ಬೆಳಗಾವಿ- ರಸ್ತೆ ಅಪಘಾತದದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಸಚವೆ ಲಕ್ಷ್ಮೀ ಹೆಬ್ಬಾಳಕರ್ ತಮ್ಮ ಇಲಾಖೆಯ ಕಾರ್ಯವೈಖರಿಯನ್ನು ಆನ್ ಲೈನ್ ಮೂಲಕ ಪರಶೀಲಿಸುತ್ತಿದ್ದು ವರ್ಕ್ ಫ್ರಾಮ್ ಹೋಮ್ ಸಿಸ್ಟಮ್ ಅನುಸರಿಸುತ್ತಿದ್ದಾರೆ.
ಸೋಮವಾರ,ಸಿಎಂ ಸಿದ್ರಾಮಯ್ಯ ಅವರೊಂದಿಗೆ ವಿಡಿಯೋ ಸಂವಾದದ ಮೂಲಕ ನಡೆದ 2025-2026 ನೇ ಸಾಲಿನ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದರುಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗೆ ಸಂಬಂಧಿಸಿದ ಬೇಡಿಕೆಗಳ ಕುರಿತು ಮುಖ್ಯ ಮಂತ್ರಿಗಳೊಂದಿಗೆ ಸುಧೀರ್ಘ ಕಾಲ ಚರ್ಚಿಸಿದ್ದಾರೆ.ಇದೇ ವೇಳೆ ಇಲಾಖೆಯ ಬೇಡಿಕೆಗಳಿಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.
ವಿಡಿಯೋ ಸಂವಾದಲ್ಲಿ ರಾಜ್ಯ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.