ಕೊಪ್ಪಳದ ಅಂಗನವಾಡಿಯಲ್ಲಿ ಮಕ್ಕಳ‌ ತಟ್ಟೆಯಿಂದ ಮೊಟ್ಟೆ ಕಸಿದ ಪ್ರಕರಣ

ಬೆಂಗಳೂರು:-ಅಂಗನವಾಡಿ ಮಕ್ಕಳಿಗೆ ನೀಡಲಾಗಿದ್ದ ಮೊಟ್ಟೆಯನ್ನು ತಟ್ಟೆಯಿಂದ ಎತ್ತಿಕೊಳ್ಳುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳದ ಶಿಶು ಅಭಿವೃದ್ಧಿಕಾರಿ (ಸಿಡಿಪಿಒ) ಅಮಾನತು ಮಾಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದ್ದಾರೆ. ಜೊತೆಗೆ ಕೊಪ್ಪಳ ಜಿಲ್ಲಾ ಉಪ ನಿರ್ದೇಶಕರಿಗೆ (ಡಿಡಿ) ನೋಟೀಸ್ ನೀಡಲು ಸೂಚಿಸಿದರು.

ಕೊಪ್ಪಳದ ಗುಂಡೂರು ಗ್ರಾಮದ ಅಂಗನವಾಡಿಯ ಕಾರ್ಯಕರ್ತೆ ಲಕ್ಷ್ಮೀ ಹಾಗೂ ಸಹಾಯಕಿ ಶಹನಾಜ್ ಬೇಗಂ ಅವರ ಮೊಟ್ಟೆ ವಂಚನೆ ವಿಡಿಯೋ ವೈರಲ್ ಆಗಿತ್ತು. ಇದನ್ನು ಗಮನಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ತಕ್ಷಣ ಇಲಾಖೆ ಅಧಿಕಾರಿಗಳಿಗೆ ಫೋನ್ ಮಾಡಿ, ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನು ಸಸ್ಪೆಂಡ್ ಮಾಡುವಂತೆ ಸೂಚಿಸಿದರು. ಇಡೀ ಪ್ರಕರಣದ ವರದಿ ನೀಡುವಂತ ಆದೇಶಿಸಿದ್ದಾರೆ.

ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆ ಆಗಲೇಬೇಕು. ಕೆಳ ಹಂತದಿಂದ ಇಲಾಖೆಯಲ್ಲಿ‌ ಸುಧಾರಣೆ ತರಬೇಕು ಅಂತ ಕಷ್ಟ ಪಡುತ್ತಿದ್ದೇನೆ. ಪೌಷ್ಟಿಕ ಆಹಾರ, ಗುಣಮಟ್ಟದ ಶಿಕ್ಷಣ ಅಂಗನವಾಡಿಯ ಮೂಲ‌ ಉದ್ದೇಶ. ಆದರೆ, ಬಡಮಕ್ಕಳಿಗೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ‌

ಒಂದು ಮಗುವಿಗೆ ಊಟಕ್ಕೆ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ 8 ರೂ. ಭರಿಸಲಾಗುತ್ತಿದೆ. ಕಳೆದ 9 ವರ್ಷಗಳಿಂದ ಯೂನಿಟ್ ದರ ಏರಿಕೆ ಮಾಡಿಲ್ಲ. ಬೇಳೆಗಳ ಬೆಲೆ ಬಹಳಷ್ಟು ಹೆಚ್ಚಳವಾಗಿದೆ. ಮೊಟ್ಟೆ, ಗುಣಮಟ್ಟದ ಕೆನೆ ಭರಿತ ಹಾಲು ಕೊಡುವುದು ಸಿಎಂ ಸಿದ್ದರಾಮಯ್ಯ ಸರ್ಕಾರದ ಯೋಜನೆ. ಮ‌ಕ್ಕಳಿಗೆ ಊಟ ಬಡಿಸುವ ವೇಳೆ ಕಡ್ಡಾಯವಾಗಿ ವೀಡಿಯೋ ಚಿತ್ರೀಕರಣ ಮಾಡಬೇಕು ಎಂದು ತಿಳಿಸಿದರು. ‌

ಚಿತ್ರೀಕರಣದ ಬಳಿಕ ತಾಲ್ಲೂಕು ಮಟ್ಟದಿಂದ ಜಿಲ್ಲಾ ಮಟ್ಟಕ್ಕೆ ವಾಟ್ಸಪ್ ಗ್ರೂಪ್ ಗಳ ಮೂಲಕ ಅಪ್‌ ಲೋಡ್ ಆಗಬೇಕು. ಇದೇ ರೀತಿಯ ಪ್ರಕರಣ ಕಳೆದ ಬಾರಿಯೂ ಕೇಳಿಬಂದಿದ್ದು, ನಂತರ ವೀಡಿಯೋ ಚಿತ್ರೀಕರಣ ಕಡ್ಡಾಯ ಮಾಡಿದ್ದೇವೆ.‌ ಇದೀಗ ವೀಡಿಯೋ‌ ಚಿತ್ರೀಕರಣ ಕಡ್ಡಾಯದಿಂದಲೇ ಈ ಪ್ರಕರಣ ಬೆಳಕಿಗೆ ಬಂದಿದೆ ಎಂದರು.

ಕೈಗೆ ಬಂದ ತುತ್ತು ಬಾಯಿಗೆ ಬಂದಿಲ್ಲ ಅನ್ನೋ ಸ್ಥಿತಿ ಮಕ್ಕಳಿಗೆ ಆಗಿದೆ. 69 ಸಾವಿರ ಅಂಗನವಾಡಿಗಳನ್ನ ಕರ್ನಾಟಕ ರಾಜ್ಯದಲ್ಲಿ ನಡೆಸುತ್ತಿದ್ದೇವೆ‌ ಎಲ್ಲೋ ಒಂದು ಕಡೆ ಆದ್ರೆ ಸಂಪೂರ್ಣ ಇಲಾಖೆಗೆ ಕಷ್ಟ ಆಗುತ್ತೆ. ನಿನ್ನೆ ರಾತ್ರಿಯೇ ಈ ಪ್ರಕರಣ ನನ್ನ ಗಮನಕ್ಕೆ ಬಂದಿದ್ದು ತಕ್ಷಣವೇ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದರು.

ಆ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನ ಈಗಾಗಲೇ ಕೆಲಸದಿಂದ ಸಸ್ಪೆಂಡ್ ಮಾಡಲಾಗಿದ್ದು , ಇಂತಹ ತಪ್ಪನ್ನ ಮಾಡಿದ್ರೆ ಕಡ್ಡಾಯವಾಗಿ ಕೆಲಸದಿಂದ ನಿವೃತ್ತಿಗೊಳಿಸುತ್ತೇನೆ. ಬೇರೆಯವರಿಗೆ ಈ ಪ್ರಕರಣ ಪಾಠ ಆಗಬೇಕು. ಸಿಡಿಪಿಒ ಅಮಾನತು ಮಾಡಿ, ಡಿಡಿಗೆ ನೋಟೀಸ್ ನೀಡಲು ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

Check Also

ಬೆಳಗಾವಿ ಮಹಾನಗರದ ಅಪಾಯಕಾರಿ ತಂತಿಗಳ ತೆರವು

  ಗಣೇಶೋತ್ಸವ- ಅಪಾಯಕಾರಿ ವಿದ್ಯುತ್ ತಂತಿಗಳ ತೆರವು; ಮಾರ್ಗಗಳ ಎತ್ತರ ಹೆಚ್ಚಳ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಬೆಳಗಾವಿ, -ಗಣೇಶೋತ್ಸವ ಹಿನ್ನೆಲೆಯಲ್ಲಿ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.