ಬೆಳಗಾವಿ- ರಾಜ್ಯದಲ್ಲಿಯೇ ಅತೀ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯಿಂದ ಮೊದಲ ಬಾರಿಗೆ ಮಹಿಳಾ ಮಂತ್ರಿಯಾಗುವ ಎಲ್ಲ ಲಕ್ಷಣಗಳು ಕಂಡು ಬಂದಿವೆ
ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮೀತಿಯ ಅಧ್ಯಕ್ಷರಾಗಿ ರಾಜ್ಯ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಕಳೆದ ಇಪ್ಪತ್ತು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸೇವೆ ಮಾಡಿರುವ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಮಹಿಳಾ ಕೋಟಾದಲ್ಲಿ ಸಚಿವ ಸ್ಥಾನ ನೀಡಲು ರಾಜ್ಯದ ಕಾಂಗ್ರೆಸ್ ಪಕ್ಷದ ನಾಯಕರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ
ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ಕಚೇರಿ ಕಟ್ಟಡ ನಿರ್ಮಿಸಲು ಶ್ರಮಿಸಿದ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಮಂತ್ರಿ ಸ್ಥಾನ ಕೊಡಿ ಎಂದು ಕೆಪಿಸಿಸಿ ಪದಾಧಿಕಾರಿಗಳು ಶಿಫಾರಸ್ಸು ಮಾಡಿದ್ದಾರೆ ಎಂದು ತಿಳಿದು ಬಂದಿದ್ದು ಬೆಳಗಾವಿ ಜಿಲ್ಲೆಯ ಖಾನಾಪೂರ ಕ್ಷೇತ್ರದಿಂದ ಚುನಾಯಿತರಾಗಿರುವ ಅಂಜಲಿ ನಿಂಬಾಳ್ಕರ್ ಕೂಡಾ ಮಹಿಳಾ ಕೋಟಾದಲ್ಲಿ ಮಂತ್ರಿಯಾಗಲು ಕಸರತ್ತು ನಡೆಸಿದ್ದಾರೆ ಮಹಾರಾಷ್ಟ್ರ ಮುಖ್ಯಮಂತ್ರಿ ಅಶೋಕ ಚವ್ಹಾನರ ಸಹೋದರಿಯ ಪುತ್ರಿಯಾಗಿರುವ ಡಾ ಅಂಜಲಿ ನಿಂಬಾಳ್ಕರ್ ಅವರನ್ನು ಮಂತ್ರಿ ಮಾಡುವಂತೆ ಮಹಾರಾಷ್ಟ್ರದ ಕಾಂಗ್ರೆಸ್ ನಾಯಕರು ಹೈಕಮಾಂಡ್ ಮೇಲೆ ಒತ್ತಡ ಹೇರಿದ್ದಾರೆ ಎಂದು ತಿಳಿದು ಬಂದಿದೆ
ಲಕ್ಷ್ಮೀ ಹೆಬ್ಬಾಳಕರ ಅವರನ್ನು ಮಂತ್ರಿ ಮಾಡುವಂತೆ ಕೆಪಿಸಿಸಿ ಮಹಿಳಾ ಘಟಕದ ರಾಜ್ಯ ಮಟ್ಟದ ಪದಾಧಿಕಾರಿಗಳು ಅವರ ಬೆನ್ನಿಗೆ ನಿಂತಿದ್ದಾರೆ ಎಂದು ತಿಳಿದು ಬಂದಿದ್ದು ಕಾಂಗ್ರೆಸ್ ಪಕ್ಷದ ಸಂಘಟನೆಯ ಮೂಲಕ ರಾಜ್ಯ ಮತ್ತು ರಾಷ್ಟ್ರ ಮಟ್ಟದ ನಾಯಕರ ಗಮನ ಸೆಳೆದಿರುವ ಲಕ್ಷ್ಮೀ ಹೆಬ್ಬಾಳಕರ ಪ್ರಬಲ ಲಿಂಗಾಯತ ಸಮಾಜಕ್ಕೆ ಸೇರಿದವರಾಗಿದ್ದು ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಸಚಿವ ಸ್ಥಾನ ನೀಡಿ ಕಾಂಗ್ರೆಸ್ ನಾಯಕರು ಒಂದೇ ಕಲ್ಲಿನಿಂದ ಎರಡು ಹಕ್ಕಿ ಹೊಡೆದು ಲಿಂಗಾಯತ ಕೋಟಾ ಮತ್ತು ಮಹಿಳಾ ಕೋಟಾ ಮುಗಿಸಲು ಜಾಣ ನಡೆ ಅನುಸರಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ
ಇದರ ಜೊತೆಗೆ ಕೇಂದ್ರದ ಮಾಜಿ ಸಚಿವ ಮುನಿಯಪ್ಪನವರ ಪುತ್ರಿ ರೂಪಾ ಕೂಡಾ ಮಹಿಳಾ ಕೋಟಾದಲ್ಲಿ ಮಂತ್ರಿಯಾಗುವ ಆಕಾಂಕ್ಷಿಯಾಗಿದ್ದು ಬೆಳಗಾವಿ ಜಿಲ್ಲೆಗೆ ಮಹಿಳಾ ಮಂತ್ರಿಯ ಭಾಗ್ಯ ಒದಗಿ ಬರುಬಹುದೇ ಎನ್ನುವದನ್ನು ಕಾದು ನೋಡಬೇಕಾಗಿದೆ
ಕಾಂಗ್ರೆಸ್ ಹೈಕಮಾಂಡ್ ಜೊತೆ ನೇರ ಮತ್ತು ನಿರಂತರ ಸಂಪರ್ಕ ಹೊಂದಿರುವ ಲಕ್ಷ್ಮೀ ಹೆಬ್ಬಾಳಕರ ಅವರ ಪರವಾಗಿ ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಸ್ಮೀತಾ ದೇವ ಬ್ಯಾಟಿಂಗ್ ನಡೆಸಿದ್ದು ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಮಂತ್ರಿ ಸ್ಥಾನ ಕೊಡಲೇ ಬೇಕು ಎಂದು ಸುಸ್ಮೀತಾ ದೇವ ದೆಲಿಯಲ್ಲಿ ಪಟ್ಟು ಹಿಡಿದಿದ್ದು ಮಹಿಳಾ ಕೋಟಾದಲ್ಲಿ ಮಂತ್ರಿಯಾಗುವ ಕಸರತ್ತಿನಲ್ಲಿ ಯಾರು ಮೇಲುಗೈ ಸಾಧಿಸುತ್ತಾರೆ ಎನ್ನುವದನ್ನು ಕಾದು ನೋಡಬೇಕಿದೆ ಮಹಿಳಾ ಕೋಟಾದಲ್ಲಿ ಕೈ ಯಾರ ಕೈ ಹಿಡಿಯಲಿದೆ ಎನ್ನುವ ವಿಷಯ ತೀವ್ರ ಕುತೂಹಲ ಕೆರಳಿಸಿದೆ