ಬೆಳಗಾವಿ:- ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಲಕ್ಷ್ಮೀ ಆರ್. ಹೆಬ್ಬಾಳಕರ ರವರು ಇಂದು ಶುಕ್ರವಾರ ತಮ್ಮ ಅಪಾರ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದರು.
ಬೆಳಗಾವಿಯ ಹಿಂಡಲಗಾ ಗಣಪತಿ ಮಂದಿರದಲ್ಲಿ ವಿಘ್ನವಿನಾಯಕನಿಗೆ ಪೂಜೆ ಸಲ್ಲಿಸಿ ಗಣಪತಿ ಬಪ್ಪಾ ಮೋರಯಾ ಎಂದು ಬರೆಯಲಾದ ಟೋಪಿ ಧರಿಸಿ ಸಹಸ್ರಾರು ಸಂಖ್ಯೆಯಲ್ಲಿ ಸೇರಿದ ತಮ್ಮ ಬೆಂಬಲಿಗರೊಂದಿಗೆ ಕ್ಲಬ್ ರಸ್ತೆಯ ಮೂಲಕ ಮೆರವಣಿಗೆಯಲ್ಲಿ ತೆರಳಿ ಲಕ್ಷ್ಮೀ ಆರ್. ಹೆಬ್ಬಾಳಕರ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ಆಯ್ಕೆ ಬಯಸಿ ನಾಮಪತ್ರ ಸಲ್ಲಿಸಿದರು.
ಕ್ಲಬ್ ರಸ್ತೆಯಲ್ಲಿರುವ ಸಿಪಿಯೆಡ್ ಮೈದಾನದಿಂದ ಮೆರವಣಿಗೆ ಆರಂಭಿಸಿದ ಲಕ್ಷ್ಮೀ ಆರ್. ಹೆಬ್ಬಾಳಕರ ಚನ್ನಮ್ಮ ವೃತ್ತ ಸರ್ದಾರ ಕಾಲೇಜು ರಸ್ತೆ ಮೂಲಕ ಸಂಚರಿಸಿ ಬೆಳಗಾವಿ ತಹಶೀಲ್ದಾರ ಕಛೇರಿಯಲ್ಲಿರುವ ಬೆಳಗಾವಿ ಗ್ರಾಮೀಣ ಕ್ಷೇತ್ರದ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಸಿದ ಬಳಿಕ ಮಾದ್ಯಮ ಮಿತ್ರ ಜೊತೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಪರವಾದ ಅಲೆಯಿದೆ. ಕಳೆದ ಹತ್ತು ವರ್ಷಗಳಿಂದ ಗ್ರಾಮೀಣ ಕ್ಷೇತ್ರದ ಜನರ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅವರ ಕಷ್ಟ ಸುಖಗಳಿಗೆ ಸ್ಪಂಧಿಸಿದ್ದೇನೆ. ಗ್ರಾಮೀಣ ಕ್ಷೇತ್ರದಲ್ಲಿ ಹೋದಲ್ಲೆಲ್ಲ ಉತ್ತಮ ಪ್ರತಿಕ್ರೀಯೆ ವ್ಯಕ್ತವಾಗುತ್ತಿದೆ. ಈ ಬಾರಿ ಜನ ಆಶೀರ್ವಾದ ಮಾಡಿ ಗೆಲ್ಲಿಸುತ್ತಾರೆಂದು ಲಕ್ಷ್ಮೀ ಹೆಬ್ಬಾಳಕರ ವಿಶ್ವಾಸ ವ್ಯಕ್ತ ಪಡಿಸಿದರು.
ರಾಷ್ಟ್ರಪಿತ ಮಹಾತ್ಮಾ ಗಾಂಧಿಜಿಯವರು ರಘುಪತಿ ರಾಘವ ರಾಜಾರಾಮ, ಸಬ್ಕೋ ಸನ್ಮತಿ ದೇ ಭಗವಾನ ಎಂಬ ಮಂತ್ರದ ಮೂಲಕ ಜಾತ್ಯಾತೀತವಾದ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಿದ್ದು, ರಾಮ ರಾಜ್ಯದ ಸಂಕಲ್ಪದೊಂದಿಗೆ ಅಭಿವೃದ್ಧಿಯ ಮಂತ್ರ ಜಪಿಸಿ ಕ್ಷೇತ್ರದ ಜನರ ವಿಶ್ವಾಸ ಗೆದ್ದಿದ್ದೇನೆ. ಈ ಬಾರಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವುದು ನಿಶ್ಚಿತ ಎಂದು ಹೆಬ್ಬಾಳಕರ ಹೇಳಿದರು.
Check Also
ಎರಡು ಗ್ರಾಮಗಳಿಗೆ ದೀಪಾವಳಿ ಗೀಫ್ಟ್ ಕೊಟ್ಟ ಸಾಹುಕಾರ್….!!
ತಿಗಡಿ ಮತ್ತು ಅವರಾದಿ ಗ್ರಾಮಗಳಿಗೆ ದಸರಾ ಹಬ್ಬದ ಗಿಫ್ಟ್ ಕೊಟ್ಟ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಗಡಿ, ಅವರಾದಿಗೆ ಪದವಿ ಪೂರ್ವ …