗಿದೆ